Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:52 - ಕನ್ನಡ ಸಮಕಾಲಿಕ ಅನುವಾದ

52 ಇಸ್ರಾಯೇಲರೂ, ಯೆಹೂದದ ಜನರೂ ಎದ್ದು ಆರ್ಭಟಿಸಿ, ತಗ್ಗಿನ ಮೇರೆಯವರೆಗೂ, ಎಕ್ರೋನಿನ ಬಾಗಿಲಿನವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದ್ದರಿಂದ ಹತರಾದ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ಎಕ್ರೋನಿನವರೆಗೂ ಬಿದ್ದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಇಸ್ರಾಯೇಲರು ಯೆಹೂದ್ಯರು ಎದ್ದು ಆರ್ಭಟಿಸಿ ಫಿಲಿಷ್ಟಿಯರನ್ನು ತಗ್ಗಿನ ದಾರಿಯವರೆಗೂ ಎಕ್ರೋನಿನ ಬಾಗಿಲುಗಳವರೆಗೂ ಹಿಂದಟ್ಟಿದರು. ಫಿಲಿಷ್ಟಿಯರ ಹೆಣಗಳು ಶಾರಯಿಮಿನಿಂದ ಗತ್ ಎಕ್ರೋನ್ ಪಟ್ಟಣಗಳವರೆಗೂ ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಇಸ್ರಯೇಲರೂ ಯೆಹೂದ್ಯರೂ ಎದ್ದು ಆರ್ಭಟಿಸಿ ಫಿಲಿಷ್ಟಿಯರನ್ನು ಕಣಿವೆಯ ದಾರಿಯವರೆಗೂ ಎಕ್ರೋನಿನ ಬಾಗಿಲುಗಳವರೆಗೂ ಹಿಂದಟ್ಟಿದರು. ಫಿಲಿಷ್ಟಿಯರ ಹೆಣಗಳು ಶಾರಯಿಮಿನಿಂದ ಗತ್, ಎಕ್ರೋನ್ ಪಟ್ಟಣಗಳವರೆಗೂ ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಇಸ್ರಾಯೇಲ್ಯರೂ ಯೆಹೂದ್ಯರೂ ಎದ್ದು ಆರ್ಭಟಿಸಿ ಫಿಲಿಷ್ಟಿಯರನ್ನು ತಗ್ಗಿನ ದಾರಿಯವರೆಗೂ ಎಕ್ರೋನಿನ ಬಾಗಲುಗಳವರೆಗೂ ಹಿಂದಟ್ಟಿದರು. ಫಿಲಿಷ್ಟಿಯರ ಹೆಣಗಳು ಶಾರಯಿವಿುನಿಂದ ಗತ್ ಎಕ್ರೋನ್ ಪಟ್ಟಣಗಳವರೆಗೂ ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಇಸ್ರೇಲಿನ ಮತ್ತು ಯೆಹೂದದ ಸೈನಿಕರು ಆರ್ಭಟಮಾಡುತ್ತಾ ಫಿಲಿಷ್ಟಿಯರ ಬೆನ್ನಟ್ಟಿದರು. ಇಸ್ರೇಲರು ಫಿಲಿಷ್ಟಿಯರನ್ನು ಗತ್ ನಗರದ ಗಡಿಯವರೆಗೂ ಎಕ್ರೋನಿನ ಬಾಗಿಲುಗಳ ವರೆಗೂ ಅಟ್ಟಿಸಿಕೊಂಡು ಹೋದರು. ಅವರು ಅನೇಕ ಫಿಲಿಷ್ಟಿಯರನ್ನು ಕೊಂದರು. ಅವರ ಶವಗಳು ಶಾರಯಿಮಿನ ಮಾರ್ಗದುದ್ದಕ್ಕೂ ಗತ್ ಮತ್ತು ಎಕ್ರೋನ್‌ಗಳವರೆಗೆ ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:52
10 ತಿಳಿವುಗಳ ಹೋಲಿಕೆ  

ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೂ, ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯಬ್ನೆಯೇಲಿಗೆ ಹೊರಟು ಸಮುದ್ರ ತೀರದಲ್ಲಿ ಮುಗಿಯುತ್ತದೆ.


ಎಲಿಯಾಜರನು ಎದ್ದು ಖಡ್ಗ ಹಿಡಿದ ತನ್ನ ಕೈ ದಣಿದು ಮರಗಟ್ಟಿ ಹೋಗುವವರೆಗೂ ಫಿಲಿಷ್ಟಿಯರನ್ನು ಸಂಹರಿಸುತ್ತಿದ್ದನು. ಆ ದಿನ ಯೆಹೋವ ದೇವರು ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ಸೈನಿಕರು ಸುಲಿದುಕೊಳ್ಳುವುದಕ್ಕೆ ಮಾತ್ರ ಅವನ ಹಿಂದೆ ಹಿಂದಿರುಗಿದರು.


ಇಸ್ರಾಯೇಲರು ನಫ್ತಾಲಿಯಿಂದಲೂ, ಆಶೇರನಿಂದಲೂ, ಸಮಸ್ತ ಮನಸ್ಸೆಯವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.


ಇಸ್ರಾಯೇಲರು ಫಿಲಿಷ್ಟಿಯರನ್ನು ಓಡಿಸಿಬಿಟ್ಟ ತರುವಾಯ ತಿರುಗಿಬಂದು ಅವರ ಡೇರೆಗಳನ್ನು ಸೂರೆಮಾಡಿದರು.


ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೆಯಕಳುಹಿಸಿ ಅವರಿಗೆ, “ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದರು. ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವು ಗತ್ ಊರಿಗೆ ಕಳುಹಿಸಬೇಕು,” ಎಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.


ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ, ಎಕ್ರೋನ್ಯರು, “ನಮ್ಮನ್ನೂ, ನಮ್ಮ ಜನರನ್ನೂ ಕೊಂದುಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರು,” ಎಂದು ಕೂಗಿ ಹೇಳಿದರು.


ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ, ರಥಗಳನ್ನೂ ಹೊಡೆದು, ಅರಾಮ್ಯರನ್ನು ಮಹಾ ಸಂಹಾರದಿಂದ ನಾಶಮಾಡಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು