1 ಸಮುಯೇಲ 21:11 - ಕನ್ನಡ ಸಮಕಾಲಿಕ ಅನುವಾದ11 ಆಕೀಷನ ಸೇವಕರು ಅವನಿಗೆ, “ಇವನು ನಾಡಿನ ಅರಸನಾದ ದಾವೀದನಲ್ಲವೋ? “ ‘ಸೌಲನು ಸಾವಿರಗಳನ್ನೂ, ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನು,’ ಎಂದು ಸ್ತ್ರೀಯರು ನೃತ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ಇವನನ್ನು ಕುರಿತಲ್ಲವೋ?” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಕೀಷನ ಸೇವಕರು, “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು, ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು ಎಂಬುದಾಗಿ ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಇವನ ಕುರಿತಲ್ಲವೋ?” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಕೀಷನ ಸೇವಕರು, “’ಸೌಲನು ಕೊಂದನು ಸಾವಿರಗಟ್ಟಳೆ, ದಾವೀದನು ಕೊಂದನು ಹತ್ತುಸಾವಿರಗಟ್ಟಳೆ’ ಎಂಬುದಾಗಿ ಮಹಿಳೆಯರು ಕುಣಿಯುತ್ತಾ ಹಾಡಿದ್ದು ಇವನನ್ನು ಕುರಿತಲ್ಲವೇ?’ ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಕೀಷನ ಸೇವಕರು - ಸೌಲನು ಸಾವಿರಗಟ್ಟಳೆಯಾಗಿ ಕೊಂದನು; ದಾವೀದನು ಹತ್ತು ಸಾವಿರಗಟ್ಟಳೆಯಾಗಿ ಕೊಂದನು ಎಂಬದಾಗಿ ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಇವನನ್ನು ಕುರಿತಲ್ಲವೋ? ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಕೀಷನ ಅಧಿಕಾರಿಗಳಿಗೆ ದಾವೀದನ ಆಗಮನ ಇಷ್ಟವಾಗಲಿಲ್ಲ. ಅವರು, “ಇವನು ದಾವೀದನು, ಇಸ್ರೇಲ್ ದೇಶದ ರಾಜನು. ಇವನನ್ನು ಕುರಿತೇ ಇಸ್ರೇಲರು ಹಾಡುತ್ತಾರೆ. ಅವರು ಇವನಿಗಾಗಿ ಹಾಡಿ ಕುಣಿಯುತ್ತಾರೆ. “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು. ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು! ಎಂಬ ಈ ಹಾಡನ್ನು ಇಸ್ರೇಲರು ಹಾಡುತ್ತಾರೆ” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿ |