Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:47 - ಕನ್ನಡ ಸಮಕಾಲಿಕ ಅನುವಾದ

47 ಯೆಹೋವ ದೇವರು ಖಡ್ಗದಿಂದಲೂ, ಈಟಿಯಿಂದಲೂ ರಕ್ಷಿಸುವುದಿಲ್ಲ ಎಂಬುದು ಈ ಸಮೂಹವೆಲ್ಲಾ ತಿಳಿದುಕೊಳ್ಳುವುದು. ಏಕೆಂದರೆ ಯುದ್ಧವು ಯೆಹೋವ ದೇವರದ್ದು, ಅವರು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಯೆಹೋವನು ಈಟಿಕತ್ತಿಗಳಿಲ್ಲದೇ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರಿಗೆಲ್ಲಾ ತಿಳಿದುಬರುವುದು. ಯಾಕೆಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ. ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಈಟಿ, ಕತ್ತಿಗಳಿಲ್ಲದೆ ಸರ್ವೇಶ್ವರ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರೆಲ್ಲರಿಗೆ ಗೊತ್ತಾಗುವುದು. ಏಕೆಂದರೆ ಸಮರದ ಪರಿಣಾಮ ಇರುವುದು ಸರ್ವೇಶ್ವರನ ಕೈಯಲ್ಲಿ; ಅವರು ತಪ್ಪದೆ ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಯೆಹೋವನು ಈಟಿ ಕತ್ತಿಗಳಿಲ್ಲದೆ ರಕ್ಷಿಸಬಲ್ಲನೆಂಬದು ಇಲ್ಲಿ ಕೂಡಿರುವವರಿಗೆಲ್ಲಾ ಗೊತ್ತಾಗುವದು; ಯಾಕಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ; ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಜನರನ್ನು ರಕ್ಷಿಸಲು ಯೆಹೋವನಿಗೆ ಕತ್ತಿ ಮತ್ತು ಈಟಿಗಳ ಅಗತ್ಯವಿಲ್ಲ ಎಂಬುದು ಇಲ್ಲಿ ಸೇರಿರುವ ಜನರಿಗೆಲ್ಲ ತಿಳಿಯುತ್ತದೆ. ಇದು ಯೆಹೋವನ ಯುದ್ಧ. ಫಿಲಿಷ್ಟಿಯರನ್ನೆಲ್ಲ ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:47
15 ತಿಳಿವುಗಳ ಹೋಲಿಕೆ  

ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಆದರೆ ನಾನು ಯೆಹೂದದ ಮನೆತನದವರನ್ನು ಪ್ರೀತಿಸಿ ಅವರನ್ನು ಬಿಲ್ಲುಬಾಣ, ಖಡ್ಗ, ಕಾಳಗ, ಕುದುರೆ ರಾಹುತರು ಇವುಗಳಿಂದಲ್ಲ, ಅವರನ್ನು ಅವರ ದೇವರಾದ ನಾನೇ ಯೆಹೋವ ದೇವರೇ ರಕ್ಷಿಸುವೆನು,” ಎಂದು ಹೇಳಿದರು.


ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯುವಕನಿಗೆ, “ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿ ಹೋಗೋಣ ಬಾ; ಒಂದು ವೇಳೆ ಯೆಹೋವ ದೇವರು ನಮಗೋಸ್ಕರ ಕಾರ್ಯವನ್ನು ನಡೆಸುವರು. ಏಕೆಂದರೆ ಅನೇಕ ಜನರಿಂದಲಾದರೂ, ಸ್ವಲ್ಪ ಜನರಿಂದಲಾದರೂ ರಕ್ಷಿಸುವುದಕ್ಕೆ ಯೆಹೋವ ದೇವರಿಗೆ ಅಸಾಧ್ಯವಲ್ಲ,” ಎಂದನು.


ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.


ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ಆಗ ಸೌಲನು, “ನಾನು ಅವನ ಮೇಲೆ ವಿರೋಧವಾಗಿ ಕೈಯೆತ್ತಬಾರದು. ಫಿಲಿಷ್ಟಿಯರು ಅದನ್ನು ಮಾಡಲಿ,” ಎಂದು ತನ್ನಷ್ಟಕ್ಕೆ ಅಂದುಕೊಂಡು ದಾವೀದನಿಗೆ, “ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು, ನೀನು ನನಗೋಸ್ಕರ ಪರಾಕ್ರಮಶಾಲಿಯಾಗಿದ್ದು ಯೆಹೋವ ದೇವರ ಯುದ್ಧಗಳನ್ನು ನಡೆಸು,” ಎಂದನು.


ಆಗ ನಾಮಾನನೂ, ಅವನ ಸಮಸ್ತ ಸೈನ್ಯವೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ಬಂದು ನಿಂತು, “ಇಸ್ರಾಯೇಲಿನಲ್ಲಿರುವ ದೇವರ ಹೊರತು ಭೂಮಿಯಲ್ಲೆಲ್ಲೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು. ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತೆಗೆದುಕೋ,” ಎಂದನು.


ಯೆಹೋವ ದೇವರು ಯೆಹೋಶುವನಿಗೆ, “ನೀನು ಅವರಿಗೆ ಭಯಪಡಬೇಡ, ನಾನು ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ. ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವುದಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು