Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:4 - ಕನ್ನಡ ಸಮಕಾಲಿಕ ಅನುವಾದ

4 ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ, ತನ್ನ ವಸ್ತ್ರಗಳನ್ನೂ, ಖಡ್ಗವನ್ನೂ, ಬಿಲ್ಲನ್ನೂ, ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಲ್ಲದೆ ಅವನು ತನ್ನ ಮೈಮೇಲಿದ್ದ ನಿಲುವಂಗಿಯನ್ನು ತನ್ನ ಯುದ್ಧವಸ್ತ್ರಗಳನ್ನು, ಕತ್ತಿ, ಬಿಲ್ಲು, ನಡುಕಟ್ಟುಗಳನ್ನೂ ದಾವೀದನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇದಲ್ಲದೆ ತನ್ನ ಮೈಮೇಲಿದ್ದ ನಿಲುವಂಗಿಯನ್ನು, ಯುದ್ಧವಸ್ತ್ರಗಳನ್ನು ಹಾಗು ಕತ್ತಿ, ಬಿಲ್ಲು, ನಡುಕಟ್ಟುಗಳನ್ನು ತೆಗೆದು ದಾವೀದನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ಅವನು ತನ್ನ ಮೈಮೇಲಿದ್ದ ನಿಲುವಂಗಿಯನ್ನೂ ತನ್ನ ಯುದ್ಧವಸ್ತ್ರಗಳನ್ನೂ ಕತ್ತಿ ಬಿಲ್ಲು ನಡುಕಟ್ಟುಗಳನ್ನೂ ದಾವೀದನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋನಾತಾನನು ತಾನು ಧರಿಸಿದ್ದ ಮೇಲಂಗಿಯನ್ನೂ ತನ್ನ ಸಮವಸ್ತ್ರಗಳನ್ನೂ ತನ್ನ ಬಿಲ್ಲನ್ನೂ ಕತ್ತಿಯನ್ನೂ ಸೊಂಟಪಟ್ಟಿಯನ್ನೂ ದಾವೀದನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:4
10 ತಿಳಿವುಗಳ ಹೋಲಿಕೆ  

ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು, ನಾರುಮಡಿಯ ವಸ್ತ್ರವನ್ನು ತೊಡಿಸಿ, ಚಿನ್ನದ ಸರಪಣಿಯನ್ನು ಅವನ ಕೊರಳಿಗೆ ಹಾಕಿದನು.


“ಆದರೆ ತಂದೆಯು ತನ್ನ ಸೇವಕರಿಗೆ, ‘ಶ್ರೇಷ್ಠವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಇವನ ಬೆರಳಿಗೆ ಉಂಗುರವನ್ನು ತೊಡಿಸಿರಿ, ಪಾದಗಳಿಗೆ ಪಾದರಕ್ಷೆಗಳನ್ನೂ ಮೆಟ್ಟಿಸಿರಿ.


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಸೌಲನು ದಾವೀದನಿಗೆ ತನ್ನ ಆಯುಧಗಳನ್ನು ಧರಿಸಲು ಹೇಳಿ, ಅವನ ತಲೆಯ ಮೇಲೆ ಒಂದು ಕಂಚಿನ ಶಿರಸ್ತ್ರಾಣವನ್ನು ಇಟ್ಟು, ಅವನಿಗೆ ಕವಚವನ್ನು ತೊಡಿಸಿದನು.


ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ, ಅಲ್ಲಿಗೆ ಹೋಗಿ ಅವನು ಎಲ್ಲವನ್ನು ವಿವೇಕದಿಂದ ಬಹು ಯಶಸ್ವಿಯಾಗಿ ಮಾಡುತ್ತಿದ್ದನು. ಆದ್ದರಿಂದ ಸೌಲನು ಅವನನ್ನು ಸೈನ್ಯದ ಮೇಲೆ ಅಧಿಕಾರಿಯಾಗಿ ನೇಮಿಸಿದನು. ಇದು ಸಮಸ್ತ ಜನರಿಗೂ, ಸೌಲನ ಸಮಸ್ತ ಸೇವಕರಿಗೂ ಮೆಚ್ಚಿಕೆಯಾಗಿತ್ತು.


“ಹತರಾದವರ ರಕ್ತದಿಂದಲೂ, ಯೋನಾತಾನನ ಬಿಲ್ಲು ಹಿಂದಕ್ಕೆ ತಿರುಗಲಿಲ್ಲ. ಸೌಲನ ಖಡ್ಗ ತೃಪ್ತಿಗೊಳ್ಳದೆ ತಿರುಗಿ ಬರಲಿಲ್ಲ.


ಚಿತ್ರದಲ್ಲಿನ ಪುರುಷರು ತಮ್ಮ ಸೊಂಟದ ಸುತ್ತಲೂ ಪಟ್ಟಿಗಳನ್ನು ಕಟ್ಟಿಕೊಂಡಿದ್ದರು ಮತ್ತು ತಲೆಯ ಮೇಲೆ ಬೀಸುವ ಪೇಟಗಳನ್ನು ಹೊಂದಿದ್ದರು; ಅವರೆಲ್ಲರೂ ಬಾಬಿಲೋನ್ ನಿವಾಸಿಗಳಂತೆ, ಬಾಬಿಲೋನಿನ ರಥದ ಅಧಿಕಾರಿಗಳಂತೆ ಕಾಣುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು