1 ಸಮುಯೇಲ 17:51 - ಕನ್ನಡ ಸಮಕಾಲಿಕ ಅನುವಾದ51 ದಾವೀದನ ಕೈಯಲ್ಲಿ ಖಡ್ಗ ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು, ಅವನ ಖಡ್ಗವನ್ನು ತೆಗೆದುಕೊಂಡು, ಅದನ್ನು ಒರೆಯಿಂದ ಕಿತ್ತು, ಅವನನ್ನು ಕೊಂದು, ಅವನ ತಲೆಯನ್ನು ಕಡಿದುಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತು ಹೋದದ್ದನ್ನು ಕಂಡಾಗ ಓಡಿಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಈ ಪ್ರಕಾರ ದಾವೀದನು ಕತ್ತಿಯಿಂದಲ್ಲ ಬರೀ ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಸೋಲಿಸಿ, ಕೊಂದು ಹಾಕಿದನು ಫಿಲಿಷ್ಟಿಯರು ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಹೀಗೆ ದಾವೀದನು ಕತ್ತಿಯಿಂದಲ್ಲ, ಬರೀ ಒಂದು ಕವಣೆಕಲ್ಲಿನಿಂದ ಆ ಫಿಲಿಷ್ಟಿಯನನ್ನು ಸೋಲಿಸಿ ಕೊಂದುಹಾಕಿದನು. ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಫಿಲಿಷ್ಟಿಯರು ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಈ ಪ್ರಕಾರ ದಾವೀದನು ಕತ್ತಿಯಿಂದಲ್ಲ, ಬರೀ ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಸೋಲಿಸಿ ಕೊಂದುಹಾಕಿದನು. ಫಿಲಿಷ್ಟಿಯರು ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಓಡಿಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ದಾವೀದನು ಓಡುತ್ತಾ ಹೋಗಿ ಫಿಲಿಷ್ಟಿಯನ ಪಕ್ಕದಲ್ಲಿ ನಿಂತುಕೊಂಡನು. ದಾವೀದನು ಗೊಲ್ಯಾತನ ಕತ್ತಿಯನ್ನು ಒರೆಯಿಂದ ತೆಗೆದು ಅದೇ ಕತ್ತಿಯಿಂದ ಅವನ ತಲೆಯನ್ನು ಕತ್ತರಿಸಿ ಹಾಕಿದನು. ದಾವೀದನು ಈ ರೀತಿಯಲ್ಲಿ ಗೊಲ್ಯಾತನನ್ನು ಕೊಂದನು. ಫಿಲಿಷ್ಟಿಯರು ತಮ್ಮ ನಾಯಕನು ಸತ್ತದ್ದನ್ನು ನೋಡಿದಾಗ ಹಿಂದಿರುಗಿ ಓಡಿಹೋದರು. ಅಧ್ಯಾಯವನ್ನು ನೋಡಿ |