Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:9 - ಕನ್ನಡ ಸಮಕಾಲಿಕ ಅನುವಾದ

9 ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು, ತನ್ನ ಮನೆಯೊಳಗೆ ಕುಳಿತಿರುವಾಗ, ಯೆಹೋವ ದೇವರಿಂದ ಕಳುಹಿಸಲಾದ ದುರಾತ್ಮವು ಅವನ ಮೇಲೆ ಬಂತು. ದಾವೀದನು ತನ್ನ ಕೈಯಿಂದ ಕಿನ್ನರಿ ಬಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಂದು ದಿನ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು ತನ್ನ ಮನೆಯಲ್ಲಿ ಕುಳಿತುಕೊಂಡಿದ್ದಾಗ ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಒಂದು ದಿನ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಆಗ ಸರ್ವೇಶ್ವರನಿಂದ ಬಂದ ದುರಾತ್ಮವೊಂದು ಅವನನ್ನು ಆವರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಒಂದು ದಿವಸ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು ತನ್ನ ಮನೆಯಲ್ಲಿ ಕೂತುಕೊಂಡಿದ್ದಾಗ ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಯೆಹೋವನಿಂದ ಬಂದ ದುರಾತ್ಮವು ಸೌಲನ ಮೈಮೇಲೆ ಬಂದಿತು. ಸೌಲನು ತನ್ನ ಮನೆಯಲ್ಲಿ ಕುಳಿತಿದ್ದನು. ಸೌಲನ ಈಟಿಯು ಅವನ ಕೈಯಲ್ಲಿಯೇ ಇದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:9
7 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಆತ್ಮರು ಸೌಲನನ್ನು ಬಿಟ್ಟುಹೋಗಲು, ದೇವರಿಂದ ಬಂದ ದುರಾತ್ಮವು ಅವನನ್ನು ಪೀಡಿಸಿತು.


ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳಬೇಕು. ದೇವರಿಂದ ಬಂದ ದುರಾತ್ಮವು ನಿನ್ನ ಮೇಲೆ ಬಂದಿರುವಾಗ, ಅವನು ತನ್ನ ಕೈಯಿಂದ ವಾದ್ಯ ಬಾರಿಸಿದರೆ, ನಿನಗೆ ಒಳ್ಳೆಯದಾಗಿರುವುದು,” ಎಂದರು.


ತಿರುಗಿ ಯುದ್ಧ ಉಂಟಾಯಿತು. ಆಗ ದಾವೀದನು ಹೊರಟು, ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರನ್ನು ಸಾಹಸದಿಂದ ಹೊಡೆದನು. ಅವರು ಅವನ ಎದುರಿನಿಂದ ಓಡಿಹೋದರು.


“ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು. “ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಅವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ. ಹೊರಟುಹೋಗಿ ಹಾಗೆ ಮಾಡು,’ ಎಂದರು.


ಆಗ ಸೌಲನ ಸೇವಕರು ಅವನಿಗೆ, “ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಹೆದರಿಸುತ್ತದೆ.


ಒಂದು ದಿನ ದಾವೀದನೂ ಅವನ ಸಂಗಡ ಇದ್ದವರೂ ಅಡಗಿಕೊಂಡಿದ್ದಾರೆ ಎಂಬ ವರ್ತಮಾನವನ್ನು ಸೌಲನು ಕೇಳಿದನು. ಆಗ ಅವನು ಗಿಬೆಯದ ಗುಡ್ಡದಲ್ಲಿ ಒಂದು ಪಿಚುಲ ವೃಕ್ಷದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು. ಅವನ ಸೇವಕರೆಲ್ಲರು ಸುತ್ತಲೂ ನಿಂತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು