1 ಸಮುಯೇಲ 21:9 - ಕನ್ನಡ ಸಮಕಾಲಿಕ ಅನುವಾದ9 ಅದಕ್ಕೆ ಯಾಜಕನು, “ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನು ಏಫೋದಿನ ಹಿಂದೆ ಒಂದು ಬಟ್ಟೆಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೋ. ಏಕೆಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ,” ಎಂದನು. ಅದಕ್ಕೆ ದಾವೀದನು, “ಅದರಂಥದ್ದು ಮತ್ತೊಂದಿಲ್ಲ, ಅದನ್ನೇ ಕೊಡು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವನು, “ನೀನು ಏಲಾ ತಗ್ಗಿನಲ್ಲಿ ಕೊಂದು ಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯು ಒಂದು ಬಟ್ಟೆಯಲ್ಲಿ ಸುತ್ತಲ್ಪಟ್ಟು, ಏಫೋದಿನ ಹಿಂದೆ ಇಡಲ್ಪಟ್ಟಿದೆ. ಬೇಕಾದರೆ ಅದನ್ನು ತೆಗೆದುಕೊ. ಅದರ ಹೊರತು ನನ್ನ ಬಳಿಯಲ್ಲಿ ಬೇರೊಂದಿಲ್ಲ” ಎಂದು ಉತ್ತರಕೊಟ್ಟನು. ದಾವೀದನು, “ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ. ಅದನ್ನೇ ಕೊಡು” ಎಂದು ಹೇಳಿ ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವನು, “ನೀವು ಏಲಾ ತಗ್ಗಿನಲ್ಲಿ ಕೊಂದುಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಬಟ್ಟೆಯಲ್ಲಿ ಸುತ್ತಿ ಏಫೋದಿನ ಹಿಂದೆ ಇಡಲಾಗಿದೆ; ಬೇಕಾದರೆ ಅದನ್ನು ತೆಗೆದುಕೊಳ್ಳಿ. ಅದರ ಹೊರತು ನನ್ನ ಬಳಿ ಬೇರೊಂದಿಲ್ಲ,” ಎಂದು ಉತ್ತರಕೊಟ್ಟನು. ದಾವೀದನು, “ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ, ಅದನ್ನೇ ಕೊಡು,” ಎಂದು ಹೇಳಿ ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀನು ಏಲಾ ತಗ್ಗಿನಲ್ಲಿ ಕೊಂದುಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯು ಒಂದು ಬಟ್ಟೆಯಲ್ಲಿ ಸುತ್ತಲ್ಪಟ್ಟು ಏಫೋದಿನ ಹಿಂದೆ ಇಡಲ್ಪಟ್ಟಿದೆ; ಬೇಕಾದರೆ ಅದನ್ನು ತೆಗೆದುಕೋ. ಅದರ ಹೊರತು ನನ್ನ ಬಳಿಯಲ್ಲಿ ಬೇರೊಂದಿಲ್ಲ ಎಂದು ಉತ್ತರಕೊಟ್ಟನು. ದಾವೀದನು - ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ, ಅದನ್ನೇ ಕೊಡು ಎಂದು ಹೇಳಿ ತೆಗೆದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯಾಜಕನು, “ಇಲ್ಲಿರುವುದು ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವೊಂದೇ. ಏಲಾ ಕಣಿವೆಯಲ್ಲಿ ನೀನು ಅವನನ್ನು ಕೊಂದು ಅವನಿಂದ ನೀನು ಕಿತ್ತುಕೊಂಡ ಖಡ್ಗವೇ ಅದು. ಆ ಖಡ್ಗವನ್ನು ಬಟ್ಟೆಯಲ್ಲಿ ಸುತ್ತಿ ಎಫೋದಿನ ಹಿಂಭಾಗದಲ್ಲಿ ಇಟ್ಟಿದೆ. ನಿನಗೆ ಬೇಕಿದ್ದರೆ ಅದನ್ನು ತೆಗೆದುಕೋ” ಎಂದು ಉತ್ತರಿಸಿದನು. ದಾವೀದನು, “ಅದನ್ನು ನನಗೆ ಕೊಡು. ಗೊಲ್ಯಾತನ ಖಡ್ಗಕ್ಕೆ ಸಮನಾದ ಬೇರೊಂದು ಖಡ್ಗವಿಲ್ಲ!” ಎಂದನು. ಅಧ್ಯಾಯವನ್ನು ನೋಡಿ |