Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:23 - ಕನ್ನಡ ಸಮಕಾಲಿಕ ಅನುವಾದ

23 ನಾನೂ, ನೀನೂ ಮಾತನಾಡಿಕೊಂಡ ಈ ಕಾರ್ಯಕ್ಕೆ ಯೆಹೋವ ದೇವರು ನನಗೂ, ನಿನಗೂ ಮಧ್ಯೆ ಎಂದೆಂದಿಗೂ ಸಾಕ್ಷಿಯಾಗಿರುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಮ್ಮಿಬ್ಬರ ಒಡಂಬಡಿಕೆಗೆ ಯೆಹೋವನೇ ನಿತ್ಯ ಸಾಕ್ಷಿಯಾಗಿರುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಮ್ಮಿಬ್ಬರ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ನಿತ್ಯಸಾಕ್ಷಿಯಾಗಿರುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಮ್ಮಿಬ್ಬರ ಒಡಂಬಡಿಕೆಗೆ ಯೆಹೋವನೇ ನಿತ್ಯ ಸಾಕ್ಷಿಯಾಗಿರುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿನ್ನ ಮತ್ತು ನನ್ನ ಮಧ್ಯೆ ನಡೆದ ಈ ಒಪ್ಪಂದವನ್ನು ಜ್ಞಾಪಿಸಿಕೊ. ಯೆಹೋವನು ಸದಾಕಾಲ ನಮಗೆ ಸಾಕ್ಷಿಯಾಗಿರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:23
7 ತಿಳಿವುಗಳ ಹೋಲಿಕೆ  

ಆಗ ಯೋನಾತಾನನು ದಾವೀದನಿಗೆ, “ನೀನು ಸಮಾಧಾನವಾಗಿ ಹೋಗು, ಯೆಹೋವ ದೇವರು ಎಂದೆಂದಿಗೂ ನನಗೂ, ನಿನಗೂ, ನನ್ನ ಸಂತಾನಕ್ಕೂ, ನಿನ್ನ ಸಂತಾನಕ್ಕೂ ಸಾಕ್ಷಿಯಾಗಿರಲೆಂದು ಮಧ್ಯದಲ್ಲಿ ಯೆಹೋವ ದೇವರ ಹೆಸರಿನಿಂದ ಆಣೆಯಿಟ್ಟು ನಾವಿಬ್ಬರೂ ಪ್ರಮಾಣ ಮಾಡಿಕೊಂಡೆವಲ್ಲಾ,” ಎಂದನು. ಆಗ ದಾವೀದನು ಎದ್ದು ಹೋದನು. ಯೋನಾತಾನನು ಪಟ್ಟಣಕ್ಕೆ ಹೋದನು.


ನೀನು ನನ್ನ ಪುತ್ರಿಯರನ್ನು ಉಪದ್ರವಪಡಿಸಿದರೆ, ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ಪಡೆದರೆ, ಯಾವ ಮನುಷ್ಯನೂ ವಿಚಾರಿಸಲು ಇಲ್ಲದಿದ್ದರೂ ನನಗೂ ನಿನಗೂ ನಡುವೆ ದೇವರೇ ಈ ಒಪ್ಪಂದಕ್ಕೆ ಸಾಕ್ಷಿ,” ಎಂದನು.


ಸಾರಯಳು ಅಬ್ರಾಮನಿಗೆ, “ನನಗೆ ಆದ ಅನ್ಯಾಯಕ್ಕೆ ನೀನೇ ಹೊಣೆ. ನಾನು ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರಕ್ಕೆ ಯೋಗ್ಯಳಾದೆನು. ಯೆಹೋವ ದೇವರು ನಿನಗೂ ನನಗೂ ನ್ಯಾಯತೀರಿಸಲಿ,” ಎಂದಳು.


ಮಿಚ್ಪಾ ಎಂದೂ ಹೆಸರಾಯಿತು. ಏಕೆಂದರೆ, “ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವ ದೇವರು ನಮ್ಮನ್ನು ನೋಡಿಕೊಳ್ಳುತ್ತಾ ಇರಲಿ.


ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯತೀರಿಸಲಿ,” ಎಂದನು. ಆಗ ಯಾಕೋಬನು ತನ್ನ ತಂದೆ ಇಸಾಕನ ಭಯದ ಮೇಲೆ ಪ್ರಮಾಣ ಮಾಡಿದನು.


ಹಾಗೆಯೇ ದಾವೀದನು ಹೊಲದಲ್ಲಿ ಬಚ್ಚಿಟ್ಟುಕೊಂಡಿದ್ದನು. ಅಮಾವಾಸ್ಯೆಯಾದಾಗ ಅರಸನು ಭೋಜನವನ್ನು ಮಾಡಲು ಕುಳಿತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು