1 ಸಮುಯೇಲ 2:5 - ಕನ್ನಡ ಸಮಕಾಲಿಕ ಅನುವಾದ5 ತೃಪ್ತಿಪಟ್ಟವರು ಆಹಾರಕ್ಕಾಗಿ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಹಸಿದವರು ಇನ್ನು ಮುಂದೆ ಹಸಿಯರು. ಬಂಜೆಯಾದವಳು ಏಳುಮಂದಿ ಮಕ್ಕಳನ್ನು ಹೆತ್ತಳು. ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನಳಾದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹೊಟ್ಟೆತುಂಬಾ ಊಟಮಾಡುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ; ಹಸಿದವರು ಉಂಡು ಸುಖದಿಂದಿರುತ್ತಾರೆ. ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು; ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಉಂಡು ಸುಖದಿಂದಿರುವರು ಹಸಿವುಗೊಂಡವರು ಹೊಟ್ಟೆಗಾಗಿ ಕೂಲಿಮಾಡುತ್ತಿಹರು ತೃಪ್ತರಿದ್ದವರು. ಬಂಜೆ ಹೆರುವಳು ಆರೇಳು ಮಕ್ಕಳನು ಒಬ್ಬಂಟಿಗಳಾಗಿರುವಳು ಮಕ್ಕಳಿವೆ ಎಂದವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೊಟ್ಟೆತುಂಬಾ ಉಣ್ಣುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ. ಹಸಿವುಗೊಂಡವರು ಉಂಡು ಸುಖದಿಂದಿರುತ್ತಾರೆ. ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು; ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಹಿಂದೆ ಆಹಾರವನ್ನು ಸಮೃದ್ಧಿಕರವಾಗಿ ಹೊಂದಿದ್ದವರು ಆಹಾರಕ್ಕಾಗಿ ದುಡಿಯಬೇಕಾಗುವುದು. ಹಿಂದೆ ಆಹಾರವಿಲ್ಲದೆ ಹಸಿದಿದ್ದವರಿಗೆ ಇಂದು ಆಹಾರ ಸಮೃದ್ಧಿಕರವಾಗಿರುವುದು! ಬಂಜೆಗೆ ಈಗ ಏಳು ಜನ ಮಕ್ಕಳಿರುವರು. ಆದರೆ ಹೆಚ್ಚು ಮಕ್ಕಳಿದ್ದ ತಾಯಿ ಇಂದು ವೇದನೆಗೊಂಡಿರುವಳು ಏಕೆಂದರೆ ಅವಳ ಮಕ್ಕಳೆಲ್ಲ ಸತ್ತುಹೋಗಿದ್ದಾರೆ. ಅಧ್ಯಾಯವನ್ನು ನೋಡಿ |