1 ಸಮುಯೇಲ 21:8 - ಕನ್ನಡ ಸಮಕಾಲಿಕ ಅನುವಾದ8 ಆಗ ದಾವೀದನು ಅಹೀಮೆಲೆಕನಿಗೆ, “ಇಲ್ಲಿ ನಿನ್ನ ಕೈ ವಶದಲ್ಲಿ ಈಟಿಯಾದರೂ, ಖಡ್ಗವಾದರೂ ಇಲ್ಲವೋ? ಏಕೆಂದರೆ ಅರಸನ ಕಾರ್ಯವು ಅವಸರವಾದುದರಿಂದ ನಾನು ನನ್ನ ಖಡ್ಗವನ್ನಾದರೂ, ಆಯುಧಗಳನ್ನಾದರೂ ತೆಗೆದುಕೊಂಡು ಬರಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದಾವೀದನು ಅಹೀಮೆಲೆಕನನ್ನು, “ಅರಸನ ಕಾರ್ಯವು ತುರ್ತಾದ್ದರಿಂದ ಕತ್ತಿಯನ್ನಾಗಲಿ, ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲಿಲ್ಲ, ನಿನ್ನ ಬಳಿಯಲ್ಲಿ ಬರ್ಜಿಯಾಗಲಿ ಕತ್ತಿಯಾಗಲಿ ಇಲ್ಲವೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದಾವೀದನು ಅಹೀಮೆಲೆಕನನ್ನು, “ಅರಸನ ಕಾರ್ಯ ತುರ್ತಾದದ್ದು. ಆದ್ದರಿಂದ ಕತ್ತಿಯನ್ನಾಗಲಿ ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲು ಆಗಲಿಲ್ಲ. ನಿನ್ನ ಬಳಿಯಲ್ಲಿ ಭರ್ಜಿಯಾಗಲಿ, ಕತ್ತಿಯಾಗಲಿ ಇಲ್ಲವೇ?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದಾವೀದನು ಅಹೀಮೆಲೆಕನನ್ನು - ಅರಸನ ಕಾರ್ಯವು ಅವಸರವಾಗಿದ್ದದರಿಂದ ಕತ್ತಿಯನ್ನಾಗಲಿ ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲು ಆಗಲಿಲ್ಲ; ನಿನ್ನ ಬಳಿಯಲ್ಲಿ ಬರ್ಜಿಯಾಗಲಿ ಕತ್ತಿಯಾಗಲಿ ಇಲ್ಲವೋ ಎಂದು ಕೇಳಲು ಅವನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದಾವೀದನು ಅಹೀಮೆಲೆಕನಿಗೆ, “ನಿನ್ನ ಹತ್ತಿರ ಖಡ್ಗವಾಗಲಿ ಭರ್ಜಿಯಾಗಲಿ ಇದೆಯೇ? ರಾಜನ ಕಾರ್ಯಭಾರವು ಬಹುಮುಖ್ಯವಾದುದು. ನಾನು ಬೇಗ ಹೋಗಬೇಕಾಗಿದೆ. ನಾನು ಕತ್ತಿಯನ್ನಾಗಲೀ ಇತರ ಆಯುಧವನ್ನಾಗಲೀ ತರಲಿಲ್ಲ” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |