Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:26 - ಕನ್ನಡ ಸಮಕಾಲಿಕ ಅನುವಾದ

26 ಆದರೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ, “ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿರಬಹುದು; ನಿಶ್ಚಯವಾಗಿ ಅಶುಚಿಯಾಗಿದ್ದಾನೆ,” ಎಂದು ಹೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ದಿನ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು. ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನು ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆ ದಿವಸ ಅವನ ವಿಷಯವಾಗಿ ಏನೂ ಹೇಳಲಿಲ್ಲ. “ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಹೊಲೆಯಾಗಿರಬಹುದು, ತನ್ನನ್ನು ಇನ್ನೂ ಶುದ್ಧಪಡಿಸಿಕೊಳ್ಳದೆ ಇರಬಹುದು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆ ದಿವಸ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನೂ ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸೌಲನು ಆ ದಿನ ಏನನ್ನೂ ಹೇಳದೆ, “ದಾವೀದನಿಗೆ ಏನೋ ಸಂಭವಿಸಿರಬಹುದು ಆದ್ದರಿಂದ ಅವನು ಇಂದು ಶುದ್ಧನಾಗಿರಲಿಕ್ಕಿಲ್ಲ” ಎಂದು ಯೋಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:26
11 ತಿಳಿವುಗಳ ಹೋಲಿಕೆ  

ಅವನ ಹಾಸಿಗೆಯನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು, ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು.


ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವುದೆಲ್ಲವೂ ನಿಮಗೆ ಅಶುದ್ಧವಾಗಿರುವುವು. ಯಾರಾದರೂ ಅವುಗಳ ಶವವನ್ನು ಮುಟ್ಟಿದರೆ ಅವರು ಸಂಜೆಯವರೆಗೂ ಅಶುದ್ಧರಾಗಿರುವರು.


“ ‘ಇವುಗಳಿಂದ ನೀವು ಅಶುದ್ಧರಾಗುವಿರಿ. ಅಂದರೆ ಅವುಗಳ ಶವಗಳನ್ನು ಮುಟ್ಟುವವರು ಸಂಜೆಯವರೆಗೂ ಅಶುದ್ಧರಾಗಿರುವರು.


ಅದಕ್ಕವನು, “ಸಮಾಧಾನವೇ, ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನನ್ನ ಸಂಗಡ ಯಜ್ಞಮಾಡುವುದಕ್ಕೆ ಬನ್ನಿರಿ,” ಎಂದನು. ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧಮಾಡಿ, ಅವರನ್ನು ಯಜ್ಞಮಾಡುವುದಕ್ಕೆ ಕರೆದನು.


“ಇದಲ್ಲದೆ ಬಯಲಿನಲ್ಲಿ ಖಡ್ಗದಿಂದ ಹತನಾದ ವ್ಯಕ್ತಿಯನ್ನು ಮುಟ್ಟಿದವರೂ ಅಥವಾ ಬೇರೆ ಯಾವ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬನ್ನಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರೆಲ್ಲರೂ ಏಳು ದಿವಸ ಅಪವಿತ್ರರಾಗಿರುವರು.


ಯಾರಾದರೂ ಅದರ ಮಾಂಸವನ್ನು ತಿಂದಲ್ಲಿ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು. ಅದರ ಶವವನ್ನು ಹೊರುವವರೂ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.


ನೆಲದ ಮೇಲೆ ಹರಿದಾಡುವ ಇವು ನಿಮಗೆ ಅಶುದ್ಧ. ಸತ್ತಿರುವಾಗ ಅವುಗಳನ್ನು ಯಾರಾದರೂ ಮುಟ್ಟಿದರೆ ಅವರು ಸಂಜೆಯವರೆಗೂ ಅಶುದ್ಧರಾಗಿರುವರು.


ಅಮಾವಾಸ್ಯೆಯ ಮಾರನೆಯ ದಿವಸದಲ್ಲಿ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿ ದಾವೀದನು ಕೂಡುವ ಸ್ಥಳವು ಹಾಗೆಯೇ ಬರಿದಾಗಿತ್ತು. ಆದ್ದರಿಂದ ಸೌಲನು, “ಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಏಕೆ ಬರಲಿಲ್ಲ?” ಎಂದು ತನ್ನ ಪುತ್ರನಾದ ಯೋನಾತಾನನನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು