1 ಸಮುಯೇಲ 2:14 - ಕನ್ನಡ ಸಮಕಾಲಿಕ ಅನುವಾದ14 ಅದನ್ನು ತಪ್ಪಲೆಯಲ್ಲಾಗಲಿ, ಪಾತ್ರೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವುದನ್ನೆಲ್ಲಾ ಯಾಜಕನು ತನಗೆ ತೆಗೆದುಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲರಿಗೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ, ಭಾಂಡಲ್ಲಾಗಲಿ (ದೊಡ್ಡ ಹಂಡೆ), ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೆಂದು ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುತ್ತಿದ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದನ್ನು ಮಾಂಸ ಬೇಯುತ್ತಿದ್ದ ಕೊಪ್ಪರಿಗೆಯಲ್ಲಾಗಲಿ, ಭಾಂಡದಲ್ಲಾಗಲಿ, ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದೆಲ್ಲವನ್ನು ಯಾಜಕನಿಗೆಂದು ಹೇಳಿ ತೆಗೆದುಕೊಳ್ಳುತ್ತಿದ್ದನು. ಶಿಲೋವಿಗೆ ಬರುವ ಇಸ್ರಯೇಲರೆಲ್ಲರಿಗು ಹೀಗೆಯೇ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅದನ್ನು ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ, ಭಾಂಡದಲ್ಲಾಗಲಿ, ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೋಸ್ಕರ ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯಾಜಕರ ಸೇವಕನು ತ್ರಿಶೂಲವನ್ನು ಕೊಪ್ಪರಿಗೆಯಲ್ಲಾಗಲಿ ತಪ್ಪಲೆಯಲ್ಲಾಗಲಿ ಗಡಿಗೆಯಲ್ಲಾಗಲಿ ಭಾಂಡದಲ್ಲಾಗಲಿ ಚುಚ್ಚಿ ಹೊರ ತೆಗೆದಾಗ, ಅದರೊಂದಿಗೆ ಬರುವ ಮಾಂಸವನ್ನು ಮಾತ್ರ ಯಾಜಕನು ಸ್ವೀಕರಿಸಬೇಕು. ಶೀಲೋವಿಗೆ ಯಜ್ಞವನ್ನರ್ಪಿಸಲು ಬರುವ ಎಲ್ಲ ಇಸ್ರೇಲರೊಂದಿಗೆ ಇದೇ ರೀತಿ ಮಾಡಬೇಕಿತ್ತು. ಅಧ್ಯಾಯವನ್ನು ನೋಡಿ |