1 ಸಮುಯೇಲ 19:24 - ಕನ್ನಡ ಸಮಕಾಲಿಕ ಅನುವಾದ24 ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ, ತಾನೂ ಹಾಗೆಯೇ ಸಮುಯೇಲನ ಮುಂದೆ ಪ್ರವಾದಿಸಿದನು. ಆ ದಿನ ಹಗಲೆಲ್ಲವೂ, ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದ್ದರಿಂದ, “ಸೌಲನು ಕೂಡ ಪ್ರವಾದಿಗಳಲ್ಲಿ ಒಬ್ಬನಾಗಿದ್ದಾನೆಯೇ?” ಎಂಬ ಮಾತು ಪ್ರಚಲಿತವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅಲ್ಲಿಗೆ ಸೇರಿದ ಮೇಲೆ ಅವನು ತನ್ನ ಬಟ್ಟೆಗಳನ್ನು ತೆಗೆದುಹಾಕಿ, ಸಮುವೇಲನ ಮುಂದೆ ಪ್ರವಾದಿಸುತ್ತಾ, ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಇದರಿಂದ “ಸೌಲನೂ ಕೂಡ ಪ್ರವಾದಿಗಳಲ್ಲಿ ಒಬ್ಬನಾಗಿದ್ದಾನೆಯೇ” ಎಂಬ ಮಾತು ಪ್ರಚಲಿತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅಲ್ಲಿಗೆ ಸೇರಿದ ಮೇಲೆ, ಅವನೂ ತನ್ನ ಬಟ್ಟೆಗಳನ್ನು ತೆಗೆದುಹಾಕಿ, ಸಮುವೇಲನ ಮುಂದೆ ಪರವಶನಾಗಿ ಮಾತಾಡುತ್ತಾ ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಆದುದರಿಂದ “ಏನು, ಸೌಲನೂ ಪ್ರವಾದಿಯಾಗಿಬಿಟ್ಟನೋ?” ಎಂಬ ಗಾದೆಯುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅಲ್ಲಿಗೆ ಸೇರಿದ ಮೇಲೆ ಅವನೂ ತನ್ನ ಬಟ್ಟೆಗಳನ್ನು ತೆಗೆದು ಹಾಕಿ ಸಮುವೇಲನ ಮುಂದೆ ಪರವಶನಾಗಿ ಮಾತಾಡುತ್ತಾ ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಆದದರಿಂದ - ಸೌಲನೂ ಪ್ರವಾದಿಗಳಲ್ಲಿದ್ದಾನೋ ಎಂಬ ಗಾದೆಯುಂಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಂತರ ಸೌಲನು ತಾನು ಧರಿಸಿದ್ದ ಬಟ್ಟೆಗಳನ್ನು ತೆಗೆದುಹಾಕಿದನು. ಸಮುವೇಲನ ಎದುರಿನಲ್ಲಿ ಸೌಲನೂ ಸಹ ಪ್ರವಾದಿಸುತ್ತಿದ್ದನು. ಅಂದು ಹಗಲು ರಾತ್ರಿಯೆಲ್ಲ ಸೌಲನು ಬೆತ್ತಲೆಯಾಗಿ ಅಲ್ಲಿಯೇ ಮಲಗಿದ್ದನು. ಆದ್ದರಿಂದಲೇ ಜನರು, “ಸೌಲನೂ ಪ್ರವಾದಿಗಳಲ್ಲಿ ಒಬ್ಬನೇ?” ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ತಿರುಗಿದಾಗ, ಸೌಲನ ಮಗಳಾದ ಮೀಕಲಳು ದಾವೀದನಿಗೆ ಎದುರಾಗಿ ಬಂದು, “ನಿಷ್ಪ್ರಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿ ಹಾಕಿದ ಹಾಗೆಯೇ, ಈ ಹೊತ್ತು ತನ್ನ ಸೇವಕರ ದಾಸಿಯರ ಕಣ್ಣು ಮುಂದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಹೊಂದಿದನು?” ಎಂದಳು.