Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:8 - ಕನ್ನಡ ಸಮಕಾಲಿಕ ಅನುವಾದ

8 ದೇವರು ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುತ್ತಾರೆ. ಭಿಕ್ಷುಕನನ್ನು ತಿಪ್ಪೆ ಗುಂಡಿಯಿಂದ ತೆಗೆದು ಉನ್ನತಕ್ಕೇರಿಸುವವರೂ ಆಗಿದ್ದಾರೆ. ಅವರನ್ನು ಪ್ರಧಾನರ ಮಧ್ಯದಲ್ಲಿ ಕೂಡ್ರಿಸುತ್ತಾರೆ. ಘನತೆಯ ಸಿಂಹಾಸನವನ್ನು ಬಾಧ್ಯವಾಗಿ ಕೊಡುತ್ತಾರೆ. “ಭೂಮಿಯ ಆಧಾರ ಸ್ತಂಭಗಳು ಯೆಹೋವ ದೇವರದ್ದೇ. ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆತನು ದೀನನನ್ನು ಧೂಳಿಯಿಂದ ಎತ್ತಿ ದರಿದ್ರನನ್ನು ತಿಪ್ಪೆಯಿಂದ ಎಬ್ಬಿಸಿ ಪ್ರಭುಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂವಿುಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಬಡವರನ್ನು ಧೂಳಿನಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ದೀನರನ್ನು ತಿಪ್ಪೆಯಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ಬಡವರನ್ನು ರಾಜಕುಮಾರರೊಂದಿಗೆ ಕುಳ್ಳಿರಿಸುತ್ತಾನೆ. ಆತನು ಬಡವರನ್ನು ಗೌರವಪೀಠದಲ್ಲಿ ಕುಳ್ಳಿರಿಸುತ್ತಾನೆ. ಲೋಕವೂ ಅದರ ಅಡಿಪಾಯಗಳೂ ಯೆಹೋವನವೇ. ಆತನು ಆ ಕಂಬಗಳ ಮೇಲೆ ಲೋಕವನ್ನು ನಿಲ್ಲಿಸಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:8
31 ತಿಳಿವುಗಳ ಹೋಲಿಕೆ  

ಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಈ ದಾನಿಯೇಲನಲ್ಲಿ ಉತ್ತಮ ಯೋಗ್ಯತೆಗಳು ಇದ್ದುದರಿಂದ ಅವನು ಉಪರಾಜರಿಗಿಂತಲೂ, ದೇಶಾಧಿಪತಿಗಿಂತಲೂ ಶ್ರೇಷ್ಠನಾಗಿದ್ದನು. ಈ ಕಾರಣದಿಂದ ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಉದ್ದೇಶಿಸಿದ್ದನು.


ನಮ್ಮನ್ನು ಒಂದು ರಾಜ್ಯವನ್ನಾಗಿಯೂ ತಮ್ಮ ತಂದೆಯಾದ ದೇವರಿಗೆ ಸೇವೆ ಸಲ್ಲಿಸುವ ಯಾಜಕರನ್ನಾಗಿಯೂ ಮಾಡಿರುವ ಕ್ರಿಸ್ತ ಯೇಸುವಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು, ಬಲವು ಇರಲಿ ಆಮೆನ್.


ಆ ಯುವಕನು ಸೆರೆಮನೆಯಿಂದ ರಾಜ್ಯವನ್ನಾಳುವುದಕ್ಕಾಗಿ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.


ಆಗ ಸಮುಯೇಲನು, “ನೀನು ನಿನ್ನ ದೃಷ್ಟಿಯಲ್ಲಿ ಚಿಕ್ಕವನಾಗಿರುವಾಗಲೇ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ನೇಮಕವಾದಿಯಲ್ಲವೆ? ಯೆಹೋವ ದೇವರು ನಿನ್ನನ್ನು ಇಸ್ರಾಯೇಲರ ಮೇಲೆ ಅರಸನಾಗಿ ಅಭಿಷೇಕಿಸಿದರಲ್ಲವೆ?


ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿರಿ, ಅವರು ಭೂಮಿಯ ಮೇಲೆ ಆಳುವರು!” ಎಂದು ಹೇಳಿದರು.


“ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.


ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ಯುಗಯುಗಾಂತರಗಳಿಗೂ ಅದು ಕದಲದ ಹಾಗೆ, ದೇವರು ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಸ್ಥಾಪಿಸಿದ್ದಾರೆ.


ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ; ಆಕಾಶಗಳು ನಿಮ್ಮ ಕೈಕೆಲಸಗಳಾಗಿವೆ.


ಏಕೆಂದರೆ ಅವರು ಸಮುದ್ರಗಳ ಮೇಲೆ ಅದನ್ನು ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರಪಡಿಸಿದ್ದಾರೆ.


ಆಗ ಫರೋಹನು ಯೋಸೇಫನನ್ನು ಕರೆತರುವಂತೆ ಸೇವಕರನ್ನು ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.


ಯೋಬನು ಮುರಿದ ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯ ಮೇಲೆ ಕುಳಿತುಕೊಂಡನು.


ನೀನೇ ನನ್ನ ಅರಮನೆಯ ಅಧಿಕಾರಿಯಾಗಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಅಧೀನವಾಗಿರಲಿ. ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು,” ಎಂದನು.


“ ‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’


“ನಾನು ನಿನ್ನನ್ನು ಧೂಳಿನಿಂದ ಎಬ್ಬಿಸಿ, ನಿನ್ನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ಇರಿಸಿದೆನು. ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು, ನನ್ನ ಜನರಾದ ಇಸ್ರಾಯೇಲರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪಮಾಡಲು ಪ್ರೇರೇಪಿಸಿದೆ.


ಯೇಹುವು ಎದ್ದು ಮನೆಯೊಳಕ್ಕೆ ಹೋದನು. ಆಗ ಪ್ರವಾದಿಯು ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ಯೆಹೋವ ದೇವರ ಜನರಾದ ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ.


ಹೀಗೆ ಹೇಳಿದನು: “ಬೆತ್ತಲೆಯಾಗಿ ನನ್ನ ತಾಯಿಯ ಗರ್ಭದಿಂದ ಬಂದೆನು, ಬೆತ್ತಲೆಯಾಗಿ ಗತಿಸಿ ಹೋಗುವೆನು. ಯೆಹೋವ ದೇವರು ಕೊಟ್ಟರು, ಯೆಹೋವ ದೇವರು ತೆಗೆದುಕೊಂಡರು; ಯೆಹೋವ ದೇವರ ನಾಮಕ್ಕೆ ಸ್ತೋತ್ರವಾಗಲಿ.”


ಭೂಮಿಯೂ ಅದರ ನಿವಾಸಿಗಳೆಲ್ಲರೂ ಬೆರಗಾಗಿದ್ದಾರೆ. ನಾನು ಅದರ ಸ್ತಂಭಗಳನ್ನು ನಿಲ್ಲಿಸಿದ್ದೇನೆ.


ಆದರೆ ದೇವರು ನ್ಯಾಯತೀರಿಸುವವರಾಗಿದ್ದಾರೆ. ದೇವರು ಒಬ್ಬನನ್ನು ತಗ್ಗಿಸುತ್ತಾರೆ, ಒಬ್ಬನನ್ನು ಎತ್ತುತ್ತಾರೆ.


ಆದರೂ ದೇವರು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ, ಅವನ ಕುಟುಂಬಗಳನ್ನು ಮಂದೆಯ ಹಾಗೆ ಮಾಡಿದರು.


ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು. ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾಸನವಾಗಿರುವನು.


‘ಅಹಂಕಾರದಿಂದ ವರ್ತಿಸಬೇಡಿರಿ,’ ಎಂದು ಅಹಂಕಾರಿಗೆ ಹೇಳುತ್ತೇನೆ. ‘ನಿಮ್ಮ ಕೊಂಬು ಎತ್ತಬೇಡಿರಿ,’ ಎಂದು ದುಷ್ಟರಿಗೆ ಹೇಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು