Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:44 - ಕನ್ನಡ ಸಮಕಾಲಿಕ ಅನುವಾದ

44 ದಾವೀದನಿಗೆ, “ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 “ಇಲ್ಲಿ ಬಾ, ನಿನ್ನ ಮಾಂಸವನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 “ಇಲ್ಲಿ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೆ, ಕಾಡಿನ ಮೃಗಗಳಿಗೆ ಹಂಚಿಕೊಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಇಲ್ಲಿ ಬಾ; ನಿನ್ನ ಮಾಂಸವನ್ನು ಮೃಗಪಕ್ಷಿಗಳಿಗೆ ಹಂಚಿಕೊಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಗೊಲ್ಯಾತನು ದಾವೀದನಿಗೆ, “ಬಾ ಇಲ್ಲಿಗೆ, ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಪ್ರಾಣಿಗಳಿಗೂ ಆಹಾರವನ್ನಾಗಿ ಮಾಡುತ್ತೇನೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:44
12 ತಿಳಿವುಗಳ ಹೋಲಿಕೆ  

ನಾಶನಕ್ಕೆ ಮುಂಚೆ ಮನುಷ್ಯನ ಹೃದಯವು ಗರ್ವಿಷ್ಠವಾಗಿರುವುದು; ಸನ್ಮಾನಕ್ಕೆ ಮುಂಚೆ ದೀನತ್ವವು ಬರುತ್ತದೆ.


“ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳ ಪಡದಿರಲಿ. ಬಲಿಷ್ಠನು ತನ್ನ ಬಲದಲ್ಲಿ ಹೆಚ್ಚಳ ಪಡದಿರಲಿ. ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳ ಪಡದಿರಲಿ.


ಯೆಹೋವ ದೇವರು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವರು; ನಾನು ನಿನ್ನನ್ನು ಹೊಡೆದುಬಿಟ್ಟು, ನಿನ್ನ ತಲೆಯನ್ನು ನಿನ್ನಿಂದ ತೆಗೆದುಹಾಕಿ, ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲರಲ್ಲಿ ದೇವರು ಇದ್ದಾರೆಂದು ಭೂಲೋಕದವರೆಲ್ಲರೂ ತಿಳಿಯುವರು.


ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾಧ್ವನಿಯಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಏರ್ಪಡಿಸುವ ಮಹಾಭೋಜನಕ್ಕೆ ಕೂಡಿಬನ್ನಿರಿ.


ಠಾಣ್ಯಕ್ಕೆ ಮನುಷ್ಯರು ಯೋನಾತಾನನಿಗೂ, ಅವನ ಆಯುಧ ಹೊರುವವನಿಗೂ, “ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ, ನಿಮಗೆ ಪಾಠ ಕಲಿಸುತ್ತೇನೆ,” ಎಂದು ಕೂಗಿದರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ನನ್ನ ಹಿಂದೆ ಏರಿ ಬಾ. ಏಕೆಂದರೆ ಯೆಹೋವ ದೇವರು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು,” ಎಂದನು.


ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತೆಗೆದುಕೊಂಡುಹೋಗಿ, ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಅದರ ಮೇಲೆ ಕುಳಿತುಕೊಂಡಳು. ಸುಗ್ಗಿಯ ದಿವಸ ಮೊದಲ್ಗೊಂಡು ಆಕಾಶದಿಂದ ಶವಗಳ ಮೇಲೆ ಮಳೆ ಬೀಳುವ ತನಕ, ಹಗಲಲ್ಲಿ ಆಕಾಶದ ಪಕ್ಷಿಗಳಾದರೂ, ರಾತ್ರಿಯಲ್ಲಿ ಕಾಡುಮೃಗಗಳಾದರೂ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು.


ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಒಪ್ಪಿಸುವೆನು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು