1 ಸಮುಯೇಲ 20:1 - ಕನ್ನಡ ಸಮಕಾಲಿಕ ಅನುವಾದ1 ದಾವೀದನು ರಾಮದ ನಯೋತಿನಿಂದ ಓಡಿಹೋಗಿ ಯೋನಾತಾನನ ಬಳಿಗೆ ಬಂದು, ಅವನ ಮುಂದೆ, “ನಾನು ಏನು ಮಾಡಿದೆನು? ನನ್ನ ಅಕ್ರಮವೇನು? ನಿನ್ನ ತಂದೆಯು ನನ್ನ ಪ್ರಾಣವನ್ನು ಹುಡುಕುವ ಹಾಗೆ ನಾನು ಅವನಿಗೆ ಮಾಡಿದ ದ್ರೋಹವೇನು?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದಾವೀದನು ರಾಮದ ನಯೋತಿನಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ, “ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ, ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವುದು?” ಎನ್ನಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದಾವೀದನು ರಾಮಾದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದನು. “ನಿನ್ನ ತಂದೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ನಾನೇನು ಮಾಡಿದೆ? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹ ಯಾವುದು?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದಾವೀದನು ರಾಮದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ - ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲಾ; ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವದು ಅನ್ನಲು ಯೋನಾತಾನನು ಅವನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದಾವೀದನು ರಾಮದ ಪಾಳೆಯದಿಂದ ಓಡಿಹೋದನು. ದಾವೀದನು ಯೋನಾತಾನನ ಬಳಿಗೆ ಹೋಗಿ, “ನಾನು ಮಾಡಿರುವ ತಪ್ಪೇನು? ನನ್ನ ಅಪರಾಧವೇನು? ನಿನ್ನ ತಂದೆಯು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವುದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |
ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.