1 ಸಮುಯೇಲ 20:22 - ಕನ್ನಡ ಸಮಕಾಲಿಕ ಅನುವಾದ22 ಆದರೆ, ‘ಇಗೋ, ಬಾಣಗಳು ನಿನ್ನ ಆಚೆ ಬಿದ್ದಿವೆ,’ ಎಂದು ಹುಡುಗನಿಗೆ ಹೇಳಿದರೆ, ಹೊರಟು ಹೋಗು. ಏಕೆಂದರೆ ಯೆಹೋವ ದೇವರು ನಿನ್ನನ್ನು ದೂರ ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ, ‘ಬಾಣಗಳು ಆಚೆ ಬಿದ್ದಿರುತ್ತವೆ’ ಎಂದು ಹೇಳಿದರೆ ಹೊರಟುಹೋಗು, ನೀನು ಹೋಗುವುದೇ ಯೆಹೋವನ ಚಿತ್ತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದರೆ, ‘ಬಾಣಗಳು ಆಚೆ ಬಿದ್ದಿರುತ್ತವೆ,’ ಎಂದು ಹೇಳಿದರೆ ಹೊರಟುಹೋಗು. ನೀನು ಹೋಗುವುದೇ ಸರ್ವೇಶ್ವರನ ಚಿತ್ತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ - ಬಾಣಗಳು ಆಚೆ ಬಿದ್ದಿರುತ್ತವೆ ಎಂದು ಹೇಳಿದರೆ ಹೊರಟುಹೋಗು; ನೀನು ಹೋಗುವದೇ ಯೆಹೋವನ ಚಿತ್ತವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದರೆ ಅಲ್ಲಿ ತೊಂದರೆಯಿರುವುದಾದರೆ, ನಾನು ಆ ಹುಡುಗನಿಗೆ, ‘ಬಾಣಗಳು ಬಹಳ ದೂರದಲ್ಲಿವೆ. ಹೋಗಿ ಅವುಗಳನ್ನು ತೆಗೆದುಕೊಂಡು ಬಾ’ ಎಂದು ಹೇಳುವೆ. ನಾನು ಆ ರೀತಿ ಹೇಳಿದರೆ, ನೀನು ಅಲ್ಲಿಂದ ಹೊರಟುಹೋಗು. ಯೆಹೋವನೇ ನಿನ್ನನ್ನು ದೂರ ಕಳುಹಿಸುತ್ತಿದ್ದಾನೆ. ಅಧ್ಯಾಯವನ್ನು ನೋಡಿ |