1 ಸಮುಯೇಲ 18:6 - ಕನ್ನಡ ಸಮಕಾಲಿಕ ಅನುವಾದ6 ದಾವೀದನು ಫಿಲಿಷ್ಟಿಯರನ್ನು ಹೊಡೆದು ಜನರಸಹಿತವಾಗಿ ಬರುವಾಗ, ಇಸ್ರಾಯೇಲರ ಸಮಸ್ತ ಪಟ್ಟಣಗಳಿಂದ ಸ್ತ್ರೀಯರು ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಸಂತೋಷದಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ, ಸರ್ವಜನರೊಡನೆ ಹಿಂದಿರುಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರೂ ಹೊರಗೆ ಬಂದು ದಮ್ಮಡಿತಾಳಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸನಾದ ಸೌಲನನ್ನು ಎದುರುಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ದಾವೀದನು ಫಿಲಿಷ್ಟಿಯರನ್ನು ಸಂಹರಿಸಿ ಸರ್ವಸೈನಿಕರೊಡನೆ ಹಿಂದಿರುಗಿ ಬರುವಾಗ ಇಸ್ರಯೇಲರ ಎಲ್ಲ ಪಟ್ಟಣಗಳಿಂದ ಮಹಿಳೆಯರು ಹೊರಗೆ ಬಂದು, ತಾಳ ತಮ್ಮಟೆಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸ ಸೌಲನನ್ನು ಎದುರುಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ ಸರ್ವಜನರೊಡನೆ ಹಿಂದಿರುಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರು ಹೊರಗೆ ಬಂದು ದಮ್ಮಡಿತಾಳಗಳನ್ನು ಹಿಡಿದು ಸಂತೋಷದಿಂದ ಹಾಡುತ್ತಾ ಕುಣಿಯುತ್ತಾ ಅರಸನಾದ ಸೌಲನನ್ನು ಎದುರುಗೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದಾವೀದನು ಫಿಲಿಷ್ಟಿಯರೊಡನೆ ಹೋರಾಡಲು ಹೋಗುತ್ತಿದ್ದನು. ಯುದ್ಧದ ನಂತರ ಅವನು ಮನೆಗೆ ಹಿಂದಿರುಗುತ್ತಿದ್ದನು. ಇಸ್ರೇಲಿನ ಎಲ್ಲ ಪಟ್ಟಣಗಳಲ್ಲೂ ಹೆಂಗಸರು ದಾವೀದನನ್ನು ನೋಡುವುದಕ್ಕಾಗಿ ಹೊರಬರುತ್ತಿದ್ದರು. ಅವರು ಡೋಲು ಮುಂತಾದ ವಾದ್ಯಗಳನ್ನು ಬಾರಿಸುತ್ತಾ ಕೇಕೆ ಹಾಕಿ ನಗುತ್ತಾ ನರ್ತಿಸುತ್ತಿದ್ದರು. ಅವರು ಸೌಲನ ಸಮ್ಮುಖದಲ್ಲಿಯೇ ಇವನ್ನೆಲ್ಲ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿ |