Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:3 - ಕನ್ನಡ ಸಮಕಾಲಿಕ ಅನುವಾದ

3 ಆಗ ನನ್ನ ತಂದೆಯ ಬಳಿಯಲ್ಲಿ ನಿಂತುಕೊಂಡು, ನಿನಗೋಸ್ಕರ ನನ್ನ ತಂದೆಯ ಸಂಗಡ ಮಾತನಾಡಿ, ನಾನು ನೋಡುವುದನ್ನು ಹೊರಟುಬಂದು ನೀನು ಇರುವ ಹೊಲದಲ್ಲಿ ನಿನಗೆ ತಿಳಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಅಡಗಿಕೊಂಡಿರುವ ಹೊಲಕ್ಕೆ ನಾನು ಬಂದು, ನನ್ನ ತಂದೆಯ ಬಳಿಯಲ್ಲಿ ನಿಂತು, ನಿನ್ನ ವಿಷಯವನ್ನು ಮಾತನಾಡಿ, ಅವನಿಂದ ತಿಳಿದು ಬರುವ ವಿಚಾರವನ್ನು ನಿನಗೆ ತಿಳಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನನ್ನ ತಂದೆಯ ಬಳಿಯಲ್ಲಿದ್ದು ನಿನ್ನ ಬಗ್ಗೆ ಅವರೊಡನೆ ಮಾತಾಡಿ ಗೊತ್ತಾದ ವಿಷಯವನ್ನು ನೀನು ಅವಿತುಕೊಂಡಿರುವ ಸ್ಥಳಕ್ಕೆ ಬಂದು ತಿಳಿಸುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ಅಡಗಿಕೊಂಡಿರುವ ಹೊಲಕ್ಕೆ ನಾನೂ ಬಂದು ನನ್ನ ತಂದೆಯ ಬಳಿಯಲ್ಲಿ ನಿಂತು ನಿನ್ನ ವಿಷಯ ಅವನೊಡನೆ ಮಾತಾಡಿ ಗೊತ್ತಾಗುವದನ್ನು ನಿನಗೆ ತಿಳಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ನನ್ನ ತಂದೆಯೊಡನೆ ಹೊಲಕ್ಕೆ ಬರುತ್ತೇನೆ. ನೀನು ಅಡಗಿರುವ ಸ್ಥಳದ ಹತ್ತಿರ ನಾವು ನಿಲ್ಲುತ್ತೇವೆ. ನಾನು ನನ್ನ ತಂದೆಯೊಡನೆ ನಿನ್ನ ಬಗ್ಗೆ ಮಾತನಾಡುತ್ತೇನೆ. ನಂತರ ನಾನು ತಿಳಿದುಕೊಂಡದ್ದನ್ನು ನಿನಗೆ ಹೇಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:3
4 ತಿಳಿವುಗಳ ಹೋಲಿಕೆ  

ಆದರೆ ನಿನಗೆ ಕೇಡು ಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ, ಅದನ್ನು ನಿನಗೆ ತಿಳಿಸಿ ನೀನು ಸಮಾಧಾನದಿಂದ ಹೋಗುವಹಾಗೆ ನಿನ್ನನ್ನು ಕಳುಹಿಸುವೆನು. ಯೆಹೋವ ದೇವರು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ.


ಆಗ ಯೋನಾತಾನನು, “ಅದು ನಿನಗೆ ದೂರವಾಗಿರಲಿ. ಏಕೆಂದರೆ ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ, ನಾನು ಅದನ್ನು ನಿನಗೆ ತಿಳಿಸದೆ ಇರುವೆನೋ?” ಎಂದನು.


ಯೋನಾತಾನನು ದಾವೀದನನ್ನು, “ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದು ಹುಡುಕುತ್ತಾನೆ. ನೀನು ನಾಳೆ ಬೆಳಗಿನವರೆಗೆ ಎಚ್ಚರಿಕೆಯಾಗಿದ್ದು, ಮರೆಯಾದ ಸ್ಥಳಗಳಲ್ಲಿ ಅಡಗಿಕೋ.


ಸ್ನೇಹಿತನು ಎಲ್ಲಾ ಸಮಯದಲ್ಲಿ ಪ್ರೀತಿಸುತ್ತಾನೆ; ಆಪತ್ತಿನಲ್ಲಿ ಸಹಾಯಮಾಡುವಗೋಸ್ಕರ ಸಹೋದರನು ಹುಟ್ಟಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು