Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:21 - ಕನ್ನಡ ಸಮಕಾಲಿಕ ಅನುವಾದ

21 ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ, ಅವನು ಬೇರೆ ದೂತರನ್ನು ಕಳುಹಿಸಿದನು. ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತರನ್ನು ಕಳುಹಿಸಿದನು. ಅವರೂ ಹಾಗೆಯೇ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು. ಇವರೂ ಪ್ರವಾದಿಸಿದರು. ಅವನು ಮೂರನೆಯ ಸಾರಿ ಇನ್ನೂ ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಅವರೂ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸೌಲನಿಗೆ ಈ ವರ್ತಮಾನ ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು. ಇವರೂ ಪರವಶರಾದರು. ಮೂರನೆಯ ಸಾರಿ ಇನ್ನೂ ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಇವರೂ ಪರವಶರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು; ಇವರೂ ಪರವಶರಾದರು. ಮೂರನೆಯ ಸಾರಿ ಇನ್ನು ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಇವರೂ ಪರವಶರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಸೌಲನು ಈ ಸುದ್ದಿಯನ್ನು ಕೇಳಿ ಇತರ ಸಂದೇಶಕರನ್ನು ಕಳುಹಿಸಿದನು. ಆದರೆ ಅವರೂ ಪ್ರವಾದಿಸಲಾರಂಭಿಸಿದರು. ಆದ್ದರಿಂದ ಸೌಲನು ಮೂರನೆಯ ಬಾರಿ ಸಂದೇಶಕರನ್ನು ಕಳುಹಿಸಿದನು, ಅವರೂ ಪ್ರವಾದಿಸಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:21
6 ತಿಳಿವುಗಳ ಹೋಲಿಕೆ  

“ಆಮೇಲೆ ನಾನು, ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. ನಿಮ್ಮ ಯುವಜನರಿಗೆ ದರ್ಶನಗಳಾಗುವವು.


ಕೂಷ್ಯನು ತನ್ನ ಚರ್ಮವನ್ನೂ, ಚಿರತೆಯು ತನ್ನ ಮಚ್ಚೆಯನ್ನೂ ಮಾರ್ಪಡಿಸುವುದಕ್ಕಾಗುವುದೋ? ಹಾಗಾದರೆ ಕೆಟ್ಟತನದ ಅಭ್ಯಾಸವುಳ್ಳವರಾದ ನೀವೂ ಸಹ ಒಳ್ಳೆಯದನ್ನು ಮಾಡುವುದಕ್ಕಾದೀತೇ?


ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಹಾಕಿ, ಒಣಕೆಯಿಂದ ಕುಟ್ಟಿದರೂ, ಅವನಿಂದ ಮೂರ್ಖನತವು ತೊಲಗುವುದಿಲ್ಲ.


ಆದ್ದರಿಂದ ಸೌಲನು ದಾವೀದನನ್ನು ಹಿಡಿದುಕೊಂಡು ಬರಲು ದೂತರನ್ನು ಕಳುಹಿಸಿದನು. ಪ್ರವಾದಿಗಳ ಗುಂಪು ಪ್ರವಾದಿಸುವುದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುಯೇಲನು ನಿಂತಿರುವುದನ್ನೂ ಕಂಡಾಗ, ದೇವರ ಆತ್ಮ ಸೌಲನ ದೂತರ ಮೇಲೆ ಬಂದಿತು, ಅವರೂ ಸಹ ಪ್ರವಾದಿಸಿದರು.


ಆಗ ಸೌಲನು ತಾನೇ ರಾಮಕ್ಕೆ ಹೋದನು. ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, ಸಮುಯೇಲನೂ ದಾವೀದನೂ ಎಲ್ಲಿದ್ದಾರೆ ಎಂದು ಕೇಳಿದನು. ಆಗ ಒಬ್ಬನು, “ಅವರು ರಾಮದ ನಯೋತಿನಲ್ಲಿದ್ದಾರೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು