1 ಸಮುಯೇಲ 22:7 - ಕನ್ನಡ ಸಮಕಾಲಿಕ ಅನುವಾದ7 ಆಗ ಸೌಲನು ಸುತ್ತಲು ನಿಂತಿದ್ದ ಸೇವಕರಿಗೆ, “ಬೆನ್ಯಾಮೀನನ ಮಕ್ಕಳೇ, ಕೇಳಿರಿ. ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡೆಸುವಂತೆ ಇಷಯನ ಮಗನು ನಿಮ್ಮೆಲ್ಲರಿಗೆ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನು ಸಾವಿರಕ್ಕೆ ನಾಯಕರಾಗಿಯೂ, ನೂರಕ್ಕೆ ನಾಯಕರಾಗಿಯೂ ಮಾಡುವನೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಮಕ್ಕಳೇ ಕೇಳಿರಿ. ನೀವೆಲ್ಲರೂ ನನಗೆ ಒಳಸಂಚು ಮಾಡುವುದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಡುವನೋ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುವನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಕುಲಪುತ್ರರೇ ಕೇಳಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ಮಾಡುವುದೇಕೆ? ಜೆಸ್ಸೆಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಯೇ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುತ್ತಾನೆಯೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ - ಬೆನ್ಯಾಮೀನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ಮಾಡುವದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ ಎಲ್ಲರನ್ನೂ ಸಹಸ್ರಾಧಿಪತಿಗಳನ್ನಾಗಲಿ ಶತಾಧಿಪತಿಗಳನ್ನಾಗಲಿ ಮಾಡುವನೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸೌಲನು ತನ್ನ ಸುತ್ತಲೂ ನಿಂತಿದ್ದ ಅಧಿಕಾರಿಗಳಿಗೆ, “ಬೆನ್ಯಾಮೀನನ ಜನರೇ, ಕೇಳಿ! ಇಷಯನ ಮಗನಾದ ದಾವೀದನು ನಿಮಗೆ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಂದು ತಿಳಿದಿರುವಿರಾ? ದಾವೀದನು ನಿಮಗೆ ಸಹಸ್ರಾಧಿಪತಿಗಳಾಗಿ ಮತ್ತು ಶತಾಧಿಪತಿಗಳಾಗಿ ಬಡ್ತಿ ನೀಡುತ್ತಾನೆಂದು ನೀವು ತಿಳಿದಿರುವಿರಾ? ಅಧ್ಯಾಯವನ್ನು ನೋಡಿ |