Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:16 - ಕನ್ನಡ ಸಮಕಾಲಿಕ ಅನುವಾದ

16 ಹಾಗೆಯೇ ಸೇವಕರು ಬಂದು ಕಂಡಾಗ, ವಿಗ್ರಹವು ಮಂಚದ ಮೇಲೆ ಇತ್ತು. ಅದರ ತಲೆಗೆ ಒಂದು ಆಡಿನ ಉಣ್ಣೆಯ ತಲೆದಿಂಬು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ಹೋಗಿ ನೋಡಲು ಹಾಸಿಗೆಯ ಮೇಲಿರುವುದು ಮೇಕೆಕೂದಲಿನಿಂದ ಹೆಣೆದ ಜಾಲರಿಯ ಒಂದು ವಿಗ್ರಹ ಎಂದು ತಿಳಿದುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರು ಹೋಗಿ ನೋಡಲು, ಮುಖದ ಕಡೆ ಮೇಕೆಕೂದಲಿನಿಂದ ಮಾಡಿದ ದಿಂಬಾಗಿತ್ತು. ಹಾಸಿಗೆಯ ಮೇಲಿದ್ದುದು ಒಂದು ಗೊಂಬೆಯೆಂದು ತಿಳಿದುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರು ಹೋಗಿ ನೋಡಲು ಮುಖದ ಮೇಲೆ ಮೇಕೆಕೂದಲಿನಿಂದ ಹೆಣೆದ ಜಾಲರಿಯುಳ್ಳದ್ದಾಗಿ ಹಾಸಿಗೆಯ ಮೇಲಿರುವದು ಒಂದು ಬೊಂಬೆಯೆಂದು ತಿಳಿದುಬಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸಂದೇಶಕರು ದಾವೀದನ ಮನೆಗೆ ಹೋದರು. ಅವರು ದಾವೀದನನ್ನು ಕರೆದೊಯ್ಯಲು ಒಳಗಡೆ ಹೋದಾಗ ಹಾಸಿಗೆಯ ಮೇಲಿರುವುದು ಕೇವಲ ವಿಗ್ರಹವೆಂಬುದೂ ಅದರ ಕೂದಲು ಕೇವಲ ಹೋತದ ಕೂದಲೆಂಬುದೂ ಅವರಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:16
3 ತಿಳಿವುಗಳ ಹೋಲಿಕೆ  

ತರುವಾಯ ಮೀಕಲಳು ಒಂದು ವಿಗ್ರಹವನ್ನು ತೆಗೆದುಕೊಂಡು, ಮಂಚದ ಮೇಲೆ ಮಲಗಿಸಿ, ಅದರ ತಲೆ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ, ಅದನ್ನು ವಸ್ತ್ರದಿಂದ ಮುಚ್ಚಿದಳು.


ತಿರುಗಿ ಸೌಲನು ದಾವೀದನನ್ನು ನೋಡುವುದಕ್ಕೋಸ್ಕರ ದೂತರನ್ನು ಕಳುಹಿಸಿ, “ಅವನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ,” ಎಂದನು.


ಆಗ ಸೌಲನು ಮೀಕಲಳಿಗೆ, “ನೀನು ಈ ಪ್ರಕಾರ ನನಗೆ ಮೋಸಮಾಡಿ, ನನ್ನ ಶತ್ರುವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ,” ಎಂದನು. ಆಗ ಮೀಕಲಳು ಸೌಲನಿಗೆ ಉತ್ತರವಾಗಿ, “ಅವನು ನನಗೆ, ‘ನಾನು ನಿನ್ನನ್ನು ಕೊಂದು ಹಾಕುವುದು ಏಕೆ? ನನ್ನನ್ನು ಹೋಗಗೊಡಿಸು,’ ಎಂದು ಹೇಳಿದನು,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು