1 ಸಮುಯೇಲ 17:9 - ಕನ್ನಡ ಸಮಕಾಲಿಕ ಅನುವಾದ9 ಅವನು ನನ್ನ ಸಂಗಡ ಯುದ್ಧಮಾಡಿ ನನ್ನನ್ನು ಕೊಂದರೆ, ನಾವು ನಿಮಗೆ ಸೇವಕರಾಗುವೆವು. ಆದರೆ ನಾನು ಅವನನ್ನು ಸೋಲಿಸಿ ಕೊಂದರೆ ನೀವು ನಮಗೆ ಸೇವಕರಾಗಿದ್ದು ನಮ್ಮನ್ನು ಸೇವಿಸಬೇಕು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವನು ನನ್ನೊಡನೆ ಯುದ್ಧಮಾಡಿ ನನ್ನನ್ನು ಕೊಂದರೆ ನಾವು ನಿಮಗೇ ದಾಸರಾಗಿರುವೆವು. ಆದರೆ ನಾನು ಅವನನ್ನು ಸೋಲಿಸಿ ಕೊಂದರೆ ಆಗ ನೀವು ನಮ್ಮ ಗುಲಾಮರಾಗಿ ನಮ್ಮನ್ನು ಸೇವೆಮಾಡುವವರಾಗುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವನು ನನ್ನೊಡನೆ ಯುದ್ಧಮಾಡಿ ನನ್ನನ್ನು ಕೊಲ್ಲಲಿ; ಆಗ ನಮ್ಮವರು ನಿಮ್ಮ ಗುಲಾಮರಾಗುವರು. ನಾನು ಅವನನ್ನು ಸೋಲಿಸಿ ಕೊಂದರೆ ನೀವು ನಮಗೆ ಗುಲಾಮರಾಗಿ ನಮಗೆ ಸೇವೆಮಾಡಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವನು ನನ್ನೊಡನೆ ಯುದ್ಧಮಾಡಿ ನನ್ನನ್ನು ಸೋಲಿಸಿ ಕೊಂದರೆ ನಮ್ಮವರು ನಿಮ್ಮ ಸೇವಕರಾಗುವರು; ನಾನು ಅವನನ್ನು ಸೋಲಿಸಿ ಕೊಂದರೆ ನೀವು ನಮ್ಮ ದಾಸರಾಗಿ ನಮ್ಮನ್ನು ಸೇವಿಸಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವನು ನನ್ನನ್ನು ಕೊಂದುಬಿಟ್ಟರೆ, ನಾವು ಅಂದರೆ ಫಿಲಿಷ್ಟಿಯರೆಲ್ಲ ನಿಮ್ಮ ಗುಲಾಮರಾಗುತ್ತೇವೆ. ಆದರೆ ನಾನು ಅವನನ್ನು ಸೋಲಿಸಿ ಕೊಂದುಬಿಟ್ಟರೆ, ನೀವೆಲ್ಲ ನಮಗೆ ಗುಲಾಮರಾಗಿದ್ದು ನಮ್ಮ ಸೇವೆಯನ್ನು ಮಾಡಬೇಕು” ಎಂದು ಆರ್ಭಟಿಸಿದನು. ಅಧ್ಯಾಯವನ್ನು ನೋಡಿ |