1 ಸಮುಯೇಲ 17:46 - ಕನ್ನಡ ಸಮಕಾಲಿಕ ಅನುವಾದ46 ಯೆಹೋವ ದೇವರು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವರು; ನಾನು ನಿನ್ನನ್ನು ಹೊಡೆದುಬಿಟ್ಟು, ನಿನ್ನ ತಲೆಯನ್ನು ನಿನ್ನಿಂದ ತೆಗೆದುಹಾಕಿ, ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲರಲ್ಲಿ ದೇವರು ಇದ್ದಾರೆಂದು ಭೂಲೋಕದವರೆಲ್ಲರೂ ತಿಳಿಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು. ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದು ಹಾಕಿ ಫಿಲಿಷ್ಟಿಯ ಸೈನ್ಯದ ಶವಗಳನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲರೊಳಗೆ ದೇವರಿದ್ದಾನೆಂಬುದು ಭೂಲೋಕದವರಿಗೆಲ್ಲಾ ತಿಳಿದುಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಅವರು ಈ ದಿನ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವರು. ನಾನು ನಿನ್ನನ್ನು ಕೊಂದು, ನಿನ್ನ ತಲೆಯನ್ನು ಕಡಿದು, ಫಿಲಿಷ್ಟಿಯ ಸೈನ್ಯದ ಶವಗಳನ್ನು ಆಕಾಶದ ಪಕ್ಷಿಗಳಿಗೂ ವನ್ಯಮೃಗಗಳಿಗೂ ಹಂಚಿಕೊಡುವೆನು. ಇದರಿಂದ ಇಸ್ರಯೇಲರ ಸಂಗಡ ದೇವರಿದ್ದಾರೆಂಬುದು ಜಗತ್ತಿಗೆಲ್ಲಾ ತಿಳಿದುಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು; ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದುಹಾಕಿ ಫಿಲಿಷ್ಟಿಯಸೈನ್ಯದ ಶವಗಳನ್ನು ಮೃಗಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲ್ಯರೊಳಗೆ ದೇವರಿರುತ್ತಾನೆಂಬದು ಭೂಲೋಕದವರಿಗೆಲ್ಲಾ ತಿಳಿದು ಬರುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಇಂದು ನಾನು ನಿನ್ನನ್ನು ಸೋಲಿಸಲು ಯೆಹೋವನು ಸಹಾಯಮಾಡುತ್ತಾನೆ. ನಾನು ನಿನ್ನನ್ನು ಕೊಲ್ಲುತ್ತೇನೆ. ಇಂದು ನಾನು ನಿನ್ನ ತಲೆಯನ್ನು ಕತ್ತರಿಸಿ ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಮೃಗಗಳಿಗೂ ಆಹಾರವನ್ನಾಗಿ ಕೊಡುತ್ತೇನೆ. ಉಳಿದೆಲ್ಲ ಫಿಲಿಷ್ಟಿಯರಿಗೂ ಸಹ ನಾವು ಅದೇ ರೀತಿ ಮಾಡುತ್ತೇವೆ. ಆಗ ಇಸ್ರೇಲಿನಲ್ಲಿ ದೇವರಿದ್ದಾನೆಂಬುದು ಇಡೀ ಜಗತ್ತಿಗೆಲ್ಲ ಗೊತ್ತಾಗುವುದು! ಅಧ್ಯಾಯವನ್ನು ನೋಡಿ |