Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:7 - ಕನ್ನಡ ಸಮಕಾಲಿಕ ಅನುವಾದ

7 ಆ ಸ್ತ್ರೀಯರು ಒಬ್ಬರಿಗೊಬ್ಬರು, “ಸೌಲನು ಸಾವಿರಗಳಷ್ಟು ಕೊಂದನು, ದಾವೀದನು ಹತ್ತು ಸಾವಿರಗಳಷ್ಟು ಕೊಂದನು,” ಎಂದು ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಹಾಡುತ್ತಾ, ಕೊಂಡಾಡುತ್ತಾ, “ಸೌಲನು ಸಾವಿರ ಶತ್ರುಗಳನ್ನು ಕೊಂದನು. ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು” ಎಂದು ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರು: ಸೌಲನು ಕೊಂದನು ಸಾವಿರಗಟ್ಟಳೆ ದಾವೀದನೋ ಕೊಂದನು ಹತ್ತುಸಾವಿರಗಟ್ಟಳೆ,” ಎಂದು ಪರಸ್ಪರ ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಪರಸ್ಪರವಾಗಿ - ಸೌಲನು ಸಾವಿರಗಟ್ಟಳೆಯಾಗಿ ಕೊಂದನು; ದಾವೀದನು ಹತ್ತು ಸಾವಿರಗಟ್ಟಳೆಯಾಗಿ ಕೊಂದನು ಎಂದು ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹೆಂಗಸರು, “ಸೌಲನು ಸಾವಿರಾರು ಶತ್ರುಗಳನ್ನು ಕೊಂದರೆ, ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು” ಎಂದು ಹಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:7
8 ತಿಳಿವುಗಳ ಹೋಲಿಕೆ  

ಆಕೀಷನ ಸೇವಕರು ಅವನಿಗೆ, “ಇವನು ನಾಡಿನ ಅರಸನಾದ ದಾವೀದನಲ್ಲವೋ? “ ‘ಸೌಲನು ಸಾವಿರಗಳನ್ನೂ, ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನು,’ ಎಂದು ಸ್ತ್ರೀಯರು ನೃತ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ಇವನನ್ನು ಕುರಿತಲ್ಲವೋ?”


ಸ್ತ್ರೀಯರು ತಮ್ಮ ನೃತ್ಯಗಳಲ್ಲಿ ಹಾಡಿದ ದಾವೀದನು ಇವನಲ್ಲವೇ: “ ‘ಸೌಲನು ಸಾವಿರ ಜನರನ್ನೂ, ದಾವೀದನು ಹತ್ತು ಸಾವಿರ ಜನರನ್ನೂ ಹೊಡೆದನು.’ ”


ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವ ದೇವರಿಗೆ ನೀವು ಹಾಡಿರಿ, ಅವರು ಮಹೋನ್ನತದಲ್ಲಿದ್ದಾರೆ; ಕುದುರೆಯನ್ನೂ ಸವಾರರನ್ನೂ ಸಮುದ್ರದಲ್ಲಿ ಮುಣುಗಿಸಿಬಿಟ್ಟರು.”


ದಾವೀದನೂ, ಸಮಸ್ತ ಇಸ್ರಾಯೇಲರೂ ಸಕಲ ವಾದ್ಯಗಳಾದ ಕಿನ್ನರಿ, ವೀಣೆ, ದಮ್ಮಡಿ, ಸ್ವರಮಂಡಲ, ತಾಳ, ತುತೂರಿ ಇವುಗಳನ್ನು ತಮ್ಮ ಸಮಸ್ತ ಬಲದಿಂದ ಬಾರಿಸುತ್ತಾ, ಹಾಡುತ್ತಾ ಯೆಹೋವ ದೇವರ ಮುಂದೆ ಹೋದರು.


ಆದರೆ ಸೈನಿಕರು ಅವನಿಗೆ, “ನೀನು ನಮ್ಮ ಸಂಗಡ ಬರಬೇಡ. ಏಕೆಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವುದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸಮನಾಗಿದ್ದೀ. ಈಗ ನೀನು ಊರಿನಲ್ಲಿದ್ದು, ನಮಗೆ ಸಹಾಯವಾಗಿರುವುದೇ ಉತ್ತಮ,” ಎಂದರು.


ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್ ಊರಿನ ಅರಸನಾದ ಆಕೀಷನಿಗೆ ಹೆದರಿ,


ದಾವೀದನ ಕಡೆಯ ಮಾತುಗಳು: “ಇಷಯನ ಮಗ ದಾವೀದನ ನುಡಿಗಳಿವು: ಉನ್ನತವಾಗಿ ಸಾಗಿದ ಪುರುಷನು ಯಾಕೋಬನ ದೇವರಿಂದ ಅಭಿಷಿಕ್ತನಾದವನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು