1 ಸಮುಯೇಲ 2:32 - ಕನ್ನಡ ಸಮಕಾಲಿಕ ಅನುವಾದ32 ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವುಗಳಿಗೆ ಬದಲಾಗಿ, ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವೆ. ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ವೃದ್ಧನೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನಿನ್ನ ವೈರಿಯು ನನ್ನ ಮಂದಿರದಲ್ಲಿ ಸೇವೆಮಾಡುವುದನ್ನು ನೋಡುವಿ. ಇಸ್ರಾಯೇಲರಿಗೆ ಸರ್ವಶುಭವನ್ನು ದಯಪಾಲಿಸುವೆನು; ಆದರೆ ನಿನ್ನ ಮನೆಯಲ್ಲಿ ಪೂರ್ಣಾಯುಷ್ಯವನ್ನು ಹೊಂದಿ ಜೀವಿಸುವವರು ಇನ್ನು ಮುಂದೆ ಒಬ್ಬರಾದರು ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ನಿನ್ನ ವೈರಿಯೇ ನನ್ನ ಮಂದಿರದಲ್ಲಿ ಸೇವೆಮಾಡುವುದನ್ನು ನೀನು ನೋಡುವೆ. ಇಸ್ರಯೇಲರಿಗೆ ಸರ್ವಶುಭವನ್ನು ದಯಪಾಲಿಸುವೆನು; ಆದರೆ ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನಿನ್ನ ವೈರಿಯು ನನ್ನ ಮಂದಿರದಲ್ಲಿ ಸೇವೆಮಾಡುವದನ್ನು ನೋಡುವಿ. ಇಸ್ರಾಯೇಲ್ಯರಿಗೆ ಸರ್ವಶುಭವನ್ನು ದಯಪಾಲಿಸುವೆನು; ಆದರೆ ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಇಸ್ರೇಲಿಗೆ ಶುಭಗಳಾದರೂ ನಿನ್ನ ಮನೆಯಲ್ಲಿ ಅಶುಭಗಳಿರುವುದನ್ನು ನೀನು ನೋಡುವೆ. ನಿನ್ನ ಕುಟುಂಬದಲ್ಲಿ ಯಾರೂ ವೃದ್ಧಾಪ್ಯದವರೆಗೆ ಬದುಕುವುದಿಲ್ಲ. ಅಧ್ಯಾಯವನ್ನು ನೋಡಿ |