Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:7 - ಕನ್ನಡ ಸಮಕಾಲಿಕ ಅನುವಾದ

7 ಅವನ ಈಟಿಯ ಕೋಲು ನೇಕಾರರ ಕುಂಟೆಯಷ್ಟು ಗಾತ್ರದಾಗಿತ್ತು. ಅವನ ಈಟಿಯ ಅಲಗು ಏಳು ಕಿಲೋಗ್ರಾಂ ತೂಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನ ಬರ್ಜಿಯ ಹಿಡಿಕೆಯು ನೇಯಿಗಾರ ಕುಂಟೆಯಷ್ಟು ಗಾತ್ರವಾಗಿತ್ತು. ಅದರ ಅಲಗು ಆರುನೂರು ತೊಲೆ ಕಬ್ಬಿಣದಿಂದ ಮಾಡಿದ್ದು. ಅವನ ಗುರಾಣಿಯನ್ನು ಹೊರುವವನು ಅವನ ಮುಂದೆ ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವನ ಬರ್ಜಿಯ ಕೋಲು ನೆಯ್ಗೆಗಾರರ ಕುಂಟೆಯಷ್ಟು ಗಾತ್ರದಾಗಿತ್ತು. ಅದರ ಅಲಗು ಏಳು ಕಿಲೋಗ್ರಾಮಿನಷ್ಟು ಭಾರವಾಗಿತ್ತು. ಅವನ ಗುರಾಣಿಯನ್ನು ಹೊರುವವನು ಅವನ ಮುಂದೆ ಮುಂದೆ ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನ ಬರ್ಜಿಯ ಹಿಡಿಕೆಯು ನೇಯಿಗಾರರ ಕುಂಟೆಯಷ್ಟು ಗಾತ್ರವಾಗಿತ್ತು. ಅದರ ಅಲಗು ಆರುನೂರು ತೊಲೆ ಕಬ್ಬಿಣದಿಂದ ಮಾಡಿದ್ದು. ಅವನ ಗುರಾಣಿಯನ್ನು ಹೊರುವವನು ಅವನ ಮುಂದೆ ಮುಂದೆ ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯ ಗಾತ್ರದಷ್ಟಿತ್ತು. ಆ ಬರ್ಜಿಯ ಅಲಗಿನ ಭಾರವು ಹದಿನೈದು ಪೌಂಡ್‌ಗಳಷ್ಟಿತ್ತು. ಗೊಲ್ಯಾತನ ಗುರಾಣಿಯನ್ನು ಹೊತ್ತಿದ್ದ ಅವನ ಸಹಾಯಕನು ಅವನ ಮುಂದೆ ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:7
5 ತಿಳಿವುಗಳ ಹೋಲಿಕೆ  

ಅನಂತರ ಫಿಲಿಷ್ಟಿಯರ ಸಂಗಡ ಗೋಬದಲ್ಲಿ ಯುದ್ಧ ಉಂಟಾದಾಗ, ಬೇತ್ಲೆಹೇಮಿನವನಾದ ಯಾಯೀರನ ಮಗನಾದ ಎಲ್ಹನಾನನು ಗಿತ್ತೀಯನಾದ ಗೊಲ್ಯಾತನ ಸಹೋದರರನ್ನು ಕೊಂದನು. ಈ ಗೊಲ್ಯಾತನ ಈಟಿಯ ಹಿಡಿಕೆಯು ನೇಯುವವರ ಕುಂಟೆ ಕಟ್ಟಿಗೆಗೆ ಸಮನಾಗಿತ್ತು.


ಅವನು ಏಳುವರೆ ಅಡಿ ಎತ್ತರವಾಗಿದ್ದ ಒಬ್ಬ ಈಜಿಪ್ಟಿನವನನ್ನು ಹೊಡೆದುಬಿಟ್ಟನು; ಆ ಈಜಿಪ್ಟಿನವನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಷ್ಟು ದಪ್ಪವಾದ ಒಂದು ಈಟಿ ಇದ್ದರೂ, ತಾನು ಒಂದು ಕೋಲು ಹಿಡಿದುಕೊಂಡು ಅವನ ಬಳಿಗೆ ಹೋಗಿ, ಈಜಿಪ್ಟಿನವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು, ಅವನ ಈಟಿಯಿಂದಲೇ ಅವನನ್ನು ಕೊಂದುಹಾಕಿದನು.


ಫಿಲಿಷ್ಟಿಯನು ನಡೆದು ದಾವೀದನ ಬಳಿಗೆ ಸಮೀಪಿಸಿ ಬಂದನು.


ಅನಂತರ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾದಾಗ, ಯಾಯೀರನ ಮಗನಾದ ಎಲ್ಹನಾನನು ಗಿತ್ತೀಯನಾದ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಈ ಗೊಲ್ಯಾತನ ಈಟಿಯ ಹಿಡಿಕೆಯು ನೇಯುವವರ ಕುಂಟೆ ಕಟ್ಟಿಗೆಗೆ ಸಮನಾಗಿತ್ತು.


ಆಗ ಮುನ್ನೂರು ಬೆಳ್ಳಿ ನಾಣ್ಯದ ತೂಕದ ಕಂಚು ಈಟಿಯುಳ್ಳ, ಹೊಸ ಖಡ್ಗವನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ರೆಫಾಯನ ಮಕ್ಕಳಲ್ಲಿ ಇಷ್ಬೀಬೆನೋಬನು ದಾವೀದನನ್ನು ಕೊಲ್ಲಬೇಕೆಂದಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು