1 ಸಮುಯೇಲ 2:35 - ಕನ್ನಡ ಸಮಕಾಲಿಕ ಅನುವಾದ35 ಆದರೆ ನನ್ನ ಹೃದಯಕ್ಕೂ, ನನ್ನ ಮನಸ್ಸಿಗೂ ಸಮರ್ಪಕವಾದದ್ದನ್ನೇ ಮಾಡುವ ನಂಬಿಗಸ್ತನಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ, ಅವನಿಗೆ ಸ್ಥಿರವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ಸೇವೆಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ನನ್ನ ಹೃದಯದ ಹಾಗೂ ಮನಸ್ಸಿನ ಆಲೋಚನೆಗಳನ್ನು ನೆರವೇರಿಸುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತ ಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ನನ್ನ ಹೃನ್ಮನಗಳಿಗೆ ಸರಿಯಾದುದನ್ನೇ ಮಾಡುವ ಒಬ್ಬ ಶ್ರದ್ಧೆಯುಳ್ಳ ಯಾಜಕನನ್ನು ಎಬ್ಬಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ನನ್ನ ದೃಷ್ಟಿಗೂ ಮನಸ್ಸಿಗೂ ಸರಿಯಾದದ್ದನ್ನೇ ಮಾಡುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ನಾನು ನನಗೋಸ್ಕರ ನಂಬಿಗಸ್ತನಾದ ಯಾಜಕನೊಬ್ಬನನ್ನು ಆರಿಸಿಕೊಳ್ಳುತ್ತೇನೆ. ಈ ಯಾಜಕನು ನಾನು ಹೇಳುವುದನ್ನು ಕೇಳುವನು ಮತ್ತು ನನಗೆ ಇಷ್ಟವಾದುದನ್ನು ಮಾಡುವನು. ಈ ಯಾಜಕನ ಕುಟುಂಬವನ್ನು ನಾನು ಬಲಗೊಳಿಸುವೆನು. ನಾನು ಆರಿಸಿಕೊಂಡಿರುವ ರಾಜನ ಬಳಿಯಲ್ಲಿ ಅವನು ಸದಾಕಾಲ ಸೇವೆಮಾಡುವನು. ಅಧ್ಯಾಯವನ್ನು ನೋಡಿ |
ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ಆ ದಿವಸದಿಂದ ಈಚೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಮೇಲೆ ಕುಗ್ಗಿಸದೆ ಇರುವರು. “ ‘ನಿನ್ನನ್ನು, ನಿನ್ನ ಸಮಸ್ತ ಶತ್ರುಗಳಿಂದ ತಪ್ಪಿಸಿ, ನಿನಗೆ ವಿಶ್ರಾಂತಿಯನ್ನು ಉಂಟುಮಾಡುವೆನು. ಇದಲ್ಲದೆ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ, ನಾನು ನಿನ್ನ ರಾಜವಂಶವನ್ನು ಸ್ಥಿರಪಡಿಸುವೆನು.