Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:8 - ಕನ್ನಡ ಸಮಕಾಲಿಕ ಅನುವಾದ

8 ಇದರಿಂದ ಸೌಲನಿಗೆ ಬಹು ಕೋಪವಾಯಿತು. ಆ ಹಾಡಿನಿಂದ ಅವನಿಗೆ ಬಹುಬೇಸರವಾಯಿತು. “ಇವರು ದಾವೀದನಿಗೆ ಹತ್ತು ಸಾವಿರಗಳಷ್ಟು ಎಂದು ಹಾಡಿದ್ದಾರೆ; ನನಗೆ ಸಾವಿರಗಳಷ್ಟೇ ಎಂದು ಹಾಡಿದ್ದಾರೆ; ಹಾಗಾದರೆ, ಅವನಿಗೆ ರಾಜ್ಯವಲ್ಲದೆ ಇನ್ನು ಆಗಬೇಕಾದದ್ದೇನು?” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹು ಅಸೂಯೆ ಉಂಟಾಗಿ ದಾವೀದನ ಮೇಲೆ ಕೋಪಗೊಂಡನು. ಅವನು “ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನೆಂದೂ, ನಾನು ಸಾವಿರಾರು ಶತ್ರುಗಳನ್ನು ಕೊಂದೆನೆಂದೂ ಹಾಡುತ್ತಾರಲ್ಲಾ, ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾಯಿತು” ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ಮಾತುಗಳು ಸೌಲನಿಗೆ ಹಿಡಿಸಲಿಲ್ಲ. ಅವನು ಕೋಪದಿಂದ, “ದಾವೀದನು ಹತ್ತು ಸಾವಿರಗಟ್ಟಳೆ ಕೊಂದನೆಂದೂ ನಾನು ಸಾವಿರಗಟ್ಟಳೆ ಮಾತ್ರ ಕೊಂದೆನೆಂದು ಹಾಡುತ್ತಾರಲ್ಲಾ! ಹಾಗಾದರೆ ಅವನನ್ನು ರಾಜನನ್ನಾಗಿ ಮಾಡುವುದೊಂದೇ ಕಡಿಮೆ!” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹುವ್ಯಸನವೂ ಕೋಪವೂ ಉಂಟಾಗಿ ಅವನು - ದಾವೀದನು ಹತ್ತು ಸಾವಿರ ಗಟ್ಟಳೆಯಾಗಿ ಕೊಂದನೆಂದೂ ನಾನು ಸಾವಿರಗಟ್ಟಳೆಯಾಗಿ ಕೊಂದೆನೆಂದೂ ಹಾಡುತ್ತಾರಲ್ಲಾ! ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾದ ಹಾಗಾಯಿತು ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹೆಂಗಸರ ಈ ಹಾಡಿನಿಂದ ಸೌಲನು ಬಹಳವಾಗಿ ವ್ಯಸನಗೊಂಡನು ಮತ್ತು ರೋಷಗೊಂಡನು. “ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು ಎಂದು ಇವರು ಹಾಡುತ್ತಾರಲ್ಲಾ, ಇವನಿಗೆ ರಾಜ್ಯವೊಂದನ್ನು ಬಿಟ್ಟು ಬೇರೆ ಏನು ಕಡಿಮೆಯಾಯಿತು?” ಎಂದು ಆಲೋಚಿಸತೊಡಗಿದನು. “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು” ಎಂದು ಹಾಡಿದ ಹೆಂಗಸರ ಮಾತುಗಳಿಂದ ಸೌಲನು ಚಿಂತೆಗೀಡಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:8
16 ತಿಳಿವುಗಳ ಹೋಲಿಕೆ  

ಸಮುಯೇಲನು ಅವನಿಗೆ, “ನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಯೆಹೋವ ದೇವರು ಈ ಹೊತ್ತು ಕಿತ್ತು, ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟರು.


ಎಲ್ಲಿ ಗರ್ವವೋ ಅಲ್ಲಿ ಕಲಹ; ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ.


ಅಥವಾ ದೇವರು ನಮ್ಮಲ್ಲಿ ವಾಸವಾಗಿರಲು ನಮಗೆ ಕೊಟ್ಟಿರುವ ಪವಿತ್ರಾತ್ಮ ದೇವರು, ನಾವು ಅವರಿಗೆ ಮಾತ್ರ ಸೇರಿದವರಾಗಿರಬೇಕೆಂದು ಬಲವಾದ ಬಯಕೆ ಉಳ್ಳವರಾಗಿದ್ದಾರೆಂದು ಪವಿತ್ರ ವೇದವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸುತ್ತೀರೋ?


ಹಾಮಾನನು, ಮೊರ್ದೆಕೈಯು ತನಗೆ ಬಗ್ಗಿ ಅಡ್ಡಬೀಳದೆ ಇರುವುದನ್ನು ಕಂಡಾಗ ಬಹು ಕೋಪಗೊಂಡನು.


ಏಕೆಂದರೆ ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳವರೆಗೂ ನೀನಾದರೂ, ನಿನ್ನ ರಾಜ್ಯವಾದರೂ ಸ್ಥಿರವಾಗುವುದಿಲ್ಲ. ಆದ್ದರಿಂದ ಈಗ ನೀನು ಅವನನ್ನು ಕರೆಕಳುಹಿಸಿ, ನನ್ನ ಬಳಿಗೆ ತೆಗೆದುಕೊಂಡು ಬಾ. ಏಕೆಂದರೆ ಅವನು ನಿಜವಾಗಿ ಸಾಯಲೇಬೇಕು,” ಎಂದನು.


ಕ್ರೋಧವು ಕ್ರೂರ, ಕೋಪವು ಪ್ರವಾಹ; ಆದರೆ ಅಸೂಯೆದ ಮುಂದೆ ಯಾವನು ನಿಂತಾನು?


ಮನುಷ್ಯನು ಪಡುವ ಎಲ್ಲಾ ಪ್ರಯಾಸವನ್ನೂ ಸಾಧಿಸುವ ಎಲ್ಲಾ ಕಾರ್ಯಗಳನ್ನೂ ನೋಡಿದಾಗ ಇವು ಪರಸ್ಪರ ಮತ್ಸರಕ್ಕೆ ಕಾರಣವೆಂದು ನಾನು ತಿಳಿದುಕೊಂಡೆನು. ಇದು ಕೂಡ ಗಾಳಿಯನ್ನು ಬೆನ್ನಟ್ಟಿದ ಹಾಗೆ ವ್ಯರ್ಥವೇ.


ಅರಸನಾದ ಸೊಲೊಮೋನನು ತನ್ನ ತಾಯಿಗೆ ಉತ್ತರವಾಗಿ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನೀನು ಕೇಳುವುದೇಕೆ? ರಾಜ್ಯವನ್ನೂ ಕೇಳು. ಏಕೆಂದರೆ ಅವನು ನನ್ನ ಅಣ್ಣನಾಗಿದ್ದಾನೆ. ಯಾಜಕ ಅಬಿಯಾತರನಿಗೋಸ್ಕರವೂ, ಚೆರೂಯಳ ಮಗ ಯೋವಾಬನಿಗೋಸ್ಕರವೂ ಕೇಳು,” ಎಂದನು.


ಸಮುಯೇಲನು ಎಣ್ಣೆ ಇರುವ ಕೊಂಬನ್ನು ತೆಗೆದುಕೊಂಡು, ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಯೆಹೋವ ದೇವರ ಆತ್ಮರು ಕೂಡಲೆ ದಾವೀದನ ಮೇಲೆ ಇಳಿದು ಬಂದರು. ಅನಂತರ ಸಮುಯೇಲನು ಎದ್ದು ರಾಮಕ್ಕೆ ಹೋದನು.


ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದನ್ನು ನೀನು ಕೈಗೊಳ್ಳದೆ ಹೋದದ್ದರಿಂದ, ಅವರು ತಮ್ಮ ಹೃದಯಕ್ಕೆ ತಕ್ಕಂಥ ಒಬ್ಬ ಮನುಷ್ಯನನ್ನು ಹುಡುಕಿ, ಅವನನ್ನು ತಮ್ಮ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾರೆ,” ಎಂದನು.


ಆಗ ಬಿಳಾಮನು ಯೆಹೋವ ದೇವರ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ. ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ, ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ,” ಎಂದನು.


ಇಸ್ರಾಯೇಲ್ ಜನರು ತಮಗೆ ಕಷ್ಟವಾಯಿತೆಂದು ಗೊಣಗುಟ್ಟಿದಾಗ, ಯೆಹೋವ ದೇವರು ಅದನ್ನು ಕೇಳಿ ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿ ಬೀಳುವಂತೆ ಮಾಡಿದ್ದರಿಂದ ಅವರ ಪಾಳೆಯದ ಕಟ್ಟಕಡೆಯ ಭಾಗದಲ್ಲಿದ್ದವರು ಸುಟ್ಟುಹೋದರು.


ಆ ದಿವಸ ಮೊದಲುಗೊಂಡು ಸೌಲನು ದಾವೀದನ ಮೇಲೆ ಮತ್ಸರದ ಕಣ್ಣಿಟ್ಟನು.


ಸೌಲನು ತನ್ನ ಮಗ ಯೋನಾತಾನ ಮತ್ತು ತನ್ನ ಸಮಸ್ತ ಸೇವಕರಿಗೆ ದಾವೀದನನ್ನು ಕೊಲ್ಲಬೇಕೆಂದು ಹೇಳಿದನು. ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.


ಆಗ ಅವನ ಸಹೋದರರು ಅವನಿಗೆ, “ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವೆಯೋ? ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ?” ಎಂದು ಹೇಳಿ, ಅವನ ಕನಸು ಮತ್ತು ಅವನ ಮಾತುಗಳಿಗೆ ಅವನನ್ನು ಮತ್ತಷ್ಟೂ ದ್ವೇಷಿಸಿದರು.


ಹೀಗೆ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು