1 ಸಮುಯೇಲ 19:18 - ಕನ್ನಡ ಸಮಕಾಲಿಕ ಅನುವಾದ18 ಹೀಗೆಯೇ ದಾವೀದನು ಓಡಿಹೋಗಿ ತಪ್ಪಿಸಿಕೊಂಡು ರಾಮದಲ್ಲಿರುವ ಸಮುಯೇಲನ ಬಳಿಗೆ ಬಂದು, ಸೌಲನು ತನಗೆ ಮಾಡಿದ್ದನ್ನೆಲ್ಲಾ ಅವನಿಗೆ ತಿಳಿಸಿದನು. ಅವನೂ ಸಮುಯೇಲನೂ ಹೋಗಿ ನಯೋತಿನಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದೆಲ್ಲವನ್ನು ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ನಯೋತ್ ಎಂಬ ಸ್ಥಳದಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಹೀಗೆ ದಾವೀದನು ತಪ್ಪಿಸಿಕೊಂಡು ರಾಮಾದಲ್ಲಿದ್ದ ಸಮುವೇಲನ ಬಳಿಗೆ ಬಂದನು. ಸೌಲನು ತನಗೆ ಮಾಡಿದ್ದೆಲ್ಲವನ್ನೂ ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ಒಂದು ಮಠದಲ್ಲಿ ವಾಸವಾಗಿ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದೆಲ್ಲವನ್ನೂ ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ಮಠದಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಹತ್ತಿರಕ್ಕೆ ಓಡಿಹೋದನು. ಸೌಲನು ತನಗೆ ಮಾಡಿದ್ದನ್ನೆಲ್ಲ ದಾವೀದನು ಸಮುವೇಲನಿಗೆ ಹೇಳಿದನು. ನಂತರ ದಾವೀದನು ಮತ್ತು ಸಮುವೇಲನು ಪ್ರವಾದಿಗಳಿದ್ದ ಪಾಳೆಯಕ್ಕೆ ಹೋದರು. ದಾವೀದನು ಅಲ್ಲಿ ನೆಲೆಸಿದನು. ಅಧ್ಯಾಯವನ್ನು ನೋಡಿ |