1 ಸಮುಯೇಲ 18:20 - ಕನ್ನಡ ಸಮಕಾಲಿಕ ಅನುವಾದ20 ಸೌಲನ ಮತ್ತೊಬ್ಬ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಅದು ಸೌಲನಿಗೆ ತಿಳಿದುಬಂದಾಗ, ಆ ಕಾರ್ಯವು ಅವನಿಗೆ ಮೆಚ್ಚಿಕೆಯಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಸೌಲನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಇದು ಸೌಲನಿಗೆ ತಿಳಿದಾಗ ಅವನಿಗೆ ಸಂತೋಷವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇತ್ತ ಸೌಲನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸತೊಡಗಿದಳು. ಈ ವಿಷಯ ಸೌಲನಿಗೆ ತಿಳಿದುಬಂದಾಗ ಅವನಿಗೆ ಸಂತೋಷ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಸೌಲನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಇದು ಸೌಲನಿಗೆ ತಿಳಿದಾಗ ಅವನಿಗೆ ಸಂತೋಷವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಸೌಲನ ಮತ್ತೊಬ್ಬ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಮೀಕಲಳು ದಾವೀದನನ್ನು ಪ್ರೀತಿಸುತ್ತಿರುವುದನ್ನು ಸೌಲನಿಗೆ ಜನರು ತಿಳಿಸಿದರು. ಸೌಲನಿಗೆ ಇದು ಸಂತಸವನ್ನು ಉಂಟುಮಾಡಿತು. ಅಧ್ಯಾಯವನ್ನು ನೋಡಿ |
ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ತಿರುಗಿದಾಗ, ಸೌಲನ ಮಗಳಾದ ಮೀಕಲಳು ದಾವೀದನಿಗೆ ಎದುರಾಗಿ ಬಂದು, “ನಿಷ್ಪ್ರಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿ ಹಾಕಿದ ಹಾಗೆಯೇ, ಈ ಹೊತ್ತು ತನ್ನ ಸೇವಕರ ದಾಸಿಯರ ಕಣ್ಣು ಮುಂದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಹೊಂದಿದನು?” ಎಂದಳು.