1 ಸಮುಯೇಲ 20:13 - ಕನ್ನಡ ಸಮಕಾಲಿಕ ಅನುವಾದ13 ಆದರೆ ನಿನಗೆ ಕೇಡು ಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ, ಅದನ್ನು ನಿನಗೆ ತಿಳಿಸಿ ನೀನು ಸಮಾಧಾನದಿಂದ ಹೋಗುವಹಾಗೆ ನಿನ್ನನ್ನು ಕಳುಹಿಸುವೆನು. ಯೆಹೋವ ದೇವರು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನ ತಂದೆಯು ನಿನಗೆ ಕೇಡುಮಾಡುವ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ, ನೀನು ತಪ್ಪಿಸಿಕೊಂಡು ಸುರಕ್ಷಿತವಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ, ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನನ್ನ ತಂದೆ ನಿನಗೆ ಕೇಡುಮಾಡಲು ಮನಸ್ಸುಮಾಡಿದ್ದಾರೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ ನೀನು ತಪ್ಪಿಸಿಕೊಂಡು ಸುರಕ್ಷಿತನಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ, ಸರ್ವೇಶ್ವರ ನನಗೆ ಏನು ಬೇಕಾದರೂ ಮಾಡಲಿ. ಅವರು ನನ್ನ ತಂದೆಯೊಂದಿಗೆ ಇದ್ದಹಾಗೆ ನಿನ್ನೊಂದಿಗೂ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನ್ನ ತಂದೆಯು ನಿನಗೆ ಕೇಡುಮಾಡ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ ಅದನ್ನೂ ನಿನಗೆ ತಿಳಿಸಿ ನೀನು ತಪ್ಪಿಸಿಕೊಂಡು ಸುರಕ್ಷಿತನಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ. ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನನ್ನ ತಂದೆಯು ನಿನಗೆ ಕೇಡುಮಾಡಬೇಕೆಂದಿದ್ದರೆ, ಅದನ್ನು ನಾನು ನಿನಗೆ ತಿಳಿಸಿ, ನೀನು ಸುರಕ್ಷಿತವಾಗಿರಲು ಅವಕಾಶ ಮಾಡಿಕೊಡುತ್ತೇನೆ. ಈ ಕಾರ್ಯವನ್ನು ನಾನು ಮಾಡದೆ ಹೋದರೆ ಯೆಹೋವನು ನನ್ನನ್ನು ದಂಡಿಸಲಿ. ಯೆಹೋವನು ನನ್ನ ತಂದೆಯ ಜೊತೆಯಲ್ಲಿದ್ದಂತೆ ನಿನ್ನ ಜೊತೆಯೂ ಇರಲಿ. ಅಧ್ಯಾಯವನ್ನು ನೋಡಿ |