Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:2 - ಕನ್ನಡ ಸಮಕಾಲಿಕ ಅನುವಾದ

2 ಯೋನಾತಾನನು ಅವನಿಗೆ, “ಅದು ಆಗಬಾರದು. ನೀನು ಸಾಯುವುದಿಲ್ಲ; ನನ್ನ ತಂದೆಯು ನನಗೆ ತಿಳಿಸದೆ ಯಾವ ಚಿಕ್ಕ ಕಾರ್ಯವನ್ನಾದರೂ, ದೊಡ್ಡ ಕಾರ್ಯವನ್ನಾದರೂ ಮಾಡುವುದಿಲ್ಲ. ಈ ಕಾರ್ಯವನ್ನು ಯಾತಕ್ಕೆ ನನ್ನ ತಂದೆಯು ನನಗೆ ಬಚ್ಚಿಟ್ಟನು? ಹಾಗೆ ಆಗದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೋನಾತಾನನು ಅವನಿಗೆ, “ಇದು ಆಗಲೇಬಾರದು, ನಿನಗೆ ಮರಣವಾಗಕೂಡದು. ನನ್ನ ತಂದೆಯು ಅಲ್ಪಕಾರ್ಯವನ್ನಾಗಲಿ, ಮಹಾಕಾರ್ಯವನ್ನಾಗಲಿ ನನಗೆ ತಿಳಿಸದೇ ಮಾಡುವುದಿಲ್ಲ. ಈ ಕಾರ್ಯವನ್ನು ನನಗೆ ಹೇಗೆ ಮರೆಮಾಡಲು ಸಾಧ್ಯ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೋನಾತಾನನು ಅವನಿಗೆ, “ಇದು ಎಂದಿಗೂ ಆಗಲೇಬಾರದು; ನಿನಗೆ ಮರಣವಾಗಕೂಡದು. ನನ್ನ ತಂದೆ ಚಿಕ್ಕಕಾರ್ಯವನ್ನಾಗಲಿ ದೊಡ್ಡಕಾರ್ಯವನ್ನಾಗಲಿ ನನಗೆ ತಿಳಿಸದೆ ಮಾಡುವುದಿಲ್ಲ; ಇಂಥ ಕಾರ್ಯವನ್ನು ನನಗೆ ಹೇಗೆ ಮರೆಮಾಡಿಯಾರು? ಇಲ್ಲ, ಇದು ನಿಜವಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದು ಆಗಲೇಬಾರದು; ನಿನಗೆ ಮರಣವಾಗಕೂಡದು, ನನ್ನ ತಂದೆಯು ಅಲ್ಪಕಾರ್ಯವನ್ನಾಗಲಿ ಅಧಿಕಕಾರ್ಯವನ್ನಾಗಲಿ ನನಗೆ ತಿಳಿಸದೆ ಮಾಡುವದಿಲ್ಲ; ಈ ಕಾರ್ಯವನ್ನು ನನಗೆ ಹೇಗೆ ಮರೆಮಾಡಾನು? ಆಗುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೋನಾತಾನನು, “ಎಂದಿಗೂ ಇಲ್ಲ. ನನ್ನ ತಂದೆಯು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ! ನನ್ನ ತಂದೆಯು ನನಗೆ ತಿಳಿಸದೆ ಏನನ್ನೂ ಮಾಡುವುದಿಲ್ಲ. ಅದು ಬಹು ಮುಖ್ಯವಾದದ್ದೇ ಆಗಿರಲಿ ಇಲ್ಲವೆ ಮುಖ್ಯವಾಗಿಲ್ಲದ್ದೇ ಆಗಿರಲಿ, ನನ್ನ ತಂದೆಯು ನನಗೆ ತಿಳಿಸೇ ತಿಳಿಸುತ್ತಾನೆ. ನನ್ನ ತಂದೆಯು ನಿನ್ನನ್ನು ಕೊಲ್ಲಬೇಕೆಂದಿದ್ದರೆ ನಾನು ನಿನಗೆ ತಿಳಿಸುತ್ತಿರಲಿಲ್ಲವೇ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:2
14 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ, ಇವರು ಅಂಗೀಕರಿಸಿದ್ದಾರೆ ಮತ್ತು ನಾನು ನಿಮ್ಮ ಬಳಿಯಿಂದ ಬಂದವನೆಂದು ಇವರು ನಿಶ್ಚಯವಾಗಿ ತಿಳಿದು, ನೀವೇ ನನ್ನನ್ನು ಕಳುಹಿಸಿದ್ದೀರಿ, ಎಂದು ನಂಬಿದ್ದಾರೆ.


ಆದರೆ ಸೌಲನು ಬರುವುದಕ್ಕೆ ಒಂದು ದಿವಸ ಮುಂಚೆ, ಯೆಹೋವ ದೇವರು ಸಮುಯೇಲನಿಗೆ ತಿಳಿಯಪಡಿಸಿದ್ದೇನೆಂದರೆ,


ಯೋನಾತಾನನು ದಾವೀದನಿಗೆ, “ಇಸ್ರಾಯೇಲರ ದೇವರಾದ ಯೆಹೋವ ದೇವರೇ, ನಾನು ನಾಳೆ ನಾಡಿದ್ದರೊಳಗೆ ನನ್ನ ತಂದೆಯನ್ನು ವಿಚಾರಿಸಲು, ದಾವೀದನ ಮೇಲೆ ದಯೆ ಇದ್ದರೆ ನಿನಗೆ ತಿಳಿಸುವ ಹಾಗೆ ಹೇಳಿಕಳುಹಿಸದೆ ಇದ್ದರೆ, ಯೆಹೋವ ದೇವರು ಯೋನಾತಾನನಿಗೆ ಅದಕ್ಕಿಂತ ಅಧಿಕವಾಗಿ ಮಾಡಲಿ.


ಆದರೆ ಜನರು ಸೌಲನಿಗೆ, “ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆಯನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಎಂದಿಗೂ ಇಲ್ಲ. ಯೆಹೋವ ದೇವರ ಜೀವದಾಣೆ, ಇದನ್ನು ಅವನು ದೇವರ ಸಹಾಯದಿಂದ ಮಾಡಿದ್ದರಿಂದ, ಅವನ ಒಂದು ಕೂದಲು ನೆಲಕ್ಕೆ ಬೀಳಬಾರದು,” ಎಂದು ಹೇಳಿ ಯೋನಾತಾನನು ಸಾಯದ ಹಾಗೆ ಪ್ರಾಯಶ್ಚಿತ್ತವನ್ನು ಮಾಡಿ ಬಿಡಿಸಿಕೊಂಡರು.


“ಆದರೆ ನಮ್ಮ ದೇವರಾದ ಯೆಹೋವ ದೇವರ ಗುಡಾರದ ಮುಂದೆ ಇರುವ ಅವರ ಯಜ್ಞವೇದಿಯನ್ನು ಅಲ್ಲದೆ ನಾವು ದಹನಬಲಿ, ಧಾನ್ಯ ನೈವೇದ್ಯ ಮತ್ತು ಇತರ ಬಲಿಗೋಸ್ಕರವಾಗಿಯೂ ಮತ್ತೊಂದು ಬಲಿಪೀಠವನ್ನು ಕಟ್ಟಿ, ಯೆಹೋವ ದೇವರಿಗೆ ವಿರೋಧವಾಗಿ ವಿಮುಖರಾಗಿ ತಿರುಗಿಬೀಳುವುದು ನಮಗೆ ದೂರವಾಗಿರಲಿ,” ಎಂದರು.


ಆಗ ಅವರು ಅವನಿಗೆ, “ನಮ್ಮ ಒಡೆಯನು ಏಕೆ ಇಂಥ ಮಾತುಗಳನ್ನಾಡುತ್ತಾನೆ? ನಿನ್ನ ದಾಸರು ಹೀಗೆ ಮಾಡುವವರಲ್ಲ.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.


ಅವನು ಬಂದು ಆ ಗೇಣಿಗೆದಾರರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಒಪ್ಪಿಸುವನು,” ಎಂದರು. ಜನರು ಇದನ್ನು ಕೇಳಿದಾಗ, “ಹಾಗೆ ಎಂದಿಗೂ ಆಗಬಾರದು!” ಎಂದರು.


ಸಾರ್ವಭೌಮ ಯೆಹೋವ ದೇವರು ನನ್ನ ಕಿವಿಯನ್ನು ತೆರೆದಿದ್ದಾರೆ, ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.


ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ. ಆದರೆ ನೀವು ನನ್ನ ಕಿವಿಗಳನ್ನು ತೆರೆದಿರುವಿರಿ. ದಹನಬಲಿಗಳನ್ನೂ ಪಾಪ ಪರಿಹಾರದ ಬಲಿಗಳನ್ನೂ ನೀವು ಬಯಸಲಿಲ್ಲ.


ಜನರು ಯೆಹೋಶುವನಿಗೆ ಉತ್ತರವಾಗಿ, “ನಾವು ಯೆಹೋವ ದೇವರನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ.


ದಾವೀದನು ರಾಮದ ನಯೋತಿನಿಂದ ಓಡಿಹೋಗಿ ಯೋನಾತಾನನ ಬಳಿಗೆ ಬಂದು, ಅವನ ಮುಂದೆ, “ನಾನು ಏನು ಮಾಡಿದೆನು? ನನ್ನ ಅಕ್ರಮವೇನು? ನಿನ್ನ ತಂದೆಯು ನನ್ನ ಪ್ರಾಣವನ್ನು ಹುಡುಕುವ ಹಾಗೆ ನಾನು ಅವನಿಗೆ ಮಾಡಿದ ದ್ರೋಹವೇನು?” ಎಂದನು.


ದಾವೀದನು ಪ್ರಮಾಣಮಾಡಿ, “ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕಿತೆಂದು ನಿನ್ನ ತಂದೆಯು ನಿಶ್ಚಲವಾಗಿ ಬಲ್ಲನು. ಆದಕಾರಣ ಅವನು ಯೋನಾತಾನನು ವ್ಯಥೆಪಡದ ಹಾಗೆ, ‘ಅವನು ಇದನ್ನು ತಿಳಿಯಬಾರದು,’ ಎಂದು ಹೇಳುತ್ತಾನೆ. ನಿಶ್ಚಯವಾಗಿ ಯೆಹೋವ ದೇವರಾಣೆ, ನನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ಮಾತ್ರ ದೂರ ಇದೆ,” ಎಂದನು.


ಕಳ್ಳರ ಸಹವಾಸ ಮಾಡುವವರು ತಮಗೆ ತಾವೇ ಶತ್ರುಗಳು. ಅವರು ಆಣೆ ಇಟ್ಟರೂ ಅವರಲ್ಲಿ ಬದಲಾವಣೆ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು