Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:3 - ಕನ್ನಡ ಸಮಕಾಲಿಕ ಅನುವಾದ

3 ದಾವೀದನು ಪ್ರಮಾಣಮಾಡಿ, “ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕಿತೆಂದು ನಿನ್ನ ತಂದೆಯು ನಿಶ್ಚಲವಾಗಿ ಬಲ್ಲನು. ಆದಕಾರಣ ಅವನು ಯೋನಾತಾನನು ವ್ಯಥೆಪಡದ ಹಾಗೆ, ‘ಅವನು ಇದನ್ನು ತಿಳಿಯಬಾರದು,’ ಎಂದು ಹೇಳುತ್ತಾನೆ. ನಿಶ್ಚಯವಾಗಿ ಯೆಹೋವ ದೇವರಾಣೆ, ನನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ಮಾತ್ರ ದೂರ ಇದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದಕ್ಕೆ ದಾವೀದನು, “ನಿನಗೆ ನಾನು ಪ್ರೀತಿಪಾತ್ರನೆಂದು ನಿನ್ನ ತಂದೆಗೆ ಗೊತ್ತಿದೆ. ಆದುದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾರೆ. ನಿನ್ನ ಜೀವದಾಣೆ, ಸರ್ವೇಶ್ವರನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರ,” ಎಂದು ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದಕ್ಕೆ ದಾವೀದನು - ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕುತ್ತದೆಂಬದನ್ನು ನಿನ್ನ ತಂದೆಯು ಬಲ್ಲನು. ಆದದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನಾಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರವಿದೆ ಎಂದು ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ದಾವೀದನು, “ನಾನು ನಿನ್ನ ಗೆಳೆಯನೆಂಬುದು ನಿನ್ನ ತಂದೆಗೆ ಚೆನ್ನಾಗಿ ತಿಳಿದಿದೆ. ನಿನ್ನ ತಂದೆಯು, ‘ಯೋನಾತಾನನಿಗೆ ಇದು ತಿಳಿಯಲೇಬಾರದು. ಅವನಿಗೆ ತಿಳಿದುಬಿಟ್ಟರೆ ಅವನು ತನ್ನ ಹೃದಯದಲ್ಲಿ ದುಃಖಪಟ್ಟು ದಾವೀದನಿಗೆ ಹೇಳಿಬಿಡುತ್ತಾನೆ’ ಎಂದುಕೊಂಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ, ನಾನು ಸಾವಿಗೆ ಬಹು ಹತ್ತಿರವಾಗಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:3
18 ತಿಳಿವುಗಳ ಹೋಲಿಕೆ  

ಎಲೀಯನು ಅವನಿಗೆ, “ನೀನು ದಯಮಾಡಿ ಇಲ್ಲೇ ಇರು. ಯೆಹೋವ ದೇವರು ನನ್ನನ್ನು ಯೊರ್ದನಿಗೆ ಕಳುಹಿಸುತ್ತಿದ್ದಾರೆ,” ಎಂದನು. ಅದಕ್ಕವನು, “ಯೆಹೋವ ದೇವರ ಜೀವದಾಣೆ, ನನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರಿಬ್ಬರೂ ಮುಂದಕ್ಕೆ ನಡೆದರು.


ಆದರೆ ದಾವೀದನು ತನ್ನ ಹೃದಯದಲ್ಲಿ, “ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಸಾಯುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿ ಹೋಗುವುದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು,” ಎಂದುಕೊಂಡನು.


ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವುದಕ್ಕೂ, ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಹೋಗುವುದನ್ನು ದೇವರು ತಡೆದದ್ದರಿಂದ, ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ ನಿನ್ನ ಶತ್ರುಗಳೂ, ನನ್ನ ಒಡೆಯನಿಗೆ ಕೇಡನ್ನು ಹುಡುಕುವವರೂ ನಾಬಾಲನ ಹಾಗೆಯೇ ಆಗಲಿ.


ನಿಮ್ಮ ದೇವರಾದ ಯೆಹೋವ ದೇವರಿಗೆ ನೀವು ಭಯಪಡಬೇಕು. ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು ಮತ್ತು ಅವರ ಹೆಸರಿನಲ್ಲಿ ಆಣೆಯಿಟ್ಟುಕೊಳ್ಳಬೇಕು.


ಆಗ ಎಲೀಯನು ಅವನಿಗೆ, “ಎಲೀಷನೇ, ನೀನು ದಯಮಾಡಿ ಇಲ್ಲೇ ಇರು. ಯೆಹೋವ ದೇವರು ನನ್ನನ್ನು ಯೆರಿಕೋವಿಗೆ ಕಳುಹಿಸುತ್ತಿದ್ದಾರೆ” ಎಂದನು. ಅದಕ್ಕವನು, “ಯೆಹೋವ ದೇವರ ಜೀವದಾಣೆ, ನನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು.


ಆಗ ಎಲೀಯನು ಎಲೀಷನಿಗೆ, “ನೀನು ದಯಮಾಡಿ ಇಲ್ಲಿ ಇರು. ಯೆಹೋವ ದೇವರು ನನ್ನನ್ನು ಬೇತೇಲಿಗೆ ಕಳುಹಿಸುತ್ತಿದ್ದಾರೆ,” ಎಂದನು. ಅದಕ್ಕೆ ಎಲೀಷನು, “ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರು ಬೇತೇಲಿಗೆ ಹೋದರು.


“ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ಇಲ್ಲಿ ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು.


ಮನುಷ್ಯರು ನಿಜವಾಗಿಯೂ ದೊಡ್ಡವರ ಮೇಲೆ ಆಣೆ ಇಡುತ್ತಾರಷ್ಟೆ. ಆಣೆಯನ್ನು ದೃಢಪಡಿಸುವುದು ಪ್ರತಿಯೊಂದು ವಿವಾದಕ್ಕೂ ಅಂತ್ಯವಾಗಿರುವುದು.


ಹೀಗೆ ಅರಸನಾದ ಚಿದ್ಕೀಯನು ಯೆರೆಮೀಯನಿಗೆ ಅಂತರಂಗದಲ್ಲಿ ಪ್ರಮಾಣಮಾಡಿ, “ನಮಗೆ ಈ ಪ್ರಾಣವನ್ನು ಉಂಟುಮಾಡಿದ ಯೆಹೋವ ದೇವರ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವುದಿಲ್ಲ,” ಎಂದನು.


ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. ನನ್ನಲ್ಲಿಯೇ ಹೆಮ್ಮೆಪಡುವರು.”


ಮರಣದ ಪಾಶಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆಗಳು ನನ್ನ ಮೇಲೆ ಬಂದವು; ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.


ಆದರೆ ಇತ್ತೈಯೂ ಅರಸನಿಗೆ ಉತ್ತರವಾಗಿ, “ಯೆಹೋವ ದೇವರ ಜೀವದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ, ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ, ಸಾವಾದರೂ ಬದುಕಾದರೂ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು,” ಎಂದನು.


ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟು ಹೋಗುವುದನ್ನು ಸೌಲನು ಕಂಡಾಗ, ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ, “ಅಬ್ನೇರನೇ, ಈ ಯುವಕನು ಯಾರ ಮಗನು?” ಎಂದನು. ಅದಕ್ಕೆ ಅಬ್ನೇರನು, “ಅರಸನೇ, ನಿನ್ನ ಪ್ರಾಣದಾಣೆ ನಾನರಿಯೆ,” ಎಂದನು.


ಬದುಕುವೆವೋ ಇಲ್ಲವೋ ಎಂಬುದಾಗಿ ಅನುಮಾನಪಟ್ಟು ನೀವು ರಾತ್ರಿ ಹಗಲು ಜೀವದ ಮೇಲೆ ನಂಬಿಕೆ ಇಲ್ಲದೆ ಹೆದರಿಕೊಳ್ಳುವಿರಿ.


ಯೋನಾತಾನನು ಅವನಿಗೆ, “ಅದು ಆಗಬಾರದು. ನೀನು ಸಾಯುವುದಿಲ್ಲ; ನನ್ನ ತಂದೆಯು ನನಗೆ ತಿಳಿಸದೆ ಯಾವ ಚಿಕ್ಕ ಕಾರ್ಯವನ್ನಾದರೂ, ದೊಡ್ಡ ಕಾರ್ಯವನ್ನಾದರೂ ಮಾಡುವುದಿಲ್ಲ. ಈ ಕಾರ್ಯವನ್ನು ಯಾತಕ್ಕೆ ನನ್ನ ತಂದೆಯು ನನಗೆ ಬಚ್ಚಿಟ್ಟನು? ಹಾಗೆ ಆಗದು,” ಎಂದನು.


ಆಗ ಯೋನಾತಾನನು ದಾವೀದನಿಗೆ, “ನಿನ್ನ ಪ್ರಾಣವು ಏನೇನು ಹೇಳುತ್ತದೋ, ನಿನಗೋಸ್ಕರ ನಾನು ಅದನ್ನು ಮಾಡುವೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು