Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:5 - ಕನ್ನಡ ಸಮಕಾಲಿಕ ಅನುವಾದ

5 ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಫಿಲಿಷ್ಟಿಯನನ್ನು ಹೊಡೆದನು. ಯೆಹೋವ ದೇವರು ಸಮಸ್ತ ಇಸ್ರಾಯೇಲರಿಗೋಸ್ಕರ ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ನೀನೂ ಕಂಡು ಸಂತೋಷಪಟ್ಟೆ. ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರ್ದೋಷಿಯ ರಕ್ತಕ್ಕೆ ವಿರೋಧವಾಗಿ ಅಪರಾಧವನ್ನು ಮಾಡುವುದೇಕೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲ್ಯರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯರನ್ನು ಕೊಂದನು; ಸರ್ವೇಶ್ವರ ಇಸ್ರಯೇಲರಿಗೆ ಮಹಾ ಜಯವನ್ನುಂಟುಮಾಡಿದರು. ನೀವೂ ಅದನ್ನು ನೋಡಿ ಸಂತೋಷಪಟ್ಟಿರಿ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿ ಅಪರಾಧಕ್ಕೆ ನೀವೇಕೆ ಗುರಿ ಆಗುತ್ತೀರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯನನ್ನು ಕೊಂದನು; ಯೆಹೋವನು ಇಸ್ರಾಯೇಲ್ಯರಿಗೆ ಮಹಾಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದಾವೀದನು ಫಿಲಿಷ್ಟಿಯನಾದ ಗೊಲ್ಯಾತನನ್ನು ಕೊಂದಾಗ ತನ್ನ ಜೀವವನ್ನೇ ಪಣವಾಗಿಟ್ಟಿದ್ದನು. ಯೆಹೋವನು ಇಸ್ರೇಲರೆಲ್ಲರಿಗೂ ಬಹು ದೊಡ್ಡ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿದೆ ಮತ್ತು ಸಂತೋಷಗೊಂಡೆ. ದಾವೀದನಿಗೆ ಕೇಡುಮಾಡಲು ನೀನು ಏಕೆ ಬಯಸಿರುವೆ? ಅವನು ನಿರಪರಾಧಿ. ಅವನನ್ನು ಕೊಲ್ಲಲು ಯಾವ ಕಾರಣವೂ ಇಲ್ಲ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:5
26 ತಿಳಿವುಗಳ ಹೋಲಿಕೆ  

ಆಗ ಇವನು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದುಹಾಕಿ ಹೊಲವನ್ನು ಕಾಪಾಡಿದನು. ಹೀಗೆ ಯೆಹೋವ ದೇವರು ಮಹಾಜಯವನ್ನು ಉಂಟುಮಾಡಿದರು.


ಆಗ ಸೌಲನು, “ಯೆಹೋವ ದೇವರು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನು ಉಂಟುಮಾಡಿದ್ದರಿಂದ, ಈ ಹೊತ್ತು ಯಾರನ್ನೂ ಕೊಲ್ಲಬಾರದು,” ಎಂದನು.


ಅವನು, “ನಾನು ನಿರಪರಾಧಿಯ ರಕ್ತಕ್ಕೆ ದ್ರೋಹ ಬಗೆದು ಪಾಪಮಾಡಿದ್ದೇನೆ,” ಎಂದನು. ಅದಕ್ಕೆ ಅವರು, “ನಮಗೇನು? ನೀನೇ ಅದನ್ನು ನೋಡಿಕೋ,” ಎಂದರು.


ಅದಕ್ಕೆ ಯೋನಾತಾನನು ತನ್ನ ತಂದೆ ಸೌಲನಿಗೆ ಉತ್ತರವಾಗಿ, “ಅವನನ್ನು ಏಕೆ ಕೊಲೆಮಾಡಬೇಕು? ಅವನು ಏನು ಮಾಡಿದನು?” ಎಂದನು.


ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ, ತನ್ನ ಪ್ರಾಣವನ್ನು ಲೆಕ್ಕಿಸದೆ, ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ,


ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ನನ್ನ ಜೀವನ ಆಗಾಗ ಅಪಾಯದಲ್ಲಿದೆ, ಆದಾಗ್ಯೂ ನಾನು ನಿಮ್ಮ ನಿಯಮವನ್ನು ಮರೆಯುವುದಿಲ್ಲ.


ಆಗ ಆ ಸ್ತ್ರೀಯು ಸೌಲನ ಬಳಿಗೆ ಬಂದು, ಅವನು ಬಹಳ ತಲ್ಲಣಪಟ್ಟನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ, ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡವಳಾಗಿ, ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.


ಅವನು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಹಾಗಿದ್ದನು. ನೀವು ನನಗೆ ಮಾಡಲು ಸಾಧ್ಯವಾಗದೆ ಹೋದ ಸಹಾಯವನ್ನು ತಾನೇ ಪೂರ್ತಿ ಮಾಡುವುದಕ್ಕಾಗಿ, ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಗುರಿಪಡಿಸಿಕೊಂಡನು.


ಆದರೆ, ‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಮಾಡಿದರು,’ ಎಂದು ಅವರ ನಿಯಮದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ಪಿಲಾತನು ತನ್ನ ಯತ್ನ ನಡೆಯಲಿಲ್ಲವೆಂದೂ ಅದಕ್ಕೆ ಬದಲಾಗಿ ಗದ್ದಲವೇ ಹೆಚ್ಚಾಗುತ್ತದೆಂದೂ ನೋಡಿ, ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು, “ಈ ನೀತಿವಂತನ ರಕ್ತದ ವಿಷಯದಲ್ಲಿ ನಾನು ನಿರಪರಾಧಿ, ಇದಕ್ಕೆ ನೀವೇ ಜವಾಬ್ದಾರಿ,” ಎಂದನು.


ಆದರೂ ನೀವು ನನ್ನನ್ನು ಕೊಂದುಹಾಕಿದರೆ, ನಿಮ್ಮ ಮೇಲೆಯೂ, ಈ ಪಟ್ಟಣದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ನಿರ್ದೋಷಿಯ ರಕ್ತವನ್ನು ಬರಮಾಡುತ್ತೀರೆಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ವಾಕ್ಯಗಳನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದನು.


ಕಾರಣವಿಲ್ಲದೆ ನನ್ನನ್ನು ದ್ವೇಷಿಸುವವರು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ. ನನ್ನನ್ನು ನಾಶಮಾಡ ಬಯಸುವವರೂ ಕಾರಣವಿಲ್ಲದೆ ನನಗೆ ಶತ್ರುಗಳಾಗಿದ್ದಾರೆ. ನಾನು ಅಪಹರಿಸದಿದ್ದರೂ ದಂಡ ಕೊಡಬೇಕಾಯಿತು.


ಆದರೆ ಜನರು ಸೌಲನಿಗೆ, “ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆಯನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಎಂದಿಗೂ ಇಲ್ಲ. ಯೆಹೋವ ದೇವರ ಜೀವದಾಣೆ, ಇದನ್ನು ಅವನು ದೇವರ ಸಹಾಯದಿಂದ ಮಾಡಿದ್ದರಿಂದ, ಅವನ ಒಂದು ಕೂದಲು ನೆಲಕ್ಕೆ ಬೀಳಬಾರದು,” ಎಂದು ಹೇಳಿ ಯೋನಾತಾನನು ಸಾಯದ ಹಾಗೆ ಪ್ರಾಯಶ್ಚಿತ್ತವನ್ನು ಮಾಡಿ ಬಿಡಿಸಿಕೊಂಡರು.


ನೀವು ನನ್ನನ್ನು ರಕ್ಷಿಸುವುದಿಲ್ಲವೆಂದು ನಾನು ಕಂಡು ನನ್ನ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು, ಅಮ್ಮೋನಿಯರಿಗೆ ವಿರೋಧವಾಗಿ ಹೋದೆನು. ಯೆಹೋವ ದೇವರು ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ನೀವು ನನ್ನ ಸಂಗಡ ಯುದ್ಧಮಾಡುವುದಕ್ಕೆ ಈ ಹೊತ್ತು ನನಗೆ ವಿರೋಧವಾಗಿ ಏಕೆ ಬಂದಿರಿ?” ಎಂದನು.


ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.


ಅದಕ್ಕೆ ಮೋಶೆಯು ಜನರಿಗೆ, “ನೀವು ಭಯಪಡಬೇಡಿರಿ, ದೃಢವಾಗಿ ನಿಲ್ಲಿರಿ. ಯೆಹೋವ ದೇವರು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಈಜಿಪ್ಟಿನವರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವುದಿಲ್ಲ.


ನಿಮ್ಮನ್ನು ನಿರೀಕ್ಷಿಸುವವರಲ್ಲಿ ಯಾರೂ ನಾಚಿಕೆಪಡದಿರಲಿ; ನಿಷ್ಕಾರಣವಾಗಿ ವಂಚನೆ ಮಾಡುವವರು ನಾಚಿಕೆಪಡಲಿ.


ಆಗ ಸೌಲನು ಯೋನಾತಾನನ ಮಾತನ್ನು ಕೇಳಿ, “ಯೆಹೋವ ದೇವರಾಣೆ ಅವನು ಕೊಲೆಯಾಗುವುದಿಲ್ಲ,” ಎಂದನು.


ಅಹೀಮೆಲೆಕನು ಅರಸನಿಗೆ ಉತ್ತರವಾಗಿ, “ನಿನ್ನ ಸಮಸ್ತ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾರಿದ್ದಾರೆ? ಅವನು ಅರಸನಿಗೆ ಅಳಿಯನೂ ನಿಮ್ಮ ಅಂಗರಕ್ಷಕರ ನಾಯಕನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.


ಎಲಿಯಾಜರನು ಎದ್ದು ಖಡ್ಗ ಹಿಡಿದ ತನ್ನ ಕೈ ದಣಿದು ಮರಗಟ್ಟಿ ಹೋಗುವವರೆಗೂ ಫಿಲಿಷ್ಟಿಯರನ್ನು ಸಂಹರಿಸುತ್ತಿದ್ದನು. ಆ ದಿನ ಯೆಹೋವ ದೇವರು ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ಸೈನಿಕರು ಸುಲಿದುಕೊಳ್ಳುವುದಕ್ಕೆ ಮಾತ್ರ ಅವನ ಹಿಂದೆ ಹಿಂದಿರುಗಿದರು.


ನೀತಿವಂತನ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ಅವರ ನಿರಪರಾಧಿಗಳನ್ನು ಮರಣಕ್ಕೆ ಒಪ್ಪಿಸುತ್ತಾರೆ.


ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ಅದನ್ನು ಅವನು ಕುಡಿಯದೇ ಯೆಹೋವ ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದು,


ನನಗೆ ಉಪಕಾರಕ್ಕೆ ಬದಲಾಗಿ ಕೇಡನ್ನು ಮಾಡುತ್ತಿದ್ದಾರೆ, ನನ್ನ ಸ್ನೇಹಕ್ಕೆ ಬದಲಾಗಿ ನನ್ನ ಮೇಲೆ ದೂರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು