1 ಸಮುಯೇಲ 21:1 - ಕನ್ನಡ ಸಮಕಾಲಿಕ ಅನುವಾದ1 ದಾವೀದನು ನೋಬಿನಲ್ಲಿರುವ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ, “ಒಬ್ಬರೂ ನಿನ್ನ ಸಂಗಡ ಬಾರದೆ, ನೀನು ಒಂಟಿಯಾಗಿ ಬಂದದ್ದೇನು?” ಎಂದು ಅವನನ್ನು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡು, “ನಿನ್ನ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ, ನೀನು ಒಬ್ಬನೇ ಬಂದದ್ದೇಕೆ?” ಎಂದು ಅವನನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದಾವೀದನು ನೋಬ್ ಊರಲ್ಲಿದ್ದ ಯಾಜಕ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡನು. “ನಿಮ್ಮ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ; ನೀವು ಒಬ್ಬರೇ ಬಂದದ್ದೇಕೆ?” ಎಂದು ಅವನನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡು - ನಿನ್ನ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ! ನೀನು ಒಬ್ಬನೇ ಬಂದದ್ದೇಕೆ ಎಂದು ಅವನನ್ನು ಕೇಳಲು ಅವನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಂತರ ದಾವೀದನು ಹೊರಟುಹೋದನು. ಯೋನಾತಾನನು ಪಟ್ಟಣಕ್ಕೆ ಹಿಂದಿರುಗಿದನು. ದಾವೀದನು ನೋಬ್ ಎಂಬ ಪಟ್ಟಣದ ಯಾಜಕನಾದ ಅಹೀಮೆಲೆಕನನ್ನು ನೋಡಲು ಹೋದನು. ಅಹೀಮೆಲೆಕನು ದಾವೀದನನ್ನು ಸಂಧಿಸಲು ಹೊರಗೆ ಬಂದನು. ಅಹೀಮೆಲೆಕನು ಭಯದಿಂದ ನಡುಗುತ್ತಿದ್ದನು. ಅಹೀಮೆಲೆಕನು ದಾವೀದನಿಗೆ, “ನೀನು ಒಬ್ಬಂಟಿಗನಾಗಿ ಬಂದಿರುವುದೇಕೆ? ಬೇರೆ ಯಾವ ವ್ಯಕ್ತಿಯೂ ನಿನ್ನ ಜೊತೆಯಲ್ಲಿಲ್ಲದಿರುವುದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |