1 ಸಮುಯೇಲ 19:11 - ಕನ್ನಡ ಸಮಕಾಲಿಕ ಅನುವಾದ11 ಆದರೆ ದಾವೀದನನ್ನು ಕಾದುಕೊಂಡಿದ್ದು, ಉದಯದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ, ನಾಳೆ ಹತನಾಗುವಿ,” ಎಂದು ಹೇಳಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸೌಲನು ಕೂಡಲೇ ದೂತರನ್ನು ಕರಿಸಿ ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸೌಲನು ಕೂಡಲೆ ದೂತರನ್ನು ಕರೆಯಿಸಿ, “ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕು,” ಎಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀವು ಈ ರಾತ್ರಿಯೇ ತಪ್ಪಿಸಿಕೊಳ್ಳದೆ ಇದ್ದರೆ ನಾಳೆ ಬೆಳಿಗ್ಗೆ ಹತರಾಗುವಿರಿ,” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸೌಲನು ಕೂಡಲೆ ದೂತರನ್ನು ಕರಿಸಿ - ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ - ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸೌಲನು ದಾವೀದನ ಮನೆಗೆ ತನ್ನ ಜನರನ್ನು ಕಳುಹಿಸಿದನು. ಅವರು ದಾವೀದನ ಮನೆಯನ್ನು ಕಾಯ್ದರು. ಅವರು ರಾತ್ರಿಯೆಲ್ಲಾ ಅಲ್ಲಿಯೇ ಇದ್ದರು. ಅವರು ದಾವೀದನನ್ನು ಬೆಳಿಗ್ಗೆ ಕೊಲ್ಲಲು ಕಾಯುತ್ತಿದ್ದರು. ಆದರೆ ದಾವೀದನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯೇ ಓಡಿಹೋಗಿ, ನಿನ್ನ ಜೀವವನ್ನು ಕಾಪಾಡಿಕೋ. ಇಲ್ಲವಾದರೆ, ನಿನ್ನನ್ನು ಅವರು ಕೊಂದುಬಿಡುತ್ತಾರೆ” ಎಂದು ಎಚ್ಚರಿಸಿದಳು. ಅಧ್ಯಾಯವನ್ನು ನೋಡಿ |