1 ಸಮುಯೇಲ 17:43 - ಕನ್ನಡ ಸಮಕಾಲಿಕ ಅನುವಾದ43 “ನೀನು ಕೋಲು ಹಿಡಿದುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ?” ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 “ನೀನು ಕೋಲುಹಿಡಿದು ನನ್ನ ಬಳಿಗೆ ಬರುವುದೇನು? ನಾನು ನಾಯಿಯೋ” ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 “ನೀನು ಕೋಲುಹಿಡಿದು ನನ್ನ ಬಳಿಗೆ ಬರಲು ನಾನು ನಾಯಿಯೆಂದು ತಿಳಿದುಕೊಂಡೆಯಾ?” ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ನೀನು ಕೋಲುಹಿಡಿದು ನನ್ನ ಬಳಿಗೆ ಬರುವದೇನು? ನಾನು ನಾಯಿಯೋ ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಗೊಲ್ಯಾತನು ದಾವೀದನಿಗೆ, “ಈ ಕೋಲು ಏನಕ್ಕೆ? ನಾಯಿಯನ್ನು ಓಡಿಸುವಂತೆ ನನ್ನನ್ನು ಓಡಿಸುವುದಕ್ಕೆ ಬಂದೆಯಾ?” ಎಂದು ಕೇಳಿದನು. ಬಳಿಕ ಗೊಲ್ಯಾತನು ತನ್ನ ದೇವರ ಹೆಸರುಗಳ ಮೇಲೆ ದಾವೀದನನ್ನು ಶಪಿಸಿದನು. ಅಧ್ಯಾಯವನ್ನು ನೋಡಿ |
ಅವರು ನನಗಿಂತ ಬಲವುಳ್ಳವರಾಗಿದ್ದರಿಂದ ಈಗ ನೀನು ದಯಮಾಡಿ ಬಂದು, ಈ ಜನರನ್ನು ನನಗಾಗಿ ಶಪಿಸು. ಆಗ ನಾನು ಅವರನ್ನು ಗೆದ್ದು, ದೇಶದೊಳಗಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ಏಕೆಂದರೆ ನೀನು ಯಾವನನ್ನು ಆಶೀರ್ವದಿಸುತ್ತೀಯೋ, ಅವನು ಆಶೀರ್ವಾದ ಹೊಂದಿರುವನು; ನೀನು ಯಾವನನ್ನು ಶಪಿಸುತ್ತೀಯೋ, ಅವನು ಶಾಪಗ್ರಸ್ತನಾಗಿರುವನು; ಎಂದು ನಾನು ಬಲ್ಲೆನು,” ಎಂದು ಹೇಳಿ ಕಳುಹಿಸಿದನು.