Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:10 - ಕನ್ನಡ ಸಮಕಾಲಿಕ ಅನುವಾದ

10 ದಾವೀದನು ಯೋನಾತಾನನಿಗೆ, “ನಿನ್ನ ತಂದೆಯು ನಿನಗೆ ಕಠಿಣವಾದ ಉತ್ತರ ಹೇಳಿದರೆ, ಅದನ್ನು ನನಗೆ ತಿಳಿಸುವವರು ಯಾರು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದಾವೀದನು, “ನಿನ್ನ ತಂದೆಯು ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ತಿಳಿಸುವಿ?” ಎಂದು ಅವನನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದಾವೀದನು, “ನಿನ್ನ ತಂದೆ ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ನನಗೆ ತಿಳಿಸುವೆ?” ಎಂದು ಅವನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದಾವೀದನು - ನಿನ್ನ ತಂದೆಯು ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ತಿಳಿಸುವಿ ಎಂದು ಅವನನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದಾವೀದನು, “ನಿನ್ನ ತಂದೆಯು ನಿನಗೆ ಕೆಟ್ಟ ಸಂಗತಿಗಳನ್ನು ಹೇಳಿದರೆ, ನನ್ನನ್ನು ಎಚ್ಚರಿಸುವವರು ಯಾರು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:10
10 ತಿಳಿವುಗಳ ಹೋಲಿಕೆ  

ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ; ಆದರೆ ಧನಿಕನು ಕಠಿಣವಾಗಿ ಉತ್ತರ ಕೊಡುತ್ತಾರೆ.


ಆದರೆ ಅರಸನು ಜನರಿಗೆ ಕಠಿಣವಾದ ಉತ್ತರವನ್ನು ಕೊಟ್ಟು, ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ನಿರಾಕರಿಸಿ,


ಈಗ ನೀನು ಮಾಡಬೇಕಾದದ್ದೇನೆಂದು ಆಲೋಚಿಸಿ ನೋಡು. ಏಕೆಂದರೆ ಕೇಡು ನಮ್ಮ ಯಜಮಾನನ ಮೇಲೂ ಅವನ ಮನೆಯ ಮೇಲೆಯೂ ನಿಶ್ಚಯವಾಗಿದೆ. ದುಷ್ಟನಾಗಿರುವ ಅವನ ಸಂಗಡ ಮಾತನಾಡುವುದು ಅಸಾಧ್ಯ,” ಎಂದನು.


ಆಗ ಕೆಲಸದವರಲ್ಲಿ ಯುವಕನಾದವನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ, “ನಮ್ಮ ಯಜಮಾನನನ್ನು ವಂದಿಸಲು ದಾವೀದನು ಮರುಭೂಮಿಯಿಂದ ದೂತರನ್ನು ಕಳುಹಿಸಿದನು.


ನಾಬಾಲನು ದಾವೀದನ ಸೇವಕರಿಗೆ ಉತ್ತರವಾಗಿ, “ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಉಂಟು.


ದೇಶದ ಅಧಿಪತಿಯಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ, ದೇಶದ ಗೂಢಚಾರರನ್ನಾಗಿ ನಮ್ಮನ್ನು ಎಣಿಸಿದನು.


ಯೋಸೇಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದರೂ, ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ, ಅವರಿಗೆ, “ಎಲ್ಲಿಂದ ಬಂದಿರಿ?” ಎಂದನು. ಅದಕ್ಕೆ ಅವರು, “ಆಹಾರ ಕೊಂಡುಕೊಳ್ಳುವುದಕ್ಕೆ ಕಾನಾನ್ ದೇಶದಿಂದ ಬಂದೆವು,” ಎಂದರು.


ಆಗ ಯೋನಾತಾನನು, “ಅದು ನಿನಗೆ ದೂರವಾಗಿರಲಿ. ಏಕೆಂದರೆ ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ, ನಾನು ಅದನ್ನು ನಿನಗೆ ತಿಳಿಸದೆ ಇರುವೆನೋ?” ಎಂದನು.


ಆಗ ಯೋನಾತಾನನು ದಾವೀದನಿಗೆ, “ನಾವು ಹೊಲಕ್ಕೆ ಹೋಗೋಣ ಬಾ,” ಎಂದನು. ಹಾಗೆಯೇ ಅವರಿಬ್ಬರೂ ಹೊಲಕ್ಕೆ ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು