1 ಸಮುಯೇಲ 22:8 - ಕನ್ನಡ ಸಮಕಾಲಿಕ ಅನುವಾದ8 ಇದಲ್ಲದೆ ನಿಮ್ಮಲ್ಲಿ ನನ್ನ ಮಗನು ಇಷಯನ ಮಗನ ಸಂಗಡ ಒಡಂಬಡಿಕೆ ಮಾಡಿಕೊಂಡಿದ್ದನ್ನು ನನಗೆ ಯಾವನೂ ತಿಳಿಸಲಿಲ್ಲ. ನಿಮ್ಮಲ್ಲಿ ಯಾವನಾದರೂ ನನಗೋಸ್ಕರ ಚಿಂತಿಸಿ, ನನ್ನ ಮಗನು ಈ ಹೊತ್ತು ನನ್ನ ನಿಮಿತ್ತ ಅಡಗಿಕೊಂಡಿರುವಂತೆ ನನ್ನ ಸೇವಕನನ್ನು ನನಗೆ ವಿರೋಧವಾಗಿ ಒಳಸಂಚುಮಾಡಿ ಎಬ್ಬಿಸಿದ್ದನ್ನು ಯಾವನೂ ನನಗೆ ತಿಳಿಸಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನ್ನ ಮಗನು ಇಷಯನ ಮಗನೊಡನೆ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲವಲ್ಲಾ. ನನ್ನ ಸೇವಕನು ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ, ಅವನನ್ನು ಎಬ್ಬಿಸಿದ್ದಾನೆಂಬುದನ್ನು ಒಬ್ಬನಾದರೂ ನನಗೆ ಯಾಕೆ ತಿಳಿಸಲಿಲ್ಲ? ನೀವು ನನ್ನ ಚಿಂತೆಯನ್ನೇ ಬಿಟ್ಟಿದ್ದೀರಿ” ಅಂದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನನ್ನ ಮಗನು ಜೆಸ್ಸೆಯನ ಮಗನೊಡನೆ ಒಪ್ಪಂದಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲ. ನನ್ನ ಸೇವಕನೊಬ್ಬ ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ ಅವನನ್ನು ಎತ್ತಿಕಟ್ಟಿದ್ದಾನೆಂದು ಒಬ್ಬನಾದರೂ ನನಗೆ ಏಕೆ ತಿಳಿಸಲಿಲ್ಲ? ನನ್ನ ಹಿತಚಿಂತೆ ನಿಮಗೆ ಕಿಂಚಿತ್ತೂ ಇಲ್ಲ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನ್ನ ಮಗನು ಇಷಯನ ಮಗನೊಡನೆ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲವಲ್ಲಾ; ನನ್ನ ಸೇವಕನು ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ ಅವನನ್ನು ಎಬ್ಬಿಸಿದನೆಂದು ಒಬ್ಬನಾದರೂ ನನಗೆ ಯಾಕೆ ತಿಳಿಸಲಿಲ್ಲ; ನೀವು ನನ್ನ ಚಿಂತೆಯನ್ನೇ ಬಿಟ್ಟಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀವು ನನ್ನ ವಿರುದ್ಧವಾಗಿ ಸಂಚುನಡೆಸುತ್ತಿರುವಿರಿ! ನೀವು ರಹಸ್ಯಯೋಜನೆಗಳನ್ನು ಮಾಡಿದ್ದೀರಿ. ನನ್ನ ಮಗ ಯೋನಾತಾನನ ಬಗ್ಗೆ ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ! ಅವನು ಇಷಯನ ಮಗನ ಜೊತೆ ಒಪ್ಪಂದ ಮಾಡಿಕೊಂಡಿದ್ದಾನೆಂದು ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ! ನಿಮ್ಮಲ್ಲಿ ಒಬ್ಬರೂ ನನ್ನ ಬಗ್ಗೆ ಚಿಂತಿಸುವುದಿಲ್ಲ! ನನ್ನ ಮಗ ಯೋನಾತಾನನು ದಾವೀದನನ್ನು ಪ್ರೋತ್ಸಾಹಿಸಿದ್ದಾನೆಂದು ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ. ಅಡಗಿಕೊಂಡು ನನ್ನ ಮೇಲೆ ಆಕ್ರಮಣ ಮಾಡುವಂತೆ ನನ್ನ ಸೇವಕನಾದ ದಾವೀದನಿಗೆ ಯೋನಾತಾನನು ಹೇಳಿಕೊಟ್ಟಿದ್ದಾನೆ! ಈಗ ದಾವೀದನು ಮಾಡುತ್ತಿರುವುದು ಅದನ್ನೇ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |