Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:5 - ಕನ್ನಡ ಸಮಕಾಲಿಕ ಅನುವಾದ

5 ಆದರೆ ಗಾದನೆಂಬ ಪ್ರವಾದಿಯು ದಾವೀದನಿಗೆ, “ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ,” ಎಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು, ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು” ಎಂದು ಹೇಳಿದ್ದರಿಂದ ಅವನು ಹೆರೆತ್ ಅರಣ್ಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ನಾಡಿಗೆ ಹೋಗು,” ಎಂದು ಹೇಳಿದ್ದರಿಂದ ಅವನು ಹೆರೆತ್ ಮರುಭೂಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಗಾದ್‍ಪ್ರವಾದಿಯು ದಾವೀದನಿಗೆ - ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು ಎಂದು ಹೇಳಿದದರಿಂದ ಅವನು ಹೆರೆತ್ ಅರಣ್ಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಗಾದ್ ಪ್ರವಾದಿಯು ದಾವೀದನಿಗೆ, “ನೀನು ಕೋಟೆಯಲ್ಲಿರಬೇಡ. ಯೆಹೂದ್ಯರ ದೇಶಕ್ಕೆ ಹೋಗು” ಎಂದು ಹೇಳಿದನು. ಆದ್ದರಿಂದ ದಾವೀದನು ಹೆರೆತ್ ಅರಣ್ಯಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:5
8 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನೂ ಹಿಡಿದ ಲೇವಿಯರನ್ನು ದಾವೀದನೂ, ಅರಸನ ದರ್ಶಿಯಾದ ಗಾದನೂ, ಪ್ರವಾದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ, ಯೆಹೋವ ದೇವರ ಆಲಯದಲ್ಲಿ ನಿಲ್ಲಿಸಿದನು. ಏಕೆಂದರೆ ಯೆಹೋವ ದೇವರ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹೀಗೆ ಇತ್ತು.


ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯವರೆಗೆ ಅವನ ಸಮಸ್ತ ಆಳಿಕೆಯೂ, ಅವನ ಪರಾಕ್ರಮವೂ, ಅವನ ಮೇಲೆಯೂ, ಇಸ್ರಾಯೇಲಿನ ಮೇಲೆಯೂ, ಬೇರೆ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಸಂಭವಿಸಿದ ಘಟನೆಗಳು,


ಆಗ ಯೆಹೋವ ದೇವರು ದಾವೀದನ ದರ್ಶಿಯಾದ ಗಾದನಿಗೆ,


ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದನೆಂಬ ಪ್ರವಾದಿಗೆ ಯೆಹೋವ ದೇವರ ವಾಕ್ಯ ಬಂದು ಅವನಿಗೆ,


ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ, ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು.


ದಾವೀದನು ಕೋಟೆ ಸ್ಥಳದಲ್ಲಿ ಇದ್ದನು, ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.


ದೇವರೇ, ನನ್ನ ದೇವರು ನೀವೇ, ನಿಮ್ಮನ್ನು ಕುತೂಹಲದಿಂದ ಹುಡುಕುತ್ತಿದ್ದೇನೆ. ನಾನು ನಿಮಗಾಗಿ ದಾಹಗೊಂಡಿದ್ದೇನೆ. ನೀರಿಲ್ಲದೆ ಭೂಮಿಯಲ್ಲಿದ್ದವನು ಹೇಗೆ ನೀರಿಗಾಗಿ ಹಾತೊರೆವಂತೆ ನನ್ನ ಇಡೀ ಸರ್ವಸ್ವವೂ ನಿಮಗಾಗಿ ದಾಹಗೊಂಡಿರುತ್ತದೆ. ನಾನು ನಿಮ್ಮನ್ನೇ ಅಪೇಕ್ಷಿಸುತ್ತಿದ್ದೇನೆ.


ದಾವೀದನು ಕೋಟೆ ಸ್ಥಳದಲ್ಲಿ ಇದ್ದನು, ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು