1 ಸಮುಯೇಲ 20:8 - ಕನ್ನಡ ಸಮಕಾಲಿಕ ಅನುವಾದ8 ಆದ್ದರಿಂದ ನೀನು ನಿನ್ನ ಸೇವಕನ ಮೇಲೆ ದಯೆ ತೋರಿಸಬೇಕು. ಏಕೆಂದರೆ ಯೆಹೋವ ದೇವರ ಒಡಂಬಡಿಕೆಯನ್ನು ನಿನ್ನ ಸೇವಕನೊಂದಿಗೆ ಮಾಡಿಕೊಂಡಿದ್ದೀಯಲ್ಲಾ. ಆದರೂ ನನ್ನಲ್ಲಿ ಅಕ್ರಮವಿದ್ದರೆ, ನೀನೇ ನನ್ನನ್ನು ಕೊಂದುಹಾಕು. ನನ್ನನ್ನು ನಿನ್ನ ತಂದೆಯ ಬಳಿಗೆ ಕರೆದುಕೊಂಡು ಹೋಗುವುದು ಏಕೆ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀನು ಯೆಹೋವನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿಯಲ್ಲಾ, ನಾನು ಅಪರಾಧಿಯಾಗಿದ್ದರೆ ನನ್ನನ್ನು ನಿನ್ನ ತಂದೆಗೆ ಒಪ್ಪಿಸುವುದೇಕೆ? ನೀನೇ ನನ್ನನ್ನು ಕೊಂದುಹಾಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸೇವಕನ ಮೇಲೆ ದಯವಿರಲಿ. ನೀನು ಸರ್ವೇಶ್ವರನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿರುವೆಯಲ್ಲವೆ? ನಾನು ಅಪರಾಧಿಯಾಗಿದ್ದರೆ, ನನ್ನನ್ನು ನಿನ್ನ ತಂದೆಗೆ ಒಪ್ಪಿಸಬೇಕಾಗಿಲ್ಲ, ನೀನೆ ಕೊಂದುಹಾಕು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸೇವಕನ ಮೇಲೆ ದಯವಿರಲಿ. ನೀನು ಯೆಹೋವನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿಯಲ್ಲಾ; ನಾನು ಅಪರಾಧಿಯಾಗಿದ್ದರೆ ನನ್ನನ್ನು ನಿನ್ನ ತಂದೆಗೆ ಒಪ್ಪಿಸುವದೇಕೆ? ನೀನೇ ಕೊಂದುಹಾಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೋನಾತಾನನೇ, ನನ್ನ ಮೇಲೆ ದಯೆಯಿರಲಿ. ನಾನು ನಿನ್ನ ಸೇವಕ. ನೀನು ಯೆಹೋವನ ಮುಂದೆ ನನ್ನೊಂದಿಗೆ ಒಪ್ಪಂದ ಮಾಡಿಕೊಂಡಿರುವೆ. ನಾನು ತಪ್ಪಿತಸ್ಥನಾಗಿದ್ದರೆ, ನೀನೇ ನನ್ನನ್ನು ಕೊಂದುಬಿಡು! ಆದರೆ ನಿನ್ನ ತಂದೆಯ ಹತ್ತಿರಕ್ಕೆ ನನ್ನನ್ನು ಕರೆದೊಯ್ಯಬೇಡ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |