1 ಸಮುಯೇಲ 22:1 - ಕನ್ನಡ ಸಮಕಾಲಿಕ ಅನುವಾದ1 ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಬಂದನು. ಆ ವರ್ತಮಾನವನ್ನು ಅವನ ಸಹೋದರರೂ, ಅವನ ತಂದೆಯ ಮನೆಯವರೆಲ್ಲರೂ ಕೇಳಿ, ಅವನ ಬಳಿಗೆ ಅಲ್ಲಿಗೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದಾವೀದನು ಅಕೀಷ ರಾಜನಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ, ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ, ಅವರೂ ಬಂದು ಅವನನ್ನು ಸೇರಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದಾವೀದನು ಅಲ್ಲಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ಸಮಾಚಾರ, ಅವನ ಅಣ್ಣಂದಿರಿಗೂ ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಿತು. ಅವರೂ ಬಂದು ಅವನನ್ನು ಸೇರಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದಾವೀದನು ಅಲ್ಲಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ ಅವರೂ ಬಂದು ಅವನನ್ನು ಸೇರಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದಾವೀದನು ಗತ್ ಊರನ್ನು ಬಿಟ್ಟು ಅದುಲ್ಲಾಮ್ ಗವಿಗೆ ಓಡಿಹೋದನು. ದಾವೀದನು ಅದುಲ್ಲಾಮಿನಲ್ಲಿರುವುದು ಅವನ ಅಣ್ಣಂದಿರಿಗೂ ಬಂಧುಗಳಿಗೂ ತಿಳಿಯಿತು. ಅವರು ದಾವೀದನನ್ನು ನೋಡಲು ಅಲ್ಲಿಗೆ ಹೋದರು. ಅಧ್ಯಾಯವನ್ನು ನೋಡಿ |