Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:33 - ಕನ್ನಡ ಸಮಕಾಲಿಕ ಅನುವಾದ

33 ನನ್ನ ಬಲಿಪೀಠದ ಸೇವೆಯಿಂದ ನಾನು ತೆಗೆದು ಬಿಡದ ಮನುಷ್ಯನು, ನಿನ್ನ ಕಣ್ಣುಗಳನ್ನು ಕುಂದಿಸಿ, ನಿನ್ನ ಹೃದಯವನ್ನು ವೇದನೆ ಪಡಿಸುವುದಕ್ಕೆ ಇರುವನು. ನಿನ್ನ ಮನೆಯ ಸಂತತಿಯವರೆಲ್ಲಾ ಯೌವನ ಪ್ರಾಯದಲ್ಲಿಯೇ ಖಡ್ಗದಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಾನು ನಿನ್ನ ಸಂತಾನವನ್ನು ನನ್ನ ಸಾನ್ನಿಧ್ಯ ಸೇವೆಯಿಂದ ತೆಗೆದುಹಾಕದೆ, ಒಬ್ಬನನ್ನಾದರೂ ಉಳಿಸಿದರೆ ಅವನು ನಿನ್ನ ಕಣ್ಣೀರಿಗೂ ಮತ್ತು ಮನೋವ್ಯಥೆಗೂ ಕಾರಣನಾಗುವನು. ನಿನ್ನ ಸಂತಾನದವರೆಲ್ಲರೂ ಕತ್ತಿಯಿಂದ ಸಂಹಾರವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನನ್ನ ಸಾನ್ನಿಧ್ಯ ಸೇವೆಯಿಂದ ನಿಮ್ಮಲ್ಲಿ ಒಬ್ಬನನ್ನು ಉಳಿಸಿ ಮಿಕ್ಕವರನ್ನು ತೆಗೆದುಹಾಕುವೆನು. ಉಳಿಸಲಾದವನು ಕೂಡ ಕುರುಡನಾಗಿ ನಿನ್ನ ವ್ಯಥೆಗೆ ಕಾರಣನಾಗುವನು. ನಿನ್ನ ಸಂತಾನದವರೆಲ್ಲರು ಕತ್ತಿಯಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಾನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದುಹಾಕದೆ ಒಬ್ಬನನ್ನಾದರೂ ಉಳಿಸಿದರೆ ಅವನು ನಿನ್ನ ಕಣ್ಗೇಡಿಗೂ ಮನೋವ್ಯಥೆಗೂ ಕಾರಣನಾಗುವನು. ನಿನ್ನ ಸಂತಾನದವರೆಲ್ಲರೂ ಕತ್ತಿಯಿಂದ ಸಂಹೃತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನನ್ನ ಯಜ್ಞವೇದಿಕೆಯ ಬಳಿಯಲ್ಲಿ ಯಾಜಕಸೇವೆ ಮಾಡುವುದಕ್ಕಾಗಿ ನಾನು ಒಬ್ಬನನ್ನು ಉಳಿಸಿಕೊಳ್ಳುವೆನು. ಅವನು ಬಹುಮುಪ್ಪಿನವರೆಗೂ ಬದುಕುವನು. ಅವನ ಕಣ್ಣುಗಳು ಕಾಣದೆ ಹೋಗುವವರೆಗೂ ಬಲಹೀನನಾಗುವವರೆಗೂ ಅವನು ಬದುಕುವನು. ಉಳಿದ ನಿನ್ನ ಸಂತತಿಯವರೆಲ್ಲಾ ಖಡ್ಗದಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:33
9 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಬಲಿಯಾಗಿ ಅರ್ಪಿಸಿದ್ದಾನೆ, ಅರಸನ ಮಕ್ಕಳೆಲ್ಲರನ್ನೂ, ಯಾಜಕನಾದ ಅಬಿಯಾತರನನ್ನೂ, ಸೇನಾಧಿಪತಿ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ. ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ.


ಅದೋನೀಯನು ಚೆರೂಯಳ ಮಗ ಯೋವಾಬ, ಯಾಜಕ ಅಬಿಯಾತರನ ಜೊತೆ ಸೇರಿ ಮಾತುಕತೆ ಮಾಡಿದನು. ಅವರು ಅದೋನೀಯನನ್ನು ಹಿಂಬಾಲಿಸಿ, ಅವನಿಗೆ ಸಹಾಯಕರಾಗಿದ್ದರು.


ನಾನು ಸಹ ಇದನ್ನು ನಿಮಗೆ ಮಾಡುವೆನು: ನಿಮ್ಮ ಮೇಲೆ ಭೀತಿಯನ್ನು ಉಂಟುಮಾಡುವ, ಕಣ್ಣುಗಳನ್ನು ಕ್ಷೀಣಿಸುವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗುವಂತೆಯೂ ಮಾಡುವ ಕ್ಷಯರೋಗವನ್ನೂ ಚಳಿಜ್ವರವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ಬೀಜವನ್ನು ಬಿತ್ತುವಿರಿ. ಏಕೆಂದರೆ ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.


ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವುಗಳಿಗೆ ಬದಲಾಗಿ, ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವೆ. ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ವೃದ್ಧನೂ ಇರುವುದಿಲ್ಲ.


“ ‘ಇದಲ್ಲದೆ ನಿನಗೆ ಗುರುತಾಗಿ ಹೊಫ್ನಿಯು, ಫೀನೆಹಾಸನು ಎಂಬ ಇಬ್ಬರು ಮಕ್ಕಳು ಒಂದೇ ದಿವಸದಲ್ಲಿ ಸಾಯುವರು.


ಆಗ ಅರಸನು ದೋಯೇಗನಿಗೆ, “ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು,” ಎಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು, ನಾರುಬಟ್ಟೆಯ ಏಫೋದನ್ನು ಧರಿಸಿಕೊಳ್ಳುವವರಾದ ಎಂಬತ್ತೈದು ಯಾಜಕರನ್ನು ಆ ದಿನದಲ್ಲಿ ಕೊಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು