Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:17 - ಕನ್ನಡ ಸಮಕಾಲಿಕ ಅನುವಾದ

17 ಈ ಯುವಕರ ಪಾಪವು ಯೆಹೋವ ದೇವರ ದೃಷ್ಟಿಯಲ್ಲಿ ಅಧಿಕವಾಗಿತ್ತು. ಏಕೆಂದರೆ ಅವರು ಯೆಹೋವ ದೇವರ ನೈವೇದ್ಯವನ್ನು ತುಚ್ಛವಾಗಿ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಛೀಕರಿಸಿದ್ದರಿಂದ ಅವರ ಪಾಪವು ಯೆಹೋವನ ದೃಷ್ಟಿಯಲ್ಲಿ ಆಧಿಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗೆ ಸರ್ವೇಶ್ವರನ ನೈವೇದ್ಯವನ್ನು ತುಚ್ಛವಾಗಿ ಕಾಣುತ್ತಿದ್ದುದರಿಂದ ದೇವರ ದೃಷ್ಟಿಯಲ್ಲಿ ಏಲಿಯ ಮಕ್ಕಳ ಪಾಪ ಘೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಫೀಕರಿಸಿದ್ದರಿಂದ ಅವರ ಅಪರಾಧವು ಆತನ ದೃಷ್ಟಿಯಲ್ಲಿ ಅಧಿಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನಿಗೆ ಅರ್ಪಿಸುವ ಯಜ್ಞವನ್ನು ಹೊಫ್ನಿ ಮತ್ತು ಫೀನೆಹಾಸರು ತುಚ್ಛೀಕರಿಸುತ್ತಿದ್ದರು. ಇದು ಯೆಹೋವನಿಗೆ ವಿರೋಧವಾದ ಮಹಾ ಪಾಪವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:17
11 ತಿಳಿವುಗಳ ಹೋಲಿಕೆ  

ನೀವು ಇನ್ನೊಂದನ್ನು ಮಾಡಿದ್ದೀರಿ. ಯೆಹೋವ ದೇವರ ಬಲಿಪೀಠಗಳನ್ನು ಕಣ್ಣೀರಿನಿಂದ ತುಂಬಿಸಿದ್ದೀರಿ. ಆದ್ದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷಿಸದೆ, ಅದನ್ನು ನಿಮ್ಮ ಕೈಯಿಂದ ಮೆಚ್ಚಿಕೆಯಾಗಿ ಅಂಗೀಕರಿಸುವುದಿಲ್ಲವಾದ್ದರಿಂದ ನೀವು ಅಳುತ್ತೀರಿ, ಗೋಳಾಡುತ್ತೀರಿ.


ಸೊದೋಮಿನ ಜನರು ದುಷ್ಟರಾಗಿದ್ದರು ಮತ್ತು ಯೆಹೋವ ದೇವರ ವಿರುದ್ಧ ಬಹಳ ಪಾಪಮಾಡುತ್ತಿದ್ದರು.


ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು. ಹಿಂಸಾಚಾರವು ಲೋಕವನ್ನು ತುಂಬಿಕೊಂಡಿತ್ತು.


ಪಾಪಕ್ಕೆ ಕಾರಣವಾಗಿರುವ ಜಗತ್ತಿಗೆ ಕಷ್ಟ! ಇಂಥ ವಿಷಯಗಳು ಅನಿವಾರ್ಯ. ಆದರೆ ಪಾಪಕ್ಕೆ ಕಾರಣವಾಗಿರುವವರ ಗತಿಯನ್ನು ಏನೆಂದು ಹೇಳಲಿ!


ಏಕೆಂದರೆ ಯೆರೂಸಲೇಮು ಹಾಳಾಗಿದೆ, ಯೆಹೂದವು ಬಿದ್ದುಹೋಗಿದೆ. ಅವರ ನಡೆನುಡಿಗಳು ಯೆಹೋವ ದೇವರಿಗೆ ವಿರುದ್ಧವಾಗಿ ದೇವರ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತಾರೆ.


ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ, ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ. ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ.


ಇದಲ್ಲದೆ ಮನಸ್ಸೆಯು ತನ್ನ ಸ್ವಂತ ಮಗನನ್ನು ಬೆಂಕಿಯಲ್ಲಿ ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನು ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.


ಅವನು ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರನಾದನು. ಆದ್ದರಿಂದ, “ನಿಮ್ರೋದನಂತೆ ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರ” ಎಂಬ ಹೇಳಿಕೆ ಇಂದಿಗೂ ಇದೆ.


“ಮೊದಲು ಕೊಬ್ಬನ್ನು ಸುಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ,” ಎಂದು ಯಾರಾದರೂ ಹೇಳಿದರೆ; ಸೇವಕನು, “ಇಲ್ಲ ಈಗಲೇ ಕೊಡು. ನೀನು ಕೊಡದಿದ್ದರೆ, ನಾನು ಒತ್ತಾಯದಿಂದ ತೆಗೆದುಕೊಳ್ಳುವೆನು,” ಎನ್ನುತ್ತಿದ್ದನು.


ನಾನು ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯತೀರಿಸುವೆನು, ಎಂದು ಹೇಳಿದ್ದೆನು. ಏಕೆಂದರೆ ತನ್ನ ಪುತ್ರರು ದೇವರ ನಿಂದನೆ ಮಾಡಿದಾಗ, ಅವರನ್ನು ಹತೋಟಿಗೆ ತರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು