Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:30 - ಕನ್ನಡ ಸಮಕಾಲಿಕ ಅನುವಾದ

30 “ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:30
39 ತಿಳಿವುಗಳ ಹೋಲಿಕೆ  

ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


“ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”


ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು


ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಆರೋನನಿಗೂ ಅವನ ಪುತ್ರರಿಗೂ ಮುಂಡಾಸುಗಳನ್ನು ಇಟ್ಟು ನಡುಕಟ್ಟುಗಳನ್ನು ಕಟ್ಟಬೇಕು, ಅವರಿಗೆ ಹೀಗೆ ಅವರಿಗೆ ಯಾಜಕತ್ವ ಸೇವೆಯು ಶಾಶ್ವತ ಕಟ್ಟಳೆಯಾಗಿರುವುದು. “ಈ ರೀತಿಯಾಗಿ ಆರೋನನನ್ನೂ ಅವನ ಪುತ್ರರನ್ನೂ ನೀನು ಪ್ರತಿಷ್ಠೆ ಮಾಡಬೇಕು.


“ಆತನು ನನ್ನನ್ನು ಪ್ರೀತಿಸುವುದರಿಂದ ಆತನನ್ನು ಸಂರಕ್ಷಿಸುವೆನು. ಆತನು ನನ್ನ ನಾಮವನ್ನು ಸ್ವೀಕರಿಸಿದ್ದರಿಂದ ಆತನನ್ನು ಕಾಪಾಡುವೆನು.


ಯಾರು ಧನ್ಯವಾದದ ಬಲಿಯನ್ನು ಅರ್ಪಿಸುವರೋ ಅವರೇ ನನ್ನನ್ನು ಘನಪಡಿಸುವರು. ತಮ್ಮ ನಡವಳಿಕೆಯನ್ನು ಕ್ರಮಪಡಿಸಿಕೊಳ್ಳುವವರಿಗೆ ನನ್ನ ರಕ್ಷಣೆಯನ್ನು ತೋರಿಸುವೆನು.”


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ಎಲ್ಲರೂ ತಂದೆಯನ್ನು ಸನ್ಮಾನಿಸುವಂತೆಯೇ ಪುತ್ರನನ್ನೂ ಸನ್ಮಾನಿಸಬೇಕು. ಪುತ್ರನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿದ ತಂದೆಯನ್ನೂ ಸನ್ಮಾನಿಸುವುದಿಲ್ಲ.


ಯೆಹೋವ ದೇವರು ನನ್ನ ನೀತಿಯ ಪ್ರಕಾರ ನನ್ನೊಂದಿಗೆ ವ್ಯವಹರಿಸಿದರು; ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಪ್ರತಿಫಲಕೊಟ್ಟರು.


ಅದಕ್ಕೆ ಯೇಸು, “ನನಗೆ ದೆವ್ವ ಹಿಡಿದಿಲ್ಲ. ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ. ನೀವು ನನ್ನನ್ನು ಅವಮಾನಪಡಿಸುತ್ತೀರಿ.


ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು. ಅವರ ಆಡಳಿತವು ನಿತ್ಯವಾದ ಆಡಳಿತವಾಗಿದೆ. ಅವರ ರಾಜ್ಯವು ತಲತಲಾಂತರಕ್ಕೂ ಇರುವುದು.


ಅದು ನಿಮ್ಮ ಮೂಗಿನಿಂದ ಬಂದು, ನಿಮಗೆ ಅಸಹ್ಯವಾಗುವ ತನಕ ಪೂರ್ತಿ ತಿಂಗಳವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವ ದೇವರನ್ನು ಅಲಕ್ಷ್ಯಮಾಡಿ, ಅವರ ಎದುರಿನಲ್ಲಿ ಅತ್ತು, ‘ನಾವು ಏಕೆ ಈಜಿಪ್ಟಿನಿಂದ ಬಂದೆವು,’ ಎಂದು ಹೇಳುತ್ತೀರಲ್ಲಾ, ಎಂದು ಹೇಳು,” ಎಂದರು.


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ?


ಆದ್ದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧ ಮಾಡಬೇಡಿರಿ. ಏಕೆಂದರೆ ನಾನು ಅದರೊಳಗೆ ವಾಸಿಸುತ್ತೇನೆ. ಯೆಹೋವ ದೇವರಾಗಿರುವ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ,’ ” ಎಂದರು.


“ಮರಗಳು ಅಂಜೂರದ ಗಿಡಕ್ಕೆ, ‘ನೀನು ಬಂದು ನಮ್ಮ ಮೇಲೆ ಆಳಬೇಕು,’ ಎಂದವು.


ಆರೋನನೂ ಅವನ ಪುತ್ರರೂ ದೇವದರ್ಶನದ ಗುಡಾರಕ್ಕೆ ಬರುವ ಸಮಯದಲ್ಲಿಯೂ ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ದೋಷವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. “ಇದೇ ಆರೋನನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.


ಆದಕಾರಣ ಯೆಹೋವ ದೇವರು ಸೊಲೊಮೋನನಿಗೆ, “ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳದೆ ಹೋದುದರಿಂದ ನಿಶ್ಚಯವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಿದುಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.


ಅವರು ನಿದ್ದೆಯಿಂದ ಎಚ್ಚರಗೊಂಡ ಕನಸಿನಂತೆ ಇರುತ್ತಾರೆ. ಯೆಹೋವ ದೇವರೇ, ನಿಮ್ಮ ದೃಷ್ಟಿಯಲ್ಲಿ ಅವರು ಅಲ್ಪರಾಗಿರಲಿ.


ಆತನು ನನ್ನನ್ನು ಕರೆಯುವನು ನಾನು ಆತನಿಗೆ ಉತ್ತರಕೊಡುವೆನು. ಇಕ್ಕಟ್ಟಿನಲ್ಲಿ ನಾನು ಆತನ ಸಂಗಡ ಇದ್ದು, ಆತನನ್ನು ಘನಪಡಿಸುವೆನು.


ಜ್ಞಾನವನ್ನು ನೀನು ಅಮೂಲ್ಯವೆಂದು ಎಣಿಸು, ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿಕೊ, ಆಕೆಯು ನಿನ್ನನ್ನು ಘನಪಡಿಸುವಳು.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ; ಹಂಬಲಿಸಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ, ಅವನ ಸಂತಾನವನ್ನೂ ದಂಡಿಸುತ್ತೇನೆ. ಈ ಜನರೊಳಗೆ ವಾಸಿಸುವುದಕ್ಕೆ ಅವನಿಗೆ ಒಬ್ಬನೂ ಇರುವುದಿಲ್ಲ. ನಾನು ನನ್ನ ಜನರಿಗೆ ಮಾಡುವ ಒಳ್ಳೆಯದನ್ನು ಅವನು ನೋಡುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಅವನು ಯೆಹೋವ ದೇವರಿಗೆ ವಿರೋಧವಾಗಿ ಬೋಧಿಸಿದ್ದಾನೆ.’ ”


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ. ನನ್ನ ಮಂದೆಯನ್ನು ಅವರ ಕೈಯಿಂದ ವಿಚಾರಿಸುವೆನು. ಅವರು ಮಂದೆ ಮೇಯಿಸುವುದನ್ನು ನಿಲ್ಲಿಸಿಬಿಡುತ್ತೇನೆ, ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿಕೊಳ್ಳರು. ಏಕೆಂದರೆ ನಾನು ನನ್ನ ಮಂದೆಯನ್ನು ಅವರಿಗೆ ಆಹಾರವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.


ಹೀಗೆಯೇ ಯೆಹೋವ ದೇವರು ಶೀಲೋವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವುದಕ್ಕೆ ಸೊಲೊಮೋನನು ಅಬಿಯಾತರನನ್ನು ಯೆಹೋವ ದೇವರಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.


“ನಿಮ್ಮ ಸೇವಕನ ಘನತೆಯ ನಿಮಿತ್ತ, ದಾವೀದನು ಇನ್ನೂ ಹೆಚ್ಚಾಗಿ ಹೇಳಿಕೊಳ್ಳುವುದೇನಿದೆ? ಏಕೆಂದರೆ ನೀವು ನಿಮ್ಮ ಸೇವಕನನ್ನು ಚೆನ್ನಾಗಿ ಬಲ್ಲಿರಿ.


ಅವನನ್ನು ಎದುರಿಸಿ, “ಉಜ್ಜೀಯನೇ, ಯೆಹೋವ ದೇವರಿಗೆ ಧೂಪ ಸುಡುವುದು ಪ್ರತಿಷ್ಠಿತರಾದ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು. ನೀನು ಪರಿಶುದ್ಧ ಸ್ಥಳದಿಂದ ಹೊರಟು ಹೋಗು, ಅಪರಾಧ ಮಾಡಿದೆ. ದೇವರಾದ ಯೆಹೋವ ದೇವರಿಂದ ನಿನಗೆ ಗೌರವ ದೊರಕದು,” ಎಂದನು.


ಶುದ್ಧರಿಗೆ ನೀವು ಶುದ್ಧರಾಗಿ ತೋರಿಸುತ್ತೀರಿ. ವಕ್ರ ವ್ಯಕ್ತಿಗೆ ನಿಮ್ಮ ಬುದ್ಧಿವಂತಿಕೆಯನ್ನು ತೋರಿಸುತ್ತೀರಿ.


ತನ್ನ ಜ್ಞಾನಕ್ಕನುಸಾರವಾಗಿ ಮನುಷ್ಯನು ಗೌರವ ಹೊಂದುವನು; ವಕ್ರಹೃದಯವುಳ್ಳವನು ಕಡೆಗಣಿಸಲಾಗುವನು.


“ಏಕೆಂದರೆ ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿಯೂ, ಜನರ ತಿರಸ್ಕಾರಕ್ಕೆ ಈಡಾಗುವಂತೆಯೂ ಮಾಡುವೆನು.


“ಇಗೋ, ನಾನು ನಿಮ್ಮ ಸಂತತಿಯನ್ನು ಗದರಿಸುವೆನು. ನಿಮ್ಮ ಮುಖಗಳ ಮೇಲೆ, ನಿಮ್ಮ ಹಬ್ಬ ಬಲಿಗಳ ಸಗಣಿ ಬಳಿಯುವೆನು. ಅದರೊಂದಿಗೆ ನೀವು ಒಯ್ಯಲಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು