1 ಸಮುಯೇಲ 2:36 - ಕನ್ನಡ ಸಮಕಾಲಿಕ ಅನುವಾದ36 ಆಗ ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡಬಿದ್ದು, ಒಂದು ಬೆಳ್ಳಿಯ ಹಣವನ್ನೂ, ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ, “ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆಯಲ್ಲಿ ಸೇರಿಸಿಕೋ, ಎಂದು ಹೇಳುವರು,” ಎಂದರು.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡ ಬಿದ್ದು, ನಮಗೆ ಒಂದು ಬೆಳ್ಳಿಕಾಸನ್ನು ರೊಟ್ಟಿಯ ಚೂರನ್ನು ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ಯಾಜಕನ ಸೇವೆಯಲ್ಲಿ ಯಾವುದಕ್ಕಾದರೂ ನಮ್ಮನ್ನು ಸೇರಿಸಿಕೋ” ಎಂದು ಅವನನ್ನು ಬೇಡಿಕೊಳ್ಳುವರು, ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ನಿನ್ನ ಮನೆಯಲ್ಲಿ ಅಳಿದು ಉಳಿದವರು ಬಂದು ಅವನ ಮುಂದೆ ಅಡ್ಡಬೀಳುವರು; ‘ನಮಗೊಂದು ಬೆಳ್ಳಿಕಾಸನ್ನಾದರೂ ರೊಟ್ಟಿ ಚೂರನ್ನಾದರೂ ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ದೇವಸ್ಥಾನದ ಸೇವೆಯಲ್ಲಿ ಯಾವುದಕ್ಕಾದರು ನಮ್ಮನ್ನು ಸೇರಿಸಿಕೋ’ ಎಂದು ಬೇಡಿಕೊಳ್ಳುವರು". ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡಬಿದ್ದು - ನಮಗೆ ಒಂದು ದುಡ್ಡನ್ನೂ ರೊಟ್ಟಿಯ ಚೂರನ್ನೂ ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ದೇವಸ್ಥಾನದ ಸೇವೆಯಲ್ಲಿ ಯಾವದಕ್ಕಾದರೂ ನಮ್ಮನ್ನು ಸೇರಿಸಿಕೋ ಎಂದು ಅವನನ್ನು ಬೇಡಿಕೊಳ್ಳುವರು ಎಂಬದೇ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಆಗ ನಿನ್ನ ಕುಟುಂಬದವರಲ್ಲಿ ಉಳಿದವರೆಲ್ಲ ಬಂದು ಈ ಯಾಜಕನಿಗೆ ಅಡ್ಡಬೀಳುವರು. ಈ ಜನರೆಲ್ಲ ಅವನಲ್ಲಿ ಬಿಡಿಕಾಸನ್ನೂ ರೊಟ್ಟಿಯ ಚೂರನ್ನೂ ಬೇಡುವರು. ಅವರೆಲ್ಲ, “ನಮಗೆ ದೇವಸ್ಥಾನದಲ್ಲಿ ಯಾಜಕನ ಹುದ್ದೆಯನ್ನು ಕೊಡು, ಅದರಿಂದ ಹೊಟ್ಟೆ ತುಂಬಿಸಿಕೊಳ್ಳುತ್ತೇವೆ ಎಂದು ಬೇಡಿಕೊಳ್ಳುವರು”’” ಎಂದನು. ಅಧ್ಯಾಯವನ್ನು ನೋಡಿ |