1 ಸಮುಯೇಲ 22:11 - ಕನ್ನಡ ಸಮಕಾಲಿಕ ಅನುವಾದ11 ಆದ್ದರಿಂದ ಅರಸನು ಅಹೀಟೂಬನ ಮಗನಾದ ಯಾಜಕನಾಗಿರುವ ಅಹೀಮೆಲೆಕನನ್ನೂ, ನೋಬದಲ್ಲಿರುವ ಯಾಜಕರಾಗಿರುವ ಅವನ ತಂದೆಯ ಮನೆಯವರಾದ ಸಮಸ್ತರನ್ನೂ ಕರೆಯಿಸಿದನು. ಅವರೆಲ್ಲರೂ ಅರಸನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕೂಡಲೆ ಸೌಲನು ಅಹೀಟೂಬನ ಮಗನೂ ಯಾಜಕನೂ ಆಗಿದ್ದ ಅಹೀಮೆಲೆಕನನ್ನೂ, ಅವನ ಕುಟುಂಬಕ್ಕೆ ಸೇರಿದ ನೋಬದ ಬೇರೆ ಎಲ್ಲಾ ಯಾಜಕರೊಡನೆ ಕರೆದುಕೊಂಡು ಬರುವಂತೆ ಕಳುಹಿಸಿದನು. ಅವರೆಲ್ಲರೂ ಅರಸನ ಸನ್ನಿಧಿಗೆ ಬರಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕೂಡಲೆ ಸೌಲನು ಅಹೀಟೂಬನ ಮಗನೂ ಯಾಜಕನೂ ಆಗಿದ್ದ ಅಹೀಮೆಲೆಕನನ್ನು ಹಾಗು ಅವನ ಕುಟುಂಬಕ್ಕೆ ಸೇರಿದ್ದ ನೋಬದ ಬೇರೆ ಎಲ್ಲಾ ಯಾಜಕರನ್ನೂ ಬರಮಾಡಿದನು. ಅವರೆಲ್ಲರೂ ಅರಸನ ಸನ್ನಿಧಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕೂಡಲೆ ಸೌಲನು ಅಹೀಟೂಬನ ಮಗನೂ ಯಾಜಕನೂ ಆಗಿದ್ದ ಅಹೀಮೆಲೆಕನನ್ನು ಅವನ ಕುಟುಂಬಕ್ಕೆ ಸೇರಿದ ನೋಬದ ಬೇರೆ ಎಲ್ಲಾ ಯಾಜಕರೊಡನೆ ಕರೇ ಕಳುಹಿಸಿದನು. ಅವರೆಲ್ಲರೂ ಅರಸನ ಸನ್ನಿಧಿಗೆ ಬರಲು ಅರಸನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ರಾಜನಾದ ಸೌಲನು ಯಾಜಕನನ್ನು ತನ್ನ ಹತ್ತಿರಕ್ಕೆ ಕರೆತರಲು ಕೆಲವು ಜನರಿಗೆ ಅಪ್ಪಣೆಕೊಟ್ಟನು. ಸೌಲನು, ಅಹೀಟೂಬನ ಮಗನಾದ ಅಹೀಮೆಲೆಕನನ್ನೂ ಅವನ ಎಲ್ಲ ಬಂಧುಗಳನ್ನೂ ಕರೆತರಲು ಅವರಿಗೆ ಹೇಳಿದನು. ಅಹೀಮೆಲೆಕನ ಬಂಧುಗಳು ನೋಬಿನಲ್ಲಿ ಯಾಜಕರಾಗಿದ್ದರು. ಅವರೆಲ್ಲ ರಾಜನ ಹತ್ತಿರಕ್ಕೆ ಬಂದರು. ಅಧ್ಯಾಯವನ್ನು ನೋಡಿ |