Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:8 - ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ಖೇಡ್ಯ ಹಿಡಿಯುವವನು ಅವನ ಮುಂದೆ ನಡೆದನು. ಅವನು ನಿಂತು ಇಸ್ರಾಯೇಲ್ ಸೈನ್ಯಗಳಿಗೆ ಕೂಗಿ ಹೇಳಿದ್ದೇನೆಂದರೆ, “ಏಕೆ ನೀವು ವ್ಯೂಹ ಕಟ್ಟಿಕೊಳ್ಳ ಹೊರಟಿರಿ? ನಾನು ಫಿಲಿಷ್ಟಿಯನಲ್ಲವೋ? ನೀವು ಸೌಲನ ಸೇವಕರಲ್ಲವೋ? ನೀವು ನಿಮಗೋಸ್ಕರ ಒಬ್ಬನನ್ನು ಆಯ್ದುಕೊಳ್ಳಿರಿ. ಅವನು ನನ್ನ ಮುಂದೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ನಿಂತು ಇಸ್ರಾಯೇಲ ಸೈನ್ಯದವರನ್ನು ಕೂಗಿ ಅವರಿಗೆ, “ನೀವು ಯುದ್ಧಮಾಡಲು ಬಂದದ್ದೇಕೆ? ನಾನು ಫಿಲಿಷ್ಟಿಯನು. ನೀವು ಸೌಲನ ಸೇವಕರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಗೊಲ್ಯಾತನು ಅಲ್ಲೆ ನಿಂತು, ಇಸ್ರಯೇಲರ ಸೈನ್ಯದತ್ತ ಹೀಗೆಂದು ಗರ್ಜಿಸಿದನು: “ನೀವು ಸಜ್ಜಾಗಿ ಬಂದಿರುವುದು ಯುದ್ಧಮಾಡಲಿಕ್ಕೋ? ನಾನು ಫಿಲಿಷ್ಟಿಯನು. ನೀವು ಆ ಸೌಲನ ಗುಲಾಮರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ನಿಂತು ಇಸ್ರಾಯೇಲ್‍ಸೈನ್ಯದವರನ್ನು ಕೂಗಿ ಅವರಿಗೆ - ನೀವು ಯುದ್ಧಮಾಡಬಂದದ್ದೇಕೆ? ನಾನು ಫಿಲಿಷ್ಟಿಯನು, ನೀವು ಸೌಲನ ಸೇವಕರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಗೊಲ್ಯಾತನು ಪ್ರತಿದಿನ ಹೊರಕ್ಕೆ ಬಂದು ಇಸ್ರೇಲಿನ ಸೈನಿಕರನ್ನು ಕಂಡು ಆರ್ಭಟಿಸುತ್ತಿದ್ದನು. ಅವನು, “ನೀವೆಲ್ಲ ಸಾಲಾಗಿನಿಂತು ಯುದ್ಧಕ್ಕೆ ಸಿದ್ಧರಾಗಿರುವುದೇಕೆ? ನೀವು ಸೌಲನ ಸೇವಕರು. ನಾನು ಫಿಲಿಷ್ಟಿಯನು, ನೀವು ಒಬ್ಬನನ್ನು ಆರಿಸಿ ನನ್ನೊಡನೆ ಹೋರಾಡಲು ಕಳುಹಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:8
5 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆಯ್ದುಕೊಳ್ಳುವನು. ನೀವು ಅವನಿಗೆ ದಾಸರಾಗುವಿರಿ.


ಆಗ ಯೋವಾಬನು, “ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ. ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರೂ ನನ್ನ ಒಡೆಯನ ಸೇವಕರಲ್ಲವೋ, ನನ್ನ ಒಡೆಯನು ಈ ಕಾರ್ಯವನ್ನು ಅಪೇಕ್ಷಿಸುವುದು ಏಕೆ? ಇದು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವುದು,” ಎಂದನು.


ಊರೀಯನು ದಾವೀದನಿಗೆ, “ಮಂಜೂಷವೂ, ಇಸ್ರಾಯೇಲಿನವರೂ, ಯೆಹೂದದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ; ನನ್ನ ಒಡೆಯನಾದ ಯೋವಾಬನೂ, ನನ್ನ ಒಡೆಯನ ಸೇವಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವುದಕ್ಕೂ, ಕುಡಿಯುವುದಕ್ಕೂ, ನನ್ನ ಹೆಂಡತಿಯ ಸಂಗಡ ಮಲಗುವುದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವುದಿಲ್ಲ,” ಎಂದನು.


ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ, “ಈ ಫಿಲಿಷ್ಟಿಯನನ್ನು ಕೊಂದು, ಇಸ್ರಾಯೇಲಿನ ಮೇಲಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಸಿಕ್ಕುವುದು? ಏಕೆಂದರೆ ಸುನ್ನತಿ ಇಲ್ಲದ ಆ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸುವುದಕ್ಕೆ ಎಷ್ಟರವನು,” ಎಂದನು.


ಅವನು ಇವರ ಸಂಗಡ ಮಾತನಾಡಿಕೊಳ್ಳುತ್ತಾ ಇರುವಾಗ, ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ಫಿಲಿಷ್ಟಿಯರ ಸೈನ್ಯದಿಂದ ಹೊರಟು, ಮೊದಲಿನ ಹಾಗೆಯೇ ಮಾತನಾಡಿದನು. ಆ ಮಾತುಗಳನ್ನು ದಾವೀದನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು