1 ಸಮುಯೇಲ 22:6 - ಕನ್ನಡ ಸಮಕಾಲಿಕ ಅನುವಾದ6 ಒಂದು ದಿನ ದಾವೀದನೂ ಅವನ ಸಂಗಡ ಇದ್ದವರೂ ಅಡಗಿಕೊಂಡಿದ್ದಾರೆ ಎಂಬ ವರ್ತಮಾನವನ್ನು ಸೌಲನು ಕೇಳಿದನು. ಆಗ ಅವನು ಗಿಬೆಯದ ಗುಡ್ಡದಲ್ಲಿ ಒಂದು ಪಿಚುಲ ವೃಕ್ಷದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು. ಅವನ ಸೇವಕರೆಲ್ಲರು ಸುತ್ತಲೂ ನಿಂತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಒಂದು ದಿನ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಬರ್ಜಿಯನ್ನು ಹಿಡಿದುಕೊಂಡು, ಗಿಬೆಯ ಗುಡ್ಡದ ಪಿಚುಲ ವೃಕ್ಷದ ಕೆಳಗೆ ಕುಳಿತುಕೊಂಡಿರಲು ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳವು ತಿಳಿದುಬಂದಿದೆ ಎಂಬ ಸುದ್ದಿಯು ಅವನಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಒಂದು ದಿನ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಭರ್ಜಿಯನ್ನು ಹಿಡಿದುಕೊಂಡು ಗಿಬೆಯ ಗುಡ್ಡದ ಪಿಚುಲವೃಕ್ಷದ ಕೆಳಗೆ ಕುಳಿತುಕೊಂಡನು. “ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳ ಗೊತ್ತಾಗಿದೆ,” ಎಂಬ ಸುದ್ದಿ ಅವನಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಒಂದು ದಿವಸ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಬರ್ಜಿಯನ್ನು ಹಿಡಿದುಕೊಂಡು ಗಿಬೆಯ ಗುಡ್ಡದ ಪಿಚುಲವೃಕ್ಷದ ಕೆಳಗೆ ಕೂತುಕೊಂಡಿರಲು ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳವು ಗೊತ್ತಾಗಿದೆ ಎಂಬ ಸುದ್ದಿಯು ಅವನಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದಾವೀದನ ಮತ್ತು ಅವನ ಜನರ ಬಗ್ಗೆ ಜನರು ತಿಳಿದಿದ್ದಾರೆಂಬುದು ಸೌಲನಿಗೆ ಗೊತ್ತಾಯಿತು. ಗಿಬೆಯ ಬೆಟ್ಟದ ಮೇಲಿನ ಮರದ ಕೆಳಗೆ ಸೌಲನು ಕುಳಿತಿದ್ದನು. ಸೌಲನ ಕೈಯಲ್ಲಿ ಭರ್ಜಿಯಿತ್ತು. ಸೌಲನ ಅಧಿಕಾರಿಗಳೆಲ್ಲ ಅವನ ಸುತ್ತಲೂ ನಿಂತಿದ್ದರು. ಅಧ್ಯಾಯವನ್ನು ನೋಡಿ |